Homeರಂಜನೆಕ್ರೀಡೆದಕ್ಷಿಣ ಆಪ್ರಿಕಾ ಏಕದಿನ ಸರಣಿಯಲ್ಲಿ ಆಡಲಿದ್ದೇನೆ: ವಿರಾಟ್‌ ಕೊಹ್ಲಿ ಪ್ರತಿಪಾದನೆ

ದಕ್ಷಿಣ ಆಪ್ರಿಕಾ ಏಕದಿನ ಸರಣಿಯಲ್ಲಿ ಆಡಲಿದ್ದೇನೆ: ವಿರಾಟ್‌ ಕೊಹ್ಲಿ ಪ್ರತಿಪಾದನೆ

- Advertisement -
- Advertisement -

ಭಾರತ ಟೆಸ್ಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಏಕದಿನ ಸರಣಿಯಲ್ಲಿ ಆಡಲಿದ್ದೇನೆ ಎಂದು ಬುಧವಾರ ಪ್ರತಿಪಾದಿಸಿದ್ದಾರೆ. ಈ ಮೂಲಕ ಅವರು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

“ನಾನು ಆಯ್ಕೆಗೆ ಸಾರ್ವಕಾಲಿಕವಾಗಿ ಲಭ್ಯವಿದ್ದೇನೆ. ವಿಶ್ರಾಂತಿಗಾಗಿ BCCI ಯೊಂದಿಗೆ ಮಾತುಕತೆ ನಡೆಸಿಲ್ಲ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಗೆ ನಾನು ಲಭ್ಯವಿದ್ದು ಮತ್ತು ಯಾವಾಗಲೂ ಲಭ್ಯವಿರಲಿದ್ದೇನೆ” ಎಂದು ದಕ್ಷಿಣ ಆಫ್ರಿಕಾ ಪ್ರವಾಸ ನಿರ್ಗಮನದ ಮೊದಲು ಪತ್ರಿಕಾಗೋಷ್ಠಿಯಲ್ಲಿ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮುಗಿದ ವಿರಾಟ್‌ ಕೊಹ್ಲಿ ಯುಗ; ಟೀಂ ಇಂಡಿಯಾ ಏಕದಿನ ತಂಡದ ನಾಯಕನಾಗಿ ರೋಹಿತ್‌ ಶರ್ಮಾ!

ಕಳೆದ ಎರಡು ದಿನಗಳಿಂದ ಗಾಯದಿಂದಾಗಿ ಟೆಸ್ಟ್ ಆಡದಿರುವ ವಿರಾಟ್‌ ಕೊಹ್ಲಿ ಮತ್ತು ಟೆಸ್ಟ್ ಉಪನಾಯಕ ರೋಹಿತ್ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವಿರಾಟ್‌ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದು ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಕಳೆದ ವಾರ ರೋಹಿತ್‌ಗೆ ಏಕದಿನ ಮತ್ತು T20I ತಂಡಗಳ ನಿಯಂತ್ರಣವನ್ನು ಹಸ್ತಾಂತರಿಸಿದ ನಂತರ, ಸರಣಿಗಾಗಿ ಟೆಸ್ಟ್ ತಂಡವನ್ನು ಘೋಷಿಸುವ ಬಿಸಿಸಿಐ ಪತ್ರಿಕಾಗೋಷ್ಟಿಯಲ್ಲಿ ವಿರಾಟ್‌ ಕೊಹ್ಲಿ ತಮ್ಮ ಲಭ್ಯತೆಯ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 26 ರಿಂದ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ, ನಂತರ ಜನವರಿಯಲ್ಲಿ ಅನೇಕ ಏಕದಿನ ಪಂದ್ಯಗಳನ್ನು ಆಡಲಿದೆ.

ಇದನ್ನೂ ಓದಿ: ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...