Homeರಾಷ್ಟ್ರೀಯಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹರಿಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರಿಗೆ ದೆಹಲಿ ಕೋರ್ಟ್ ಶುಕ್ರವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶ ನೀಡಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಚೌಟಾಲಾ ಅವರಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿ, ಅವರ ನಾಲ್ಕು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಆದೇಶಿಸಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಚೌಟಾಲಾ ಅವರ ವಕೀಲರು ಅವರ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಸೌಮ್ಯ ಶಿಕ್ಷೆಯನ್ನು ವಿಧಿಸಲು ನ್ಯಾಯಾಲಯವನ್ನು ಕೋರಿದ್ದರು. ಆದರೆ, ಅನಾರೋಗ್ಯ ಮತ್ತು ವಯಸ್ಸಿನ ಆಧಾರದ ಮೇಲೆ ರಿಯಾಯಿತಿ ನೀಡುವಂತೆ ಚೌಟಾಲಾ ಅವರ ವಕೀಲರ ವಾದಗಳನ್ನು ಸಿಬಿಐ ವಿರೋಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೌಟಾಲಾ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಸಿಬಿಐ ಒತ್ತಾಯಿಸಿದ್ದು, ಇದು ಸಮಾಜಕ್ಕೆ ಸಂದೇಶ ರವಾನಿಸಲಿದೆ ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಹರಿಯಾಣದ ಖಾಸಗಿ ಉದ್ಯೋಗದಲ್ಲಿ ಸ್ಥಳೀಯರಿಗೆ 75% ಮೀಸಲಾತಿ: ಹೈಕೋರ್ಟ್ ತಡೆ ಹಿಂಪಡೆದ ಸುಪ್ರೀಂಕೋರ್ಟ್

ಈ ಪ್ರಕರಣದಲ್ಲಿ, ಸಾರ್ವಜನಿಕ ವ್ಯಕ್ತಿಗೆ ಕನಿಷ್ಠ ಶಿಕ್ಷೆಯನ್ನು ನೀಡುವುದು ತಪ್ಪು ಸಂದೇಶ ನೀಡಿದಂತಾಗುತ್ತದೆ. ಅವರು ಶುದ್ಧ ಹಸ್ತರಲ್ಲ. ಅವರಿಗೆ ಶಿಕ್ಷೆಯಾದ ಎರಡನೇ ಪ್ರಕರಣ ಇದಾಗಿದೆ ಎಂದು ಸಿಬಿಐ ಹೇಳಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ), ಮಾರ್ಚ್ 26, 2010 ರಂದು ಚೌಟಾಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. 1993 ಮತ್ತು 2006 ರ ನಡುವೆ ಏಳು ಬಾರಿ ಶಾಸಕರಾಗಿದ್ದ ಅವರು 6.09 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ ಎಂದು ಸಿಬಿಐ ಪ್ರತಿಪಾದಿಸಿದೆ.

ಚೌಟಾಲಾ ಅವರನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯವು, ಆರೋಪಿಯು ಅಕ್ರಮ ಆದಾಯದ ಮೂಲಕ 103%ದಷ್ಟು ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ ಎಂದು ಹೇಳಿದೆ. ಭ್ರಷ್ಟಾಚಾರ ತಡೆ (PC) ಕಾಯಿದೆಯ 13(2) ಜೊತೆಗೆ ಹೇಳಿರುವ ಸೆಕ್ಷನ್ 13(1)(e) ಅಡಿಯಲ್ಲಿ ಚೌಟಾಲಾ ತಪ್ಪಿತಸ್ಥರೆಂದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

JBT ಶಿಕ್ಷಕರ ನೇಮಕಾತಿ ಹಗರಣದಲ್ಲಿ 2013 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥ ಎಂದು ಘೋಷಿಸಲ್ಪಟ್ಟ ನಂತರ ಭ್ರಷ್ಟಾಚಾರದ ಆರೋಪದ ಮೇಲೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ 10 ವರ್ಷಗಳ ಶಿಕ್ಷೆಯನ್ನು ವಿಧಿಸಿದ ನಂತರ ಚೌಟಾಲಾ ಅವರ ಎರಡನೇ ದೋಷಾರೋಪಣೆ ಇದಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎಎಪಿ ನಾಯಕರಿಂದ ಪ್ರತಿಭಟನೆ; ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಿಗಿ ಭದ್ರತೆ

0
ಎಎಪಿಯ ರಾಷ್ಟ್ರೀಯ ಸಂಚಾಲಕ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಪೊಲೀಸರು ಇಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೀನ್ ದಯಾಳ್...