Homeಕರ್ನಾಟಕಬೆಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ; ಸ್ಕೂಟರ್‌ ಮೇಲೆ ಕುಳಿತಿದ್ದ ಜೋಡಿಗೆ ಹಲ್ಲೆ

ಬೆಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ; ಸ್ಕೂಟರ್‌ ಮೇಲೆ ಕುಳಿತಿದ್ದ ಜೋಡಿಗೆ ಹಲ್ಲೆ

- Advertisement -
- Advertisement -

ಅನ್ಯಧರ್ಮೀಯ ಜೋಡಿಗಳನ್ನು ಬೆದರಿಸಿ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪಾರ್ಕ್ನ ಹೊರಗೆ ಬೈಕ್‌ ಮೇಲೆ ಕುಳಿತಿದ್ದ ಜೋಡಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ಘಟನೆ, ಜೋಡಿ ಉದ್ಯಾನವನದ ಹೊರಗೆ ಸ್ಕೂಟರ್‌ನಲ್ಲಿ ಪರಸ್ಪರ ಎದುರಾಗಿ ಕುಳಿತಿದ್ದಾಗ ನಡೆದಿದೆ.

ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮತ್ತು ಬುರ್ಖಾ ಧರಿಸಿದ್ದ ಯುವತಿಯು ಕೆಲವು ಯುವಕರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅವರಲ್ಲಿ ಒರ್ವ ಯುವತಿಯ ವೀಡಿಯೊವನ್ನು ಸೆರೆಹಿಡಿಯುತ್ತಿರುವುದನ್ನು ನೋಡಲಾಗಿದೆ. ಆರೋಪಿಗಳು ಮೊದಲು ಯುವತಿಯ ಕುಟುಂಬಕ್ಕೆ ಆಕೆ ಇರುವ ಸ್ಥಳದ ಬಗ್ಗೆ ತಿಳಿದಿರುವ ಬಗ್ಗೆ ಪ್ರಶ್ನಿಸಿದರು. ನಂತರ ಅವರು ಆ ವ್ಯಕ್ತಿಗೆ ಬೇರೆ ಧರ್ಮದ ಮಹಿಳೆಯೊಂದಿಗೆ ಏಕೆ ಸುತ್ತಾಡುತ್ತಿದ್ದೀರಿ ಎಂದು ಕೇಳಿದರು. ನಂತರ, ಜೋಡಿ ಮೇಲೆ ದೌರ್ಜನ್ಯ ಎಸಗಿದರು.

ದೃಶ್ಯಾವಳಿಯಲ್ಲಿ, ಪುರುಷರ ಗುಂಪು ಯುವತಿಯನ್ನು ಬೆದರಿಸಿ, ಬುರ್ಖಾ ಧರಿಸಿಕೊಂಡು ಪುರುಷನೊಂದಿಗೆ ಕುಳಿತಿರುವುದಕ್ಕೆ ನಿಮಗೆ ನಾಚಿಕೆಯಾಗುತ್ತಿಲ್ಲವೇ ಎಂದು ಕೇಳಿದರು.

“ಜೋಡಿ ಸ್ಕೂಟರ್‌ನಲ್ಲಿ ಕುಳಿತಿದ್ದಾಗ ಐದು ಜನರು ಅವರನ್ನು ಪ್ರಶ್ನಿಸಿದರು. ಹುಡುಗಿ ಬುರ್ಖಾ ಧರಿಸಿದ್ದಳು. ಯುವತಿಯಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿದ್ದೇವೆ…. ನಾವು ತನಿಖೆ ಮುಂದುವರಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ ಗಿರೀಶ್ ಹೇಳಿದರು.

ಘಟನೆ ಹಿಂಸಾತ್ಮಕವಾಗಿಲ್ಲ ಎಂದು ಪೊಲೀಸರು ಹೇಳಿದ್ದರೂ, ಮತ್ತೊಂದು ವೀಡಿಯೊದಲ್ಲಿ ಆರೋಪಿಗಳು ಆ ವ್ಯಕ್ತಿಯನ್ನು ಸುತ್ತುವರೆದು ಹೊಡೆಯುವುದನ್ನು ದಾಖಲಾಗಿದೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಬಾಲಾಪರಾಧಿಯೂ ಸೇರಿದ್ದಾನೆ.

“ಅವರು ಮುಖ್ಯವಾಗಿ ಯುವತಿಯನ್ನು ಅಲ್ಲಿ ಏಕೆ ಕುಳಿತಿದ್ದಾಳೆ ಎಂದು ಕೇಳಿದರು. ತನಿಖೆಯ ಸಮಯದಲ್ಲಿ ನಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ” ಎಂದು ಡಿಸಿಪಿ ಹೇಳಿದರು.

“ನಾವು ಯುವತಿಯಿಂದ ದೂರು ಸ್ವೀಕರಿಸಿದ್ದೇವೆ, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ” ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ ಎಂದು ಹೇಳಿದರು. “ಇದು ಬಿಹಾರ ಅಥವಾ ಉತ್ತರ ಪ್ರದೇಶ ಅಥವಾ ಮಧ್ಯಪ್ರದೇಶ ಅಲ್ಲ; ಕರ್ನಾಟಕ ಪ್ರಗತಿಪರ ರಾಜ್ಯ” ಎಂದು ಅವರು ಹೇಳಿದರು.

ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...