Homeಮುಖಪುಟಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

ಅಕ್ರಮ ಜೈಲುವಾಸ: ಅರ್ಜಿದಾರರಿಗೆ ತಲಾ 50 ಸಾವಿರ ಪರಿಹಾರಕ್ಕೆ ಆದೇಶ!

- Advertisement -
- Advertisement -

ಎರಡು ಕುಟುಂಬಗಳ ನಡುವಿನ ಗಲಾಟೆ ಪ್ರಕರಣವೊಂದರಲ್ಲಿ ಆರು ದಿನಗಳ ಅಕ್ರಮ ಸೆರೆವಾಸಕ್ಕೆ ಗುರಿಯಾಗಿದ್ದ ಇಬ್ಬರು ಅರ್ಜಿದಾರರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಬಾಂಬೆ ಹೈಕೋರ್ಟ್‌ನ ಔರಂಗಬಾದ್ ದ್ವಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

ನ್ಯಾಯಮೂರ್ತಿ ತಾನಾಜಿ ವಿ ನಲವಾಡ ಮತ್ತು ಮುಕುಂದ್ ಜಿ ಸೇವಲಿಕರ್ ಪೀಠದ ಮುಂದೆ ಅರುಣ್ ತಗಡ್ ಮತ್ತು ಶೈಲೇಂದ್ರ ತಗಡ್ ಅಕ್ರಮ ಜೈಲುವಾಸಕ್ಕೆ ಕಾರಣರಾದವರಿಂದ ತಮಗೆ 5 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕೆಂದು ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ಈ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ, ಈ ಪ್ರಕರಣದ ಕುರಿತು ರಾಜ್ಯ ಸರ್ಕಾರ ಸೂಕ್ತ ಸ್ಪಷ್ಟೀಕರಣ ನೀಡಬೇಕು. ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಈ ಸಂಬಂಧ ಸ್ಪಷ್ಟ ಸೂಚನೆಗಳನ್ನು ಕೊಡಬೇಕೆಂದು ನಿರ್ದೇಶನ ನೀಡಿದೆ.

28 ಜನವರಿ 2013ರಂದು ಬೀಡ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ, 35 ವರ್ಷದ ಮಹಿಳೆಯೊಬ್ಬರು, “ತನಗೆ ನೀರಿನಲ್ಲಿ ಎತ್ತುಗಳು ಮತ್ತು ಗಾಡಿಯನ್ನು ಇಳಿಸಲು ಅವಕಾಶ ನೀಡದೆ, ನನ್ನ ಕುಟುಂಬದ ಸದಸ್ಯರೊಂದಿಗೆ ಜಗಳ ತೆಗೆದು ತನ್ನ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು.

ಇದನ್ನೂ ಓದಿ: ’ಆಝಾದಿ’ ಘೋಷಣೆ ಕೂಗಿದ್ದಾರೆಂದು 6 ವಿದ್ಯಾರ್ಥಿಗಳ ಮೇಲೆ ದೇಶದ್ರೋಹಿ ಪ್ರಕರಣ ದಾಖಲು

30 ಜನವರಿ 2013ರಂದು ಪೊಲೀಸರು ಅರ್ಜಿದಾರರ ವಿರುದ್ಧ ಐಪಿಸಿ 323, 324, 504 ಮತ್ತು 306 ಸೆಕ್ಷನ್ ಅಡಿ ಕೇಸು ದಾಖಲಿಸಿ ಬಂಧಿಸಿದ್ದರು. ನಂತರ ಆರೋಪಿಗಳನ್ನು ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳಿಂದ ವೈಯಕ್ತಿಕ ಬಾಂಡ್ ಮತ್ತು ಭದ್ರತೆ ಪಡೆದು ಬಿಡುಗಡೆ ಮಾಡಿದ್ದರು.

ಇದಾದ ಬಳಿಕ ಪೊಲೀಸರು ಎರಡನೇ ಬಾರಿಯೂ ಆರೋಪಿಗಳನ್ನು ಬಂಧಿಸಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಎಕ್ಸಿಕ್ಯೂಟೀವ್ ಮ್ಯಾಜಿಸ್ಟ್ರೇಟ್ ಆರೋಪಿಗಳಿಗೆ ತಲಾ 25 ಸಾವಿರ ರೂ.ಗಳ ಭದ್ರತೆ ನೀಡಬೇಕೆಂದು ಮಧ್ಯಂತರ ನಿರ್ದೇಶನ ನೀಡಿದ್ದರು.

ಇದನ್ನು ಪ್ರಶ್ನಿಸಿ ಅರ್ಜಿದಾರರು 31 ಜನವರಿ 2013ರಲ್ಲಿ ರಿಟ್ ಸಲ್ಲಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರ ಮುಂದೆ ಲಿಖಿತ ಮನವಿ ಸಲ್ಲಿಸಿದ್ದರು. ಆದರೂ 30 ಜನವರಿ 2013 ರಿಂದ ಫೆಬ್ರವರಿ 5, 2013 ರವರೆಗೂ ಅರ್ಜಿದಾರರನ್ನು ಅಕ್ರಮವಾಗಿ ಜೈಲಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ’ಕನ್ನಡ ಪ್ರಭ’ದ ಮಾಜಿ ಉದ್ಯೋಗಿಯ ಡೆತ್‌‌‌ ನೋಟ್: ತನಿಖೆಗೆ ಆಗ್ರಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದಿ ಎನ್.ಆರ್. ಥೋರಟ್, “ಪೊಲೀಸರು ಮತ್ತು ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವಶ್ಯಕ ಆದೇಶ ಹೊರಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಅರ್ಜಿದಾರರು ಅಕ್ರಮವಾಗಿ ಜೈಲಲ್ಲಿ ಇರುವಂತಾಯಿತು. ಅರ್ಜಿದಾರರು ಅಪರಾಧಿಗಳಲ್ಲ. ಶೈಲೇಂದ್ರ ತಗಡ್ ಈ ಅವಧಿಯಲ್ಲಿ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅರುಣ್ ತಗಡ್‌ ಸ್ಥಳೀಯವಾಗಿ ಹೆಸರು ಮಾಡಿದ್ದರು ಮತ್ತು ಗೌರವಾನ್ವಿತ ವ್ಯಕ್ತಿಯಾಗಿದ್ದರು. ಇವರ ಬಂಧನ ಮತ್ತು ಅಕ್ರಮ ಸೆರೆವಾಸ ಕಾನೂನುಬಾಹಿರವಾಗಿದೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ವಾದಿಸಿದ್ದರು.

ವಾದವನ್ನು ಆಲಿಸಿದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು, “ಈ ಪ್ರಕರಣದ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು. ಜವಾಬ್ದಾರಿಗಳೇನೆಂಬುದನ್ನು ತಿಳಿಸಬೇಕು. ಜೊತೆಗೆ ಪೊಲೀಸ್ ಇಲಾಖೆಯ ಮೇಲಧಿಕಾರಿಗಳು ಕೆಳಹಂತದ ಪೊಲೀಸರಿಗೆ ಆಗತ್ಯ ಸೂಚನೆಗಳನ್ನು ನೀಡಬೇಕೆಂದು” ಪೀಠ ನಿರ್ದೇಶನ ನೀಡಿದೆ ಎಂದು ದಿವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...