Homeಮುಖಪುಟಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

24 ಗಂಟೆಗಳ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

- Advertisement -
- Advertisement -

ಕೋಲ್ಕತ್ತಾದಲ್ಲಿ ತರಬೇತಿ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗಸ್ಟ್‌ 17 ರಂದು ತುರ್ತು ಹೊರತುಪಡಿಸಿ ದೇಶದಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ 24 ಗಂಟೆಗಳ ಬಂದ್‌ಗೆ ಕರೆ ನೀಡಿದೆ.

ಬಂದ್‌ ಸಮಯದಲ್ಲಿ ಒಪಿಡಿ (ಹೊರ ರೋಗಿ ವಿಭಾಗ) ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ದೇಶದಾದ್ಯಂತ ಆಧುನಿಕ ಔಷಧ ವೈದ್ಯರ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಐಎಂಎ ಪ್ರಕಟಣೆಯಲ್ಲಿ ತಿಳಿಸಿದೆ.

ಐಎಂಎ ಪ್ರಕಟಣೆಯ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(ಎಫ್‌ಒಆರ್‌ಡಿಎ) ಕೂಡ ತಾನು ಹಿಂಪಡೆದಿದ್ದ ಪ್ರತಿಭಟನೆಯ ನಿರ್ಧಾರವನ್ನು ವಾಪಸ್‌ ಪಡೆದಿದ್ದು, ಪುನಃ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.

“ಆರೋಗ್ಯ ಸಚಿವಾಲಯದ ಭರವಸೆಯ ಆಧಾರದ ಮೇಲೆ ಮುಷ್ಕರವನ್ನು ಹಿಂತೆಗೆದುಕೊಳ್ಳುವ ನಮ್ಮ ಹಿಂದಿನ ನಿರ್ಧಾರವು ನಮ್ಮ ಸಮುದಾಯದಲ್ಲಿ ದುಃಖ ಮತ್ತು ನಿರಾಶೆಯನ್ನುಉಂಟುಮಾಡಿದೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ನಾವು ಪ್ರತಿಭಟನೆಗೆ ಮತ್ತೆ ಬೆಂಬಲ ನೀಡುತ್ತೇವೆ” ಎಂದು ಎಫ್‌ಒಆರ್‌ಡಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಎಫ್‌ಒಆರ್‌ಡಿಎಯ ಪ್ರತಿನಿಧಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ಎರಡು ದಿನಗಳ ಹಿಂದೆ ಘೋಷಿಸಿದ್ದರು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಘಟನೆ ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನಿರ್ಭಯಾ ಪ್ರಕರಣದಂತೆ ಪ್ರತಿಭಟನೆ ದೇಶದಾದ್ಯಂತ ವ್ಯಾಪಿಸುತ್ತಿದೆ.

ಕಲ್ಕತ್ತಾ ಹೈಕೋರ್ಟ್ ಆದೇಶದಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ : ಕೋಲ್ಕತ್ತಾ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ನರ್ಸ್ ಮೇಲೆ ಅತ್ಯಾಚಾರ, ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...