Homeಕರ್ನಾಟಕಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿ ವಿಚಾರಣೆ ನಡೆಸಿದ ಲೋಕಾಯುಕ್ತ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿ ವಿಚಾರಣೆ ನಡೆಸಿದ ಲೋಕಾಯುಕ್ತ

- Advertisement -
- Advertisement -

ಬೆಂಗಳೂರಿನ ಗಂಗೇನಹಳ್ಳಿ (ಗಂಗಾನಗರ)ಯ 1 ಎಕರೆ 11 ಗುಂಟೆ ಜಾಗವನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಕುಮಾರಸ್ವಾಮಿಗೆ ಸಮನ್ಸ್ ನೀಡಿದ್ದರು. ಹಾಗಾಗಿ, ಶುಕ್ರವಾರ ಸಂಜೆ 5.40ಕ್ಕೆ ತನಿಖಾಧಿಕಾರಿ ಬಸವರಾಜ ಮಗ್ದುಂ ಎದುರು ಕುಮಾರಸ್ವಾಮಿ ಹಾಜರಾಗಿದ್ದರು.

ವರದಿಗಳ ಪ್ರಕಾರ, ಸುಮಾರು ಒಂದು ಮುಕ್ಕಾಲು ಗಂಟೆ ಕುಮಾರಸ್ವಾಮಿಯನ್ನು ವಿಚಾರಣೆ ನಡೆಸಲಾಗಿದೆ. ಕೆಲವು ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ಕೆಲವು ಪ್ರಶ್ನೆಗಳಿಗೆ “ನನಗೇ ಗೊತ್ತಿಲ್ಲ” ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆ.21ರಂದು ಯಡಿಯೂರಪ್ಪ ಕೂಡ ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್ ಯಡಿಯೂರಪ್ಪ ಅವರು ಗಂಗಾನಗರದ ಬಳಿಯ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿ, ಕುಮಾರಸ್ವಾಮಿಯವರ ಬಾಮೈದನ ಹೆಸರಿಗೆ ನೋಂದಣಿ ಮಾಡಿದ್ದರು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭಿಸಿದ್ದ ಡಿನೋಟಿಫಿಕೇಷನ್ ಪ್ರಕ್ರಿಯೆಯನ್ನು ಯಡಿಯೂರಪ್ಪ ಅವಧಿಯಲ್ಲಿ ಮುಕ್ತಾಯಗೊಳಿಸಲಾಗಿತ್ತು ಎಂಬ ಆರೋಪವಿದೆ.

ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ವಿರುದ್ದ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ : ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ಎಂದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...