Homeಮುಖಪುಟಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ, ಯುದ್ಧದ ಪರಿಣಾಮ ಭಾರತೀಯರ ಅಡುಗೆ ಮನೆಗೆ ಬಂದು ತಲುಪಿದೆ.

ಪಶ್ಚಿಮ ಏಷ್ಯಾ ಸಂಘರ್ಷ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಮುಖ್ಯವಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯತ್ಯವಾಗಿದೆ. ಇದರಿಂದ ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೋಟೆಲ್‌ ಉದ್ಯಮದ ಮೇಲೆ ಹೊಡೆತ ಬಿದ್ದಿದೆ. ಮಾಧ್ಯಮ ವರದಿಗಳು ಇದನ್ನು ದೃಢಪಡಿಸಿವೆ.

ಬೆಂಗಳೂರಿನ ಪ್ರಸಿದ್ದ ವಿದ್ಯಾರ್ಥಿ ಭವನ ಸೇರಿದಂತೆ ಹಲವು ಹೋಟೆಲ್ ಮಾಲೀಕರು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆ, ಅನಿವಾರ್ಯವಾಗಿ ಹೋಟೆಲ್ ಬಂದ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದಿದ್ದಾರೆ.

ಮುಂಬೈ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ ಎಹೆಚ್‌ಎಆರ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಗಳಿಂದಾಗಿ ಮಂಗಳವಾರದವರೆಗೆ (ಮಾ.10) ಸುಮಾರು ಶೇಕಡ 20ರಷ್ಟು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚಲ್ಪಟ್ಟಿವೆ.

ಆಹಾರ ಉದ್ಯಮಕ್ಕೆ ಅಗತ್ಯ ವಸ್ತುಗಳ ಅಡಿಯಲ್ಲಿ ವಾಣಿಜ್ಯ ಎಲ್‌ಪಿಜಿಯನ್ನು ನಿರಂತರವಾಗಿ ಪೂರೈಸುವಂತೆ ಕೋರಿ ಚೆನ್ನೈ ಹೋಟೆಲ್‌ಗಳ ಸಂಘ ಸೋಮವಾರ (ಮಾ.9) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

“ಪರಿಸ್ಥಿತಿ ಗಂಭೀರವಾಗಿದೆ. ವಾಣಿಜ್ಯ ಎಲ್‌ಪಿಜಿ ವಿತರಕರು ಸಿಲಿಂಡರ್‌ಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ನಮ್ಮ ಬಳಿ ಸ್ಟಾಕ್ ಲಭ್ಯವಿಲ್ಲ ಎಂದು ಹೇಳಿದ್ದಾರೆ. ಪರಿಣಾಮ, ಅನೇಕ ರೆಸ್ಟೋರೆಂಟ್‌ಗಳನ್ನು ಮುಚ್ಚುವ ಅನಿವಾರ್ಯತೆ ಎದುರಾಗಿದೆ” ಎಂದು ಸಂಘ ​ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದು, ​ಸಿಎಂ ಎಂ.ಕೆ ಸ್ಟಾಲಿನ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರಿಗೆ ಪೋಸ್ಟನ್ನು ಟ್ಯಾಗ್ ಮಾಡಿದೆ.

ಪ್ರಮುಖ ನಗರಗಳಲ್ಲಿ ಎಲ್‌ಪಿಜಿ ಅಭಾವದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ಗೃಹ ಬಳಕೆಯ ಎಲ್‌ಪಿಜಿ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಎಲ್‌ಪಿಜಿ ಉತ್ಪಾದನೆಯನ್ನು ಶೇಕಡ 10 ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಾರ್ವಜನಿಕರಿಗೆ ಭರವಸೆ ನೀಡಿದೆ.

ಆದಾಗ್ಯೂ, ಎಲ್‌ಪಿಜಿ ಸಿಲಿಂಡರ್‌ಗಳ ಬುಕಿಂಗ್ ಮತ್ತು ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂಬ ವರದಿಗಳು ಬರುತ್ತಿವೆ. ಇದರ ನಡುವೆ ಅನಿಲ ಸಿಲಿಂಡರ್‌ಗಳ ಕಾಳಸಂತೆ ಮಾರಾಟದ ಆರೋಪಗಳೂ ಕೂಡ ಕೇಳಿ ಬಂದಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬುಧವಾರ (ಮಾ.11) ವರದಿ ಮಾಡಿದೆ.

ಮುಂಬೈ, ಬೆಂಗಳೂರು ಮತ್ತು ಚೆನ್ನೈನ ಹೋಟೆಲ್ ಸಂಘಟನೆಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಪೂರೈಕೆಯು ತಕ್ಷಣವೇ ಪುನರಾರಂಭಗೊಳ್ಳದಿದ್ದರೆ ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಮುಚ್ಚುವ ಭೀತಿಯನ್ನು ಎದುರಿಸಬಹುದು ಎಂಬುವುದಾಗಿ ಅವು ಎಚ್ಚರಿಸಿವೆ ಎಂದು ವರದಿ ಉಲ್ಲೇಖಿಸಿದೆ.

ಎಲ್‌ಪಿಜಿ ಚಿಲ್ಲರೆ ಮಾರಾಟಗಾರರ ಸಂಘಗಳು ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 8 ರಿಂದ ಜಾರಿಗೆ ಬರುವಂತೆ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆಯನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಿದೆ. ಆದರೆ, ನಂತರದ ದಿನಗಳಲ್ಲಿ ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಂತಹ ಅಗತ್ಯ ಸೇವೆಗಳಿಗೆ ಮಾತ್ರ ಪೂರೈಕೆಯನ್ನು ಪುನರಾರಂಭಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಗೃಹ ಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಬಳಕೆಯ ಪೂರೈಕೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ ಎಂದು ಸಂಘಟನೆಗಳು ತಿಳಿಸಿವೆ. ಗೃಹಬಳಕೆಯ ಅಗತ್ಯಗಳನ್ನು ಪೂರೈಸಿದ ನಂತರ, ವಾಣಿಜ್ಯ ಸಂಸ್ಥೆಗಳಿಗೂ ಎಲ್‌ಪಿಜಿ ಲಭ್ಯವಾಗುವಂತೆ ಮಾಡಬೇಕು ಎಂದು ಅವು ವಿನಂತಿಸಿವೆ ಎಂದು ವರದಿ ಹೇಳಿದೆ.

ಮಧ್ಯಪ್ರಾಚ್ಯ ಸಂಘರ್ಷಕ್ಕೂ ಭಾರತ ಎಲ್‌ಪಿಜಿಗೂ ಏನು ಸಂಬಂಧ?

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಸಾಗಾಟಕ್ಕೆ ಅಡ್ಡಿಯಾಗಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಬಳಕೆಯ ಸುಮಾರು 60-62% ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಹೆಚ್ಚಿನ ಪಾಲು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಬರುತ್ತದೆ.

ಕೇಂದ್ರ ಸರ್ಕಾರವು ಗೃಹಬಳಕೆಯ ಗ್ರಾಹಕರಿಗೆ ಆದ್ಯತೆ ನೀಡಲು ವಾಣಿಜ್ಯ ಬಳಕೆಯ ಪೂರೈಕೆಯನ್ನು ಸದ್ಯಕ್ಕೆ ನಿಯಂತ್ರಿಸಿದೆ. ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಗೃಹಬಳಕೆಯ ಸಿಲಿಂಡರ್ ಖರೀದಿಸಿದ ನಂತರ ಮುಂದಿನ ಬುಕಿಂಗ್‌ಗೆ 25 ದಿನಗಳವರೆಗೆ ಕಾಯುವ ನಿಯಮ ಜಾರಿಗೆ ಬಂದಿದೆ.

ಎಲ್‌ಪಿಜಿ ಉತ್ಪಾದನೆಯನ್ನು 10% ಹೆಚ್ಚಿಸಲು ಕೇಂದ್ರ ಸರ್ಕಾರವು ತೈಲ ಕಂಪನಿಗಳಿಗೆ ಆದೇಶಿಸಿದೆ. ರಷ್ಯಾ ಮತ್ತು ಪಶ್ಚಿಮ ಆಫ್ರಿಕಾದಂತಹ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.

ಭಾರತ ಮಧ್ಯ ಪ್ರಾಚ್ಯದಿಂದ ಅನಿಲ ತರುವುದು ಏಕೆ?

ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಗಳು ಇರಾನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇನಂತಹ ಮಧ್ಯಪ್ರಾಚ್ಯ ದೇಶಗಳಲ್ಲಿವೆ. ಭಾರತದಲ್ಲಿ ಗೃಹಬಳಕೆ ಮತ್ತು ಕೈಗಾರಿಕೆಗಳಿಗೆ ಬೇಕಾದಷ್ಟು ಪ್ರಮಾಣದ ಅನಿಲ ಉತ್ಪಾದನೆಯಾಗುವುದಿಲ್ಲ.

ಮಧ್ಯಪ್ರಾಚ್ಯ ದೇಶಗಳು ಭಾರತಕ್ಕೆ ಹತ್ತಿರದಲ್ಲಿವೆ. ಇದರಿಂದಾಗಿ ಸಮುದ್ರ ಮಾರ್ಗದ ಮೂಲಕ ಅನಿಲವನ್ನು ಹಡಗುಗಳಲ್ಲಿ ಸಾಗಿಸುವುದು ಸುಲಭ ಮತ್ತು ಸಾರಿಗೆ ವೆಚ್ಚ ಕಡಿಮೆಯಾಗುತ್ತದೆ.

ಭಾರತದ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯಿಂದಾಗಿ ಇಂಧನದ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬೃಹತ್ ಬೇಡಿಕೆಯನ್ನು ಪೂರೈಸಲು ಆಮದು ಮಾಡಿಕೊಳ್ಳುವುದು ಅನಿವಾರ್ಯ.

ಭಾರತವು ಈ ದೇಶಗಳೊಂದಿಗೆ ದೀರ್ಘಕಾಲದ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಇದರಿಂದಾಗಿ ಮಾರುಕಟ್ಟೆಯ ಏರಿಳಿತಗಳ ನಡುವೆಯೂ ನಿರಂತರ ಪೂರೈಕೆಯ ಭರವಸೆ ಇರುತ್ತದೆ.

ಎಲ್‌ಪಿಜಿ ನೈಸರ್ಗಿಕವಾಗಿ ಸಿಗುವ ವಸ್ತುವೇ?

ಭೂಮಿಯಿಂದ ನೈಸರ್ಗಿಕ ಅನಿಲವನ್ನು ತೆಗೆಯುವಾಗ ಅದರಲ್ಲಿ ಪ್ರೋಪೇನ್ ಮತ್ತು ಬ್ಯುಟೇನ್ ಎಂಬ ಅನಿಲಗಳಿರುತ್ತವೆ. ಇವುಗಳನ್ನು ಬೇರ್ಪಡಿಸಿದಾಗ ಎಲ್‌ಪಿಜಿ ದೊರೆಯುತ್ತದೆ.

ಪೆಟ್ರೋಲಿಯಂ ರಿಫೈನರಿಗಳಲ್ಲಿ ಕಚ್ಚಾ ತೈಲವನ್ನು ಶುದ್ಧೀಕರಿಸಿ ಪೆಟ್ರೋಲ್ ಅಥವಾ ಡೀಸೆಲ್ ಮಾಡುವಾಗ ಒಂದು ಹಂತದಲ್ಲಿ ಉಪ ಉತ್ಪನ್ನವಾಗಿ ಎಲ್‌ಪಿಜಿ ಬಿಡುಗಡೆಯಾಗುತ್ತದೆ.

ಇದು ನೈಸರ್ಗಿಕವಾಗಿ ಅನಿಲ ರೂಪದಲ್ಲಿರುತ್ತದೆ, ಆದರೆ ಸಾಗಾಟದ ಅನುಕೂಲಕ್ಕಾಗಿ ಅದನ್ನು ಹೆಚ್ಚಿನ ಒತ್ತಡದಲ್ಲಿ ದ್ರವ ರೂಪಕ್ಕೆ ಪರಿವರ್ತಿಸಿ ಸಿಲಿಂಡರ್‌ಗಳಲ್ಲಿ ತುಂಬಲಾಗುತ್ತದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...