Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...