Homeಮುಖಪುಟಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ

ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟವಾಗಿದೆ : ಕೇರಳ ಬಿಜೆಪಿ ಅಧ್ಯಕ್ಷ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಬಿಹಾರದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದನ್ನು ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಹಾರದಲ್ಲಿ ನಕಲಿ ಮತದಾರರ ಮೂಲಕ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು ಚುನಾವಣೆ ಗೆಲ್ಲುತ್ತಿತ್ತು. ಎಸ್‌ಐಆರ್‌ನಲ್ಲಿ ನಕಲಿ ಮತದಾರರು ತೆಗೆದು ಹಾಕಿದ ಬಳಿಕ ಈಗ ಪರಿಣಾಮ ಗೊತ್ತಾಗುತ್ತಿದ್ದೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್‌, ಸಿಪಿಐ (ಎಂ) ಪಕ್ಷಗಳು ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿವೆ” ಎಂದು ಹೇಳಿದ್ದಾರೆ.

‘ಮತ ಬ್ಯಾಂಕ್ ರಾಜಕೀಯ’ ಮತ್ತು ‘ಆಡಳಿತ ವಿರೋಧಿ ಅಲೆಯ ಸಾಂಪ್ರದಾಯಿಕ ಪ್ರಚಾರ’ದ ಸಮಯ ಮುಗಿದಿದೆ. ಜನರು ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸುವ ಸರ್ಕಾರಕ್ಕೆ ಮತ ಹಾಕುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಕೇರಳದ ಜನರು ಕೂಡ ಉತ್ತಮ ಆಡಳಿತವನ್ನು ನೀಡುವ ಸರ್ಕಾರವನ್ನು ಪಡೆಯಬೇಕು ಎಂದಿದ್ದಾರೆ.

ಬಿಹಾರದ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ. ಎಸ್‌ಐಆರ್ ನಂತರ ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ ಹಲವಾರು ವ್ಯತ್ಯಾಸಗಳನ್ನು ವಿರೋಧ ಪಕ್ಷಗಳು ಎತ್ತಿ ತೋರಿಸಿವೆ.

ಎಸ್‌ಐಆರ್‌ ಮೂಲಕ ಬಿಹಾರದ ಕಿಶನ್‌ಗಂಜ್, ಕಟಿಹಾರ್, ಅರಾರಿಯಾ ಮತ್ತು ಪೂರ್ಣಿಯಾಗಳನ್ನು ಒಳಗೊಂಡಿರುವ ಸೀಮಾಂಚಲ್‌ನಲ್ಲಿ ಅತಿ ಹೆಚ್ಚು ಶೇ. 7.7ರಷ್ಟು ಮತದಾರರು ಪಟ್ಟಿಯಿಂದ ಅಳಿಸಲ್ಪಟ್ಟಿದ್ದಾರೆ. ಮತ್ತೊಂದೆಡೆ, ಮಗಧ್ ವಿಭಾಗದ ಏಳು ಜಿಲ್ಲೆಗಳಲ್ಲಿ ಶೇ. 2.6 ರಷ್ಟು ಮತದಾರರು ಸೇರ್ಪಡೆಯಾಗಿದ್ದಾರೆ.

ಎಸ್‌ಐಆರ್ ಅನ್ನು ಪ್ರಶ್ನಿಸಿದ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿವೆ.

ಬಿಹಾರದ ಎಸ್‌ಐಆರ್ ಬಳಿಕ ಚುನಾವಣಾ ಆಯೋಗ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳ ಎಸ್‌ಐಆರ್ ಘೋಷಿಸಿದೆ. ಇದರ ವಿರುದ್ದ ತಮಿಳುನಾಡು, ಪಶ್ಚಿಮ ಬಂಗಾಳ ಈಗಾಗಲೇ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಬಿಹಾರ ಚುನಾವಣೆ ‘ಆರಂಭದಿಂದಲೂ ನ್ಯಾಯಯುತವಾಗಿರಲಿಲ್ಲ’ : ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....