Homeಕರ್ನಾಟಕಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

- Advertisement -
- Advertisement -

ಅನುಮತಿ ಪಡೆಯದೆ ಅಕ್ರಮವಾಗಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು, ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ದೂರು ದಾಖಲು ಮಾಡಿದ್ದರು. ಈ ದೂರಿನ ಮೇರೆಗೆ ಇದೀಗ ಎಫ್​ಐಆರ್​(FIR) ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್​ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸ್ಥಳೀಯರು ಧರಣಿ ನಡೆಸಿದ್ದರು. ಪ್ರತಿಭಟನಾ ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ, ಯಲಹಂಕ ತಹಶೀಲ್ದಾರ್ ಅನಿಲ್ ದೂರು ದಾಖಲಿಸಿದ್ದರು.

ಗಣಿಗಾರಿಕೆ ವಿರುದ್ಧ ಹುಣಸಮಾರನಹಳ್ಳಿ ಗ್ರಾಮಸ್ಥರಿಂದ ಧರಣಿ

ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...