Homeಕರ್ನಾಟಕಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

ಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಸಂಸತ್ತಿನ ಭದ್ರತೆ ಉಲ್ಲಂಘಿಸಿದವರಿಗೆ ಪಾಸ್ ನೀಡಿದ ಆರೋಪದಲ್ಲಿ ಸಿಲುಕಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರ ಸಹೋದರ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ನೂರಾರು ಮರಗಳನ್ನು ಅನಧಿಕೃತವಾಗಿ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ವಿರುದ್ಧ ದೂರು ದಾಖಲಾಗಿದ್ದು, ಬೇಲೂರು ತಹಶೀಲ್ದಾರ್ ಮಮತಾ ಅವರು ಗ್ರಾಮಕ್ಕೆ ತೆರಳಿ ನಡೆಸಿದ ರಹಸ್ಯ ಕಾರ್ಯಾಚರಣೆ ವೇಳೆ ಸರ್ಕಾರಿ ಜಮೀನಿನಲ್ಲಿ ನಡೆದ ಕೃತ್ಯ ಬೆಳಕಿಗೆ ಬಂದಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಬೆಲೆಬಾಳುವ ನೂರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದರ ಸಹೋದರನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಘಟನೆ ಕುರಿತು ವಿವರವಾದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ‘ಆರೋಪಿಯ ರಾಜಕೀಯ ಪ್ರಭಾವ ಲೆಕ್ಕಿಸದೆ ಕಾನೂನಿನ ಪ್ರಕಾರ ತ್ವರಿತ ಕ್ರಮ ಕೈಗೊಳ್ಳುವುದಾಗಿ’ ಅವರು ಭರವಸೆ ನೀಡಿದ್ದಾರೆ. ಆದರೆ, ಎಫ್ಐಆರ್ ದಾಖಲಾಗಿ 10 ದಿನ ಕಳೆದರೂ ಇವರೆಗೂ ವಿಕ್ರಮ್‌ನನ್ನು ಬಂಧಿಸಿಲ್ಲ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಕಾಫಿ ಮತ್ತು ಶುಂಠಿ ಕೃಷಿ ಮಾಡುತ್ತಿದ್ದಾರೆ. ತಮ್ಮ 5 ಎಕರೆ ಸೇರಿದಂತೆ ಸರ್ಕಾರದ 12 ಎಕರೆ ಜಮೀನಿನಲ್ಲಿದ್ದ ನೂರಾರು ನಿಗದಿತ ಮರಗಳನ್ನು ಅನಧಿಕೃತವಾಗಿ ಕಡಿದು ಕಳ್ಳಸಾಗಾಣೆ ಮಾಡುವಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಅರಣ್ಯ ಅಧಿಕಾರಿಗಳಿಂದ ಅಗತ್ಯ ಅನುಮತಿಗಳ ಪಡೆದುಕೊಳ್ಳದೆ ಇರುವುದರಿಂದ, ಈ ಘಟನೆಯು ಪರಿಸರ ಸಂರಕ್ಷಣೆ ಮತ್ತು ಕಾನೂನು ಕಾರ್ಯವಿಧಾನಗಳ ಅನುಸರಣೆಯ ಉಲ್ಲಂಘನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಬೆಲೆಬಾಳುವ ಮರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಕಡಿದು ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಮರ ಕಡಿದಿರುವ 4 ಎಕರೆ ಜಮೀನನ್ನು ಬೇಲೂರು ತಾಲೂಕಿನ ಇಬ್ಬರು ವ್ಯಕ್ತಿಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮುಂದಾಗಿದ್ದು, ಆ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ವಿಕ್ರಮ ಸಿಂಹ ಇಬ್ಬರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.

ಖಾಸಗಿ ಮಾಧ್ಯಮವೊಂದರ ಜತೆ ಮಾತನಾಡಿರುವ ಬೇಲೂರು ತಹಶೀಲ್ದಾರ್ ಮಮತಾ, ‘ವಿಕ್ರಮ್ ಸಿಂಹ ಎಂಬ ವ್ಯಕ್ತಿ ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಐದು ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವುದು ನಿಜ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳ ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನು ಕಡಿಯಲು ಯಾರಿಗೂ ಅವಕಾಶವಿಲ್ಲ, ಏಕೆಂದರೆ ಇವುಗಳು ನಿಗದಿತ ಮರಗಳು – ಸರ್ಕಾರದ ಆಸ್ತಿ. ತನಿಖೆ ಪ್ರಾರಂಭಿಸಲಾಗಿದೆ; ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿಲ್ಲ’ ಎಂದು ಹೇಳಿದ್ದಾರೆ.

ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಖಂಡ್ರೆ:

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ‘ನಾನು ಹಾಸನ ಸಿಸಿಎಫ್‌ನಿಂದ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದೇನೆ. ಪ್ರಾಥಮಿಕ ವರದಿಗಳ ಪ್ರಕಾರ, ನೂರಾರು ನಿಗದಿತ ಮರಗಳನ್ನು ಅಕ್ರಮವಾಗಿ ಕಡಿದುಹಾಕಿದ್ದಕ್ಕಾಗಿ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಪಿಯ ರಾಜಕೀಯ ಸಂಬಂಧಗಳು ಏನೇ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಆರೋಪಿ ವಿಕ್ರಮಸಿಂಹ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಎಂಬುದು ನಿಮಗೆ ತಿಳಿದಿದೆಯೇ ಎಂದು ಚಿತ್ರದುರ್ಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆರೋಪಿ ಬಿಜೆಪಿ ಸಂಸದರ ಸಹೋದರ ಎಂದು ನನಗೆ ತಿಳಿದಿರಲಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅನುಮತಿಯಿಲ್ಲದೆ ನೂರಾರು ಮರಗಳನ್ನು ಕಡಿಯುವುದು ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ’ ಎಂದರು.

ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಾಗ್ದಾಳಿ:

ಅಕ್ರಮಮವಾಗಿ ಮರ ಕಡಿದು ಸಾಗಾಣೆ ಮಾಡಿರುವ ಬಗ್ಗೆ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ’ ಎಂದು ಟೀಕಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಡಿಯರ್ ಬಿಜೆಪಿ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...