Homeಮುಖಪುಟರಾಜ್ಯಸಭೆ : ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಯ ವಾಗ್ದಂಡನೆಗೆ ವಿಪಕ್ಷಗಳ ನೋಟಿಸ್

ರಾಜ್ಯಸಭೆ : ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಯ ವಾಗ್ದಂಡನೆಗೆ ವಿಪಕ್ಷಗಳ ನೋಟಿಸ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸುವಂತೆ ರಾಜ್ಯಸಭೆಯಲ್ಲಿ ನೋಟಿಸ್ ನೀಡಲಾಗಿದೆ.

ವರದಿಗಳ ಪ್ರಕಾರ, ಕಪಿಲ್ ಸಿಬಲ್, ವಿವೇಕ್ ಟಂಖಾ, ದಿಗ್ವಿಜಯ ಸಿಂಗ್, ಜಾನ್ ಬ್ರಿಟ್ಟಾಸ್, ಮನೋಜ್ ಕುಮಾರ್ ಝಾ ಮತ್ತು ಸಾಕೇತ್ ಗೋಖಲೆ ಸೇರಿದಂತೆ ಪ್ರತಿಪಕ್ಷಗಳ 55 ಸದಸ್ಯರು ವಾಗ್ದಂಡನೆ ನೋಟಿಸ್‌ಗೆ ಸಹಿ ಹಾಕಿದ್ದಾರೆ.

ನಿಯಮಗಳ ಪ್ರಕಾರ, ಸುಮಾರು 50 ಸಂಸದರ ಸಹಿ ಅಗತ್ಯವಿದೆ. ಆದರೆ, ಇಲ್ಲಿ ಹೆಚ್ಚುವರಿಯಾಗಿ 5 ಸಂಸದರು ಸಹಿ ಹಾಕಿದ್ದಾರೆ.

“ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಮಾಡಿದ ಭಾಷಣ ದ್ವೇಷದಿಂದ ಕೂಡಿತ್ತು. ಪೂರ್ವಾಗ್ರಹ ಪೀಡತವಾಗಿತ್ತು. ಅಲ್ಪಸಂಖ್ಯಾತರನ್ನು ನೇರವಾಗಿ ಗುರಿಯಾಗಿಸಲಾಗಿದೆ” ಎಂದು ವಾಗ್ದಂಡನೆ ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ಬಹುಸಂಖ್ಯಾತರ ಅಪೇಕ್ಷೆಯಂತೆ ಈ ದೇಶ ನಡೆಯಲಿದೆ ಎಂಬ ನ್ಯಾಯಮೂರ್ತಿ ಯಾದವ್ ಅವರ ಹೇಳಿಕೆ, ಮುಸ್ಲಿಂ ಸಮುದಾಯದ ವಿರುದ್ಧದ ಅವರ ಟೀಕೆಗಳು ಮತ್ತು “ಕಠ್ಮುಲ್ಲಾ” ಎಂಬ ಪದ ಬಳಕೆಯನ್ನು ಉಲ್ಲೇಖಿಸಿ ವಾಗ್ದಂಡನೆ ನೋಟಿಸ್ ನೀಡಲಾಗಿದೆ.

ನ್ಯಾ. ಯಾದವ್ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಮಾಡಿರುವ ಪ್ರತಿಜ್ಞೆ ಮತ್ತು ಸಂವಿಧಾನದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದ್ದಾರೆ. “ಸಣ್ಣ ವಯಸ್ಸಿನಲ್ಲಿಯೇ ಪ್ರಾಣಿಗಳ ಹತ್ಯೆಯನ್ನು ನೋಡುವುದರಿಂದ ಮುಸ್ಲಿಂ ಮಕ್ಕಳು ದಯೆ ತೋರುತ್ತಾರೆ ಎಂದು ನಿರೀಕ್ಷಿಸುವಂತಿಲ್ಲ” ಎಂಬ ಅವರ ಹೇಳಿಕೆಗೆ ಆಕ್ಷೇಪಾರ್ಹವಾಗಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ವಿಭಜಕ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳನ್ನು ನೀಡುವ ಮೂಲಕ ನ್ಯಾಯಮೂರ್ತಿ ಯಾದವ್ ಅವರು ನ್ಯಾಯಾಂಗದ ಮೇಲೆ ಸಾರ್ವಜನಿಕರು ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದ್ದಾರೆ. ರಾಮ ಜನ್ಮಭೂಮಿ ಆಂದೋಲನಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಹೇಳಿಕೆಗಳು ರಾಜಕೀಯ ಸ್ವರೂಪದ್ದಾಗಿದ್ದು, ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತದೆ. ತಟಸ್ಥ ಮಧ್ಯಸ್ಥಗಾರ ಮತ್ತು ಹಕ್ಕುಗಳ ರಕ್ಷಕನಾಗಿ ನ್ಯಾಯಾಧೀಶರು ನೀಡಿರುವ ಹೇಳಿಕೆ ನ್ಯಾಯಾಂಗಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ವಾಗ್ದಂಡನೆ ನೋಟಿಸ್ ಅಸಮಾಧಾನ ವ್ಯಕ್ತಪಡಿಸಿದೆ.

ವಿಧಿ 124(4) ಮತ್ತು 124(5) ರೊಂದಿಗೆ ಓದಲಾಗುವ ಭಾರತದ ಸಂವಿಧಾನದ ವಿಧಿ 217(1)(ಬಿ) ಮತ್ತು ವಿಧಿ 218ರ ಪ್ರಕಾರ, ನ್ಯಾಯಾಂಗ ನೀತಿಗಳು, ನಿಷ್ಪಕ್ಷಪಾತ ಮತ್ತು ನ್ಯಾಯಾಂಗದಲ್ಲಿ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ದುರ್ಬಲಗೊಳಿಸುವ ನಡೆಯ ಆಧಾರದ ಮೇಲೆ ನ್ಯಾಯಾಧೀಶರನ್ನು ಹುದ್ದೆಯಿಂದ ತೆಗೆದು ಹಾಕಬಹುದು.

ಲೋಕಸಭೆಯಲ್ಲೂ ಸಂಸದ ಅಸಾದುದ್ದೀನ್ ಓವೈಸಿ ನ್ಯಾ. ಶೇಖರ್ ಯಾದವ್ ಪದಚ್ಯುತಿಗೆ ಆಗ್ರಹಿಸಿ ನೋಟಿಸ್ ನೀಡಿದ್ದಾರೆ. ಅದಕ್ಕೆ 100 ಸಂಸದರ ಸಹಿಯ ಅಗತ್ಯವಿದೆ.

ಸಿಜೆಐ ಸಂಜೀವ್ ಖನ್ನಾ ಅವರಿಗೆ ಹಲವು ದೂರುಗಳು ಬಂದಿರುವ ಹಿನ್ನೆಲೆ ಶೇಖರ್ ಯಾದವ್ ಅವರ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನಿಂದ ಮಾಹಿತಿ ಕೋರಿದೆ.

ಇದನ್ನೂ ಓದಿ : ‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...