Homeಮುಖಪುಟಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಭಾರತೀಯ ವೈದ್ಯಕೀಯ ಸಂಘ (IMA) ರಾಮದೇವ್ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿ, 15 ದಿನಗಳಲ್ಲಿ ರಾಮದೇವ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ವಿಫಲವಾದಾಗ ಯೋಗ ಗುರುಗಳಿಂದ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿದೆ.

ಐಎಂಎ (ಉತ್ತರಾಖಂಡ) ಕಾರ್ಯದರ್ಶಿ ಅಜಯ್ ಖನ್ನಾ ಅವರ ಪರವಾಗಿ ನೀಡಲಾದ ಆರು ಪುಟಗಳ ನೋಟೀಸ್‌ನಲ್ಲಿ, ’ರಾಮದೇವ್ ಹೇಳಿಕೆಗಳಿಂದ ಅಲೋಪತಿ ವೈದ್ಯಕೀಯ ಕ್ಷೇತ್ರದ ಗೌರವ ಮತ್ತು ಘನತೆಗೆ ಹಾನಿಯಾಗಿದೆ. ಜೊತೆಗೆ ಈ ಕ್ಷೇತ್ರದ ಸುಮಾರು 2 ಸಾವಿರ ವೈದ್ಯರಿಗೆ ಅಪಮಾನವಾಗಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

ಭಾರತೀಯ ದಂಡ ಸಂಹಿತೆಯ 499 ರ ಸೆಕ್ಷನ್ ಅಡಿಯಲ್ಲಿ ರಾಮದೇವ್ ಟೀಕೆಗಳನ್ನು “ಕ್ರಿಮಿನಲ್ ಆಕ್ಟ್” ಎಂದು ಹೇಳುವ ಮೂಲಕ, ನೋಟಿಸ್ ತಲುಪಿದ 15 ದಿನಗಳೊಳಗೆ ಅವರರು ಲಿಖಿತ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ, ಇಲ್ಲದಿದ್ದರೆ 1,000 ಕೋಟಿ ರೂ.ಗಳ ಪರಿಹಾರವನ್ನು ನೀಡಬೇಕು. ಐಎಂಎ ಪ್ರತಿ ಸದಸ್ಯನಿಗೆ 50 ಲಕ್ಷ ರೂ.ದಂತೆ ಒಂದು ಸಾವಿರ ಕೋಟಿ ರೂ. ಮಾನನಷ್ಟ ಪರಿಹಾರಕ್ಕೆ ಆಗ್ರಹಿಸಲಾಗಿದೆ ಎಂದಿದ್ದಾರೆ.

ಕೋವಿಡ್‌ಗೆ ಪರಿಣಾಮಕಾರಿ ಔಷಧಿಯಾಗಿ ರಾಮ್‌ದೇವ್ ಸಂಸ್ಥೆಯ ಉತ್ಪನ್ನವಾದ “ಕೊರೊನಿಲ್ ಕಿಟ್” ಅನ್ನು ಅನುಮೋದಿಸುವ ಎಲ್ಲಾ “ದಾರಿತಪ್ಪಿಸುವ” ಜಾಹೀರಾತನ್ನು ಹಿಂಪಡೆಯಲು ನೋಟಿಸ್ ಆಗ್ರಹಿಸಿದೆ. ಇದರಲ್ಲಿ ವಿಫಲವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

ಬಾಬಾ ರಾಮದೇವ್ ಅಲೋಪತಿ ಕಾರಣಕ್ಕೆ ಕೋವಿಡ್‌ ಸೋಂಕಿನಿಂದ ಲಕ್ಷಾಂತರ ಜನ ಸತ್ತರು, ಅಲೊಪಥಿಕ್ ವಿಧಾನ ಅಯೋಗ್ಯ ಎಂಬಂತೆ ಮಾತಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ತಮ್ಮ ಹೇಳಿಕೆ ವಾಪಸ್ ಪಡೆದಿದ್ದಾರೆ.


ಇದನ್ನೂ ಓದಿ: ಮಾನಸಿಕ ಸಮಸ್ಯೆಯಿರುವ ವ್ಯಕ್ತಿಯನ್ನು ಅಸ್ಸೆಂಬ್ಲಿಗೆ ಸೇರಿಸುವುದೇ?; ಶಾಸಕ ಅಖಿಲ್ ಗೊಗಯ್ ಬಗ್ಗೆ ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...