Homeಕರ್ನಾಟಕಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

- Advertisement -
- Advertisement -

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮುಖಂಡ ಲಕ್ಷ್ಮಣ್ ಮಂಡಲಗೇರ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಭಟ್ಟು ಸತ್ಯನಾರಾಯಣ ಅವರ ಅವಧಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಗಂಭೀರ ಅಕ್ರಮಗಳು ನಡೆದಿರುವುದಾಗಿ ಆರೋಪಿಸಿದರು.

ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜಾರಿಗೆ ತಂದಿರುವ ಹುದ್ದೆ ಆಧಾರಿತ ಮೀಸಲು ಕ್ರಮದ ನಿಯಮಗಳ ಪ್ರಕಾರ ಪ್ರತಿಯೊಂದು ಹುದ್ದೆಗೆ ನಿರ್ದಿಷ್ಟ ಕ್ರಮ ಸಂಖ್ಯೆ ಇರಬೇಕು. ಹಾಗೆಯೇ ಮೀಸಲು ಪಟ್ಟಿಯಲ್ಲಿ ಭರ್ತಿಯಾದ ಹಾಗೂ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಕಡ್ಡಾಯವಾಗಿ ತೋರಿಸಬೇಕು. ಆದರೆ 2019ರ ಪಟ್ಟಿಯಲ್ಲಿ ಖಾಲಿ ಹಾಗೂ ಭರ್ತಿಯಾದ ಹುದ್ದೆಗಳ ವಿವರಗಳನ್ನು ತೋರಿಸಲಾಗಿದೆ. ಆದರೆ 2025ರ ಪಟ್ಟಿಯಲ್ಲಿ ಭರ್ತಿಯಾದ ಹುದ್ದೆಗಳನ್ನಷ್ಟೇ ತೋರಿಸಿ ಖಾಲಿ ಹುದ್ದೆಗಳ ವಿವರಗಳನ್ನು ಪ್ರಕಟಿಸಿಲ್ಲ ಯಾಕೆ ತೋರಿಸಿಲ್ಲ ಎಂಬುದನ್ನು ಪ್ರಶ್ನಿಸಿದರು.

ಈ ಹಿಂದೆ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘವು ಮೀಸಲು ಕ್ರಮ ಉಲ್ಲಂಘನೆ ಕುರಿತು ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ 63ನೇ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಪಕುಲಪತಿಗಳು ನ್ಯಾಯಾಲಯವು ವಿಶ್ವವಿದ್ಯಾಲಯದ ಮೀಸಲು ಪಟ್ಟಿಯನ್ನು ಅನುಮೋದಿಸಿದೆ ಎಂದು ಹೇಳಿ ಸಭಾ ಸದಸ್ಯರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಪ್ಪು ಸಂದೇಶ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನೊಂದೆಡೆ, University Grants Commission ನಿಯಮಗಳಿಗೆ ವಿರುದ್ಧವಾಗಿ ಕೆಲ ಅಭ್ಯರ್ಥಿಗಳನ್ನು ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಯುಜಿಸಿ ನಿಯಮಗಳ ಪ್ರಕಾರ ಸಹ ಪ್ರಾಧ್ಯಾಪಕರಾಗಲು ಕನಿಷ್ಠ ಎಂಟು ವರ್ಷಗಳ ಸಹಾಯಕ ಪ್ರಾಧ್ಯಾಪಕ ಸೇವೆ ಅಗತ್ಯವಿದೆ. ಆದರೆ ಕೆಲವು ಅಭ್ಯರ್ಥಿಗಳು ಈ ಅರ್ಹತೆಗಳನ್ನು ಪೂರೈಸದೆ ಇದ್ದರೂ ನೇಮಕಗೊಂಡಿರುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಡಾ. ಬಸವರಾಜ ಕುಬಕಡ್ಡಿ ಅವರನ್ನು 2022ರ ಡಿಸೆಂಬರ್ 8ರಂದು ಕಾನೂನು ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ನೇಮಕ ಮಾಡಲಾಗಿದೆ. ಅವರು ಪಿಎಚ್‌.ಡಿ ಪದವಿಯನ್ನು 2015ರಲ್ಲಿ ಪಡೆದಿದ್ದು, ನಿಯಮಗಳ ಪ್ರಕಾರ ಅದರ ನಂತರದ ಸೇವೆಯನ್ನಷ್ಟೇ ಪರಿಗಣಿಸಬೇಕು. ಆದರೆ ಎಂಟು ವರ್ಷಗಳ ಸೇವೆ ಪೂರ್ಣಗೊಳ್ಳುವ ಮೊದಲೇ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಇನ್ನುಳಿದ ಡಾ. ಕೋಟಾ ಸಾಯಿ ಕೃಷ್ಣ ಸೇರಿದಂತೆ ಹಲವು ಉಪನ್ಯಾಸಕರ ನೇಮಕಾತಿಗಳಲ್ಲಿಯೂ UGC ಅರ್ಹತಾ ನಿಯಮಗಳನ್ನು ಪಾಲಿಸಿಲ್ಲ ಎಂಬ ಅನುಮಾನಗಳಿವೆ. ಡಾ. ಎಸ್‌. ಲಿಂಗಮೂರ್ತಿ, ಡಾ.ಜಿ.ಮಹೇಂದ್ರ, ಡಾ.ಸಂದೀಪ್, ಡಾ.ಪ್ರಮೋದ್ ಕುಮಾರ್ ಸೇರಿದಂತೆ ಹಲವರ ನೇಮಕಾತಿಗಳಲ್ಲಿಯೂ ಅಕ್ರಮ ನಡೆದಿವೆ ಎಂಬ ಪ್ರಶ್ನೆಗಳು ಮೂಡುತ್ತಿದೆ.

ಅದೇ ವೇಳೆ ಡಾ. ಅಮರೇಂದ್ರ ಮತ್ಸ ಅವರು ಒಂದು ಶಿಕ್ಷಣ ಸಂಸ್ಥೆಯಿಂದ ತಂದ ಸರ್ಟಿಫಿಕೇಟ್ ನಲ್ಲಿ ಅರ್ಜಿ ಸಲ್ಲಿಕೆ, ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆ, ಹುದ್ದೆಗೆ ಸೇರ್ಪಡೆ ಸೇರಿದಂತೆ ಒಂದೇ ದಿನದಲ್ಲಿ ನಡೆದಿರುವುದು ತಮಾಷೆ ಅನಿಸುತ್ತಿದೆ. ಈ ತರ ನಡೆಯಲು ಎಲ್ಲಿಯಾದರೂ ಸಾಧ್ಯವೇ ? ಇದೆಲ್ಲ ವಿಶ್ವವಿದ್ಯಾಲಯದ ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ನಡೆದಿರುವ ಮೀಸಲು ಕ್ರಮ ಉಲ್ಲಂಘನೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ಆಗಬೇಕೆಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜೇಂದ್ರ ರಾಜವಾಳ, ಮೈಲಾರಿ ದೊಡ್ಡಮನಿ, ಸಂತೋಷ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...