Homeಕರ್ನಾಟಕಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

10 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸುವ ಹೇಳಿಕೆ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ (ಡಿ. 8) ಹೈಕೋರ್ಟ್‌ಗೆ ತಿಳಿಸಿದೆ.

ಕಸಾಪ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ 2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಹೊರಡಿಸಿದ್ದ ಆದೇಶಕ್ಕೆ ತಡೆ ಕೋರಿ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ (ಎಜಿ) ಕೆ. ಶಶಿಕಿರಣ ಶೆಟ್ಟಿ, “ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಗಳ ಕುರಿತು ವಿಚಾರಣೆ ಪೂರ್ಣಗೊಳಿಸಲಾಗಿದೆ. ಬಾಕಿ 3 ಆರೋಪಗಳ ವಿಚಾರಣೆ ಪೂರ್ಣಗೊಳಿಸಲು 1 ವಾರ ಅಥವಾ 10 ದಿನಗಳ ಕಾಲಾವಕಾಶ ನೀಡಬೇಕು” ಎಂದು ಕೋರಿದರು. ಈ ಸಂಬಂಧ ಡಿಸೆಂಬರ್ 5 ರಂದು ವಿಚಾರಣಾಧಿಕಾರಿ ಕಳುಹಿಸಿದ್ದ ಮೆಮೊವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಆಗ ಪೀಠವು “ಒಂದು ವಾರ ಬೇಕೇ ಅಥವಾ 10 ದಿನ ಬೇಕೇ ಎಂಬುದನ್ನು ಸ್ಪಷ್ಟವಾಗಿ ತಿಳಿಸಿ, 10 ದಿನ ಎಂದಾದರೆ ಚಳಿಗಾಲದ ರಜೆಯ ನಂತರ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗುವುದು” ಎಂದರು.

ಇದಕ್ಕೆ ಅಡ್ವೊಕೇಟ್ ಜನರಲ್, 10 ದಿನಗಳ ಒಳಗೆ ವಿಚಾರಣೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು 2026ರ ಜನವರಿ 13ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಮಹೇಶ್ ಜೋಶಿ ಪರ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು “ನವೆಂಬರ್ 6ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೆಲ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಅವುಗಳನ್ನು ಆದೇಶದಿಂದ ತೆಗೆದುಹಾಕುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ” ಎಂದು ಪೀಠದ ಗಮನಕ್ಕೆ ತಂದರು. ಆ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ಪೀಠ ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...