Homeಮುಖಪುಟಪೋಕ್ಸೋ ಪ್ರಕರಣದಲ್ಲಿ ತಕ್ಷಣದ ಬಂಧನವು ಬಿಜೆಪಿ ಆರೋಪಿಗೆ ಅನ್ವಯಿಸುವುದಿಲ್ಲವೇ?: ಕೇಂದ್ರಕ್ಕೆ ಸಿಬಲ್ ತರಾಟೆ

ಪೋಕ್ಸೋ ಪ್ರಕರಣದಲ್ಲಿ ತಕ್ಷಣದ ಬಂಧನವು ಬಿಜೆಪಿ ಆರೋಪಿಗೆ ಅನ್ವಯಿಸುವುದಿಲ್ಲವೇ?: ಕೇಂದ್ರಕ್ಕೆ ಸಿಬಲ್ ತರಾಟೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ವಿಚಾರವಾಗಿ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೋಕ್ಸೊ ಮತ್ತು ತಕ್ಷಣದ ಬಂಧನವು ಬಿಜೆಪಿಗೆ ಸೇರಿರುವ ಕಾರಣ ಸಿಂಗ್ ಹೊರತುಪಡಿಸಿ ಎಲ್ಲಾ ಆರೋಪಿಗಳಿಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಬಲ್, ”ಬ್ರಿಜ್ ಭೂಷಣ್ ಸಿಂಗ್: ಪೋಕ್ಸೊ ಅರ್ಜಿ ಮತ್ತು 164 ಹೇಳಿಕೆಗಳ ನಂತರ ತಕ್ಷಣದ ಬಂಧನವು ಬ್ರಿಜ್ ಭೂಷಣ್ ಹೊರತುಪಡಿಸಿ ಎಲ್ಲಾ ಆರೋಪಿಗಳಿಗೆ ಅನ್ವಯಿಸುತ್ತದೆಯೇ?ಏಕೆಂದರೆ ಅವರು: 1) ಬಿಜೆಪಿಗೆ ಸೇರಿದವರು 2) ಐಕಾನಿಕ್ ಮಹಿಳಾ ಕುಸ್ತಿಪಟುಗಳು ಬೇಕಾಗಿಲ್ಲ; ಮತಗಳು ಮಾತ್ರ ಮುಖ್ಯ ! 3) ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನನ್ನ ಹೊಸ ಭಾರತವೇ?” ಎಂದು ಕೇಳಿದ್ದಾರೆ.

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಮತ್ತು ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕಳೆದ ತಿಂಗಳು ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ ಬಳಿಕ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮೊದಲ ಎಫ್‌ಐಆರ್ ಅಪ್ರಾಪ್ತ ಕ್ರೀಡಾಪಟು ಲೈಂಗಿಕ ಕಿರುಕಳದ ಆರೋಪಕ್ಕೆ ಸಂಬಂಧಿಸಿದೆ. ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯಡಿಯಲ್ಲಿ ಪ್ರಕರಣ ನೋಂದಾಯಿಸಲಾಗಿದೆ. ಎರಡನೆಯದನ್ನು ವಯಸ್ಕರ ದೂರುಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮೇ 28ರಂದು ಜಂತರ್ ಮಂತರ್ ಬಳಿಯ ತಮ್ಮ ಪ್ರತಿಭಟನಾ ಸ್ಥಳದಿಂದ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ತಡೆದು ಬಂಧಿಸಿದರು. ವಿಶ್ವ ಚಾಂಪಿಯನ್‌ಶಿಪ್‌ಗಳ ಕಂಚಿನ ವಿಜೇತ ವಿನೇಶ್ ಮತ್ತು ಒಲಿಂಪಿಕ್ ಪದಕ ವಿಜೇತ ಬಜರಂಗ್ ಜೊತೆಗೆ ಮಲಿಕ್ ಅವರನ್ನು ಬಂಧಿಸಿ ನಂತರ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆಗಾಗಿ ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: ‘ತೀಕ್ಷ್ಣ ಪ್ರತಿಕ್ರಿಯೆ’ ಎಂದು ಕಾಂಗ್ರೆಸ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...