Homeಕರ್ನಾಟಕಕನ್ನಡ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ: ಸಿದ್ದರಾಮಯ್ಯ

ಕನ್ನಡ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ: ಸಿದ್ದರಾಮಯ್ಯ

- Advertisement -
- Advertisement -

ಕನ್ನಡ ಹೋರಾಟಕ್ಕೆ ಧರ್ಮ ಮತ್ತು ರಾಜಕೀಯದ ಬಣ್ಣ ಬಳಿದು ಪೊಲೀಸರ ಮೂಲಕ ಕನ್ನಡ ಹೋರಾಟಗಾರರನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಧಿತ ಕನ್ನಡ ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಫೇಸ್ ಬುಕ್ ಬರೆದುಕೊಂಡಿದ್ದು #ReleaseKannadaActivists ಎಂಬ ಹ್ಯಾಸ್ ಟ್ಯಾಗ್ ಸೇರಿಸಿದ್ದಾರೆ.

ಕನ್ನಡ ನೆಲ-ಜಲ-ಭಾಷೆಯ ರಕ್ಷಣೆಗಾಗಿ ನಡೆಯುವ ಹೋರಾಟವನ್ನು ರಾಜ್ಯ ಸರ್ಕಾರ ಗೌರವಿಸಬೇಕು, ದಮನಿಸಲು‌ ಹೋಗಬಾರದು. ಅವರ ನ್ಯಾಯಬದ್ಧ ಬೇಡಿಕೆಗಳನ್ನು ಈಡೇರಿಸಬೇಕು, ಅಸಾಧ್ಯವಾದುದನ್ನು ಅವರಿಗೆ ತಿಳಿಸಿ ಮನವರಿಕೆ ಮಾಡಿಕೊಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹಿಂದಿ ಬ್ಯಾನರ್ ಹರಿದ ಕಾರಣಕ್ಕಾಗಿ 6 ಜನ ಕನ್ನಡ ಹೋರಾಟಗಾರರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿಟ್ಟಿದ್ದಾರೆ.

ಇದರ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹ ಟ್ವೀಟ್ ಮಾಡಿದ್ದು ಮುಖ್ಯಮಂತ್ರಿಗಳೆ, ಕನ್ನಡ ಹೋರಾಟಗಾರರ ಮೇಲಿನ ಕೇಸನ್ನು ವಾಪಸ್ ಪಡೆಯಿರಿ ಮತ್ತು ನಿಮ್ಮ ಪೌರುಷವನ್ನು ರಾಜ್ಯದ ಪಾಲಿನ ಪರಿಹಾರ ಹಣ ತರುವಲ್ಲಿ ತೋರಿಸಿ ಎಂದಿದ್ದರು.

ಇದನ್ನು ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...