Homeಮುಖಪುಟಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

- Advertisement -
- Advertisement -

ನಾಯಕತ್ವ ಬದಲಾವಣೆ ಕೂಗಿನಿಂದ ಬಸವಳಿದು ಕೊನೆಗೂ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ಇನ್ನೆರೆಡು ವರ್ಷ ಬಿ.ಎಸ್. ಯಡಿಯೂರಪ್ಪನವರೆ ಸಿಎಂ ಎಂಬುದು ಸ್ಪಷ್ಟವಾಗತೊಡಗಿದೆ. ಇದರಿಂದ ನಿಟ್ಟುಸಿರು ಬಿಡುವ ಮೊದಲೆ ಬಿಎಸ್‌ವೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಳೆಯ ಕೇಸ್​ನಿಂದ ಸಿಎಂ ಯಡಿಯೂರಪ್ಪನವರಿಗೆ ಹೊಸ ಸಮಸ್ಯೆ ಶುರುವಾಗಿದೆ. ಅಕ್ರಮ‌ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡ‌ ಗುರುತರ ಆರೋಪ ಯಡಿಯೂರಪ್ಪನವರ ಮೇಲಿದೆ.

ಈ ಪ್ರಕರಣದ ಕುರಿತು ಸಿಎಂ ಯಡಿಯೂರಪ್ಪ ಮತ್ತವರ ಕುಟುಂಬದವರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಿದ್ದಾರೆ. ಇಂದು ನವದೆಹಲಿಯ ಇಡಿ ಕಚೇರಿಗೆ ತೆರಳಿರುವ ಟಿ.ಜೆ. ಅಬ್ರಹಾಂ, PMLA (ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್) ಅಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ದೂರು ದಾಖಲಾಗಿತ್ತು. ಈ ಕುರಿತು ವಾಟ್ಸಾಪ್ ಚಾಟ್ ಒಂದು ಲೀಕ್ ಹಾಕಿ ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದನ್ನು ನಿರಂತರವಾಗಿ ವರದಿ ಮಾಡಿದ ಪವರ್ ಟಿವಿ ಮೇಲೆ ದಾಳಿ ನಡೆಸಲಾಗಿತ್ತು.

ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಮಗಳು ಪದ್ಮಾವತಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಮತ್ತು ಡೆವೆಲಪರ್ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಟಿ.ಜೆ ಅಬ್ರಹಾಂ ದೂರು ನೀಡಿದ್ದಾರೆ.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...