ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಎಪಿ ನಾಯಕ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕಣದ ವಿಚಾರಣೆಯು ವಿಳಂಬವಾಗುತ್ತಿದ್ದು, ಜೊತೆಗೆ ಆರೋಪಿ ದೀರ್ಘ ಕಾಲದಿಂದ ಸೆರೆವಾಸದಲ್ಲಿದ್ದಾರೆ ಎಂಬ ವಿಚಾರವನ್ನು ನ್ಯಾಯಾಲಯ ಉಲ್ಲೇಖಿಸಿದೆ.
ಸತ್ಯೇಂದ್ರ ಜೈನ್ ಅವರಿಗೆ ಸಂಬಂಧಿಸಿರುವ ನಾಲ್ಕು ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ 2022ರ ಮೇ 30ರಂದು ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದಾಗ್ಯೂ, ಅವರು 2023ರ ಮೇ ಮತ್ತು 2024ರ ಮಾರ್ಚ್ ನಡುವೆ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ವಿಚಾರಣೆಯಲ್ಲಿನ ವಿಳಂಬ ಮತ್ತು 18 ತಿಂಗಳ ಸುದೀರ್ಘ ಸೆರೆವಾಸವನ್ನು ಪರಿಗಣಿಸಿ ಮತ್ತು ಪ್ರಕರಣದ ತನಿಖೆ ಪ್ರಾರಂಭಿಸಲು ಬಹಳ ಸಮಯ ತೆಗೆದುಕೊಳ್ಳುತ್ತದೆ ಎಂಬ ಅಂಶವನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬಂದಿದ್ದು, ಆರೋಪಿಯು ಜಾಮೀನಿಗೆ ಅರ್ಹರಾಗಿದ್ದಾರೆ” ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.
ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿಯೊಂದಿಗೆ 50,000 ರೂಪಾಯಿ ಜಾಮೀನಿನ ಮೇಲೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯಿದೆಯಡಿ 2017ರಲ್ಲಿ ಕೇಂದ್ರೀಯ ತನಿಖಾ ದಳವು(ಸಿಬಿಐ) ಸತ್ಯೇಂದ್ರ ಜೈನ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಇಡಿ ಪ್ರಕರಣದ ದಾಖಲಿಸಿತ್ತು.
ವಿಚಾರಣಾ ನ್ಯಾಯಾಲಯವು ಈ ಹಿಂದೆ 2022ರ ನವೆಂಬರ್ 17ರಂದು ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಅವರು ದೆಹಲಿ ಹೈಕೋರ್ಟ್‌ನಲ್ಲಿ ಆದೇಶವನ್ನು ಪ್ರಶ್ನಿಸಿದ್ದರು. 2023ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡಾ ಅವರಿಗೆ ಜಾಮೀನು ನಿರಾಕರಿಸಿತ್ತು.
ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ
ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ


