Homeಕರ್ನಾಟಕಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

’ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಆ ಕೆಲಸ ಮಾಡುತ್ತೇವೆ’

- Advertisement -
- Advertisement -

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ನಡೆಸಿರುವ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು. ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು. ರಾಷ್ಟ್ರೀಯ ಪಕ್ಷವೊಂದು ನಾಲ್ಕು ಕಾಸಿಗೆ ಈ ಹಂತಕ್ಕೆ ಇಳಿಯಬಹುದೆಂದು ಯಾರೂ ಊಹಿಸಿರಲಿಲ್ಲ” ಎಂದು ಬರೆದಿದ್ದಾರೆ.

ಹೀಗೆ ಸುಖಾ ಸುಮ್ಮನೆ ರಾಷ್ಟ್ರೀಯ ಪಕ್ಷವೊಂದರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಾ, ಪಕ್ಷದ ಬಗ್ಗೆ ಅಪ್ರಚಾರ ಮಾಡಲಾಗುತ್ತಿದೆ ಎಂದು ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ತೇಜೇಶ್ ಕುಮಾರ್‌, ’ಚಕ್ರವರ್ತಿ ಸೂಲಿಬೆಲೆ ಸುಳ್ಳು ಹೇಳುತ್ತಿರುವುದು ಇದು ಮೊದಲನೇ ಬಾರಿಯಲ್ಲ. 7 ವರ್ಷಗಳಿಂದ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಚಿನ್ನದ ರಸ್ತೆಯಿಂದ ಹಿಡಿದು ಮೋದಿಯವರು ಲ್ಯಾಪ್‌ಟಾಪ್ ಮುಂದೆ ಕುಳಿತು ಕೊರೊನಾ ಮಾಹಿತಿ ಪಡೆಯುತ್ತಿದ್ದಾರೆ. ಡಾಲರ್‌ ಬೆಲೆ, ಪೆಟ್ರೋಲೆ ಬೆಲೆ, ಬುಲೆಟ್ ಟ್ರೈನ್‌ನಗಳ ಬಗ್ಗೆ ಸುಳ್ಳಿನ ಸರಮಾಲೆಗಳನ್ನು ಪೋಣಿಸುತ್ತಲೇ ಇದ್ದಾರೆ. ಪರೋಕ್ಷವಾಗಿ ಬಿಜೆಪಿಗೆ ಅನುಕೂಲ ಮಾಡುತ್ತಿದ್ದು, ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಲೆ ಇದ್ದಾರೆ. ಹೀಗೆ ಜೂನ್ 7 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಕಾಂಗ್ರೆಸ್ ಬಗ್ಗೆ ತುಂಬಾ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ವಿಜಯವಾಣಿಯಲ್ಲಿ ನಮ್ಮ ರೈತರು ಮತ್ತು ಮುಸಲ್ಮಾನ ಬಂಧುಗಳ ಬಗ್ಗೆಯೂ ಕೆಟ್ಟದಾಗಿ ಬರೆದಿದ್ದಾರೆ. ಹಾಗಾಗಿ ಈ ಆರೋಪಗಳಿಗೆ ಸಾಕ್ಷಿ, ದಾಖಲಾತಿ ನೀಡುವಂತೆ ಕೇಳಿದ್ದೇವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುವಂತೆ  ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದೇವೆ. ನಾವು ಇಲ್ಲಿಗೆ ಇದನ್ನು ಬಿಡುವುದಿಲ್ಲ. ಕಾನೂನು ಕ್ರಮ ಜರುಗಿಸುವವರೆಗು ಹೋರಾಟ ಮುಂದುವರೆಸುತ್ತೇವೆ.” ಎಂದಿದ್ದಾರೆ.

’ಇರುವ ಸತ್ಯವನ್ನು ಬರೆಯಲಿ. ತಪ್ಪುನ್ನು ತೋರಿಸಿದರೇ ತಪ್ಪು ತಿದ್ದಿಕೊಳ್ಳುತ್ತೇವೆ. ಆದರೆ ನಡೆಯದೇ ಇರುವ ವಿಷಯದ ಬಗ್ಗೆ, ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ರಾಷ್ಟ್ರೀಯ ಪಕ್ಷದ ಬಗ್ಗೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದು ಎಷ್ಟು ಸರಿ? ಇಷ್ಟು ದಿನ ನಾವು ಇದನ್ನು ಸುಮ್ಮನೆ ಕಡೆಗಣಿಸಿದ್ದೇವೆ. ಆದರೆ, ಈಗಲೂ ಇಂತಹದ್ದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಹೀಗಾಗಿ ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ತೇಜೇಶ್ ಕುಮಾರ್‌ ಹೇಳಿದ್ದಾರೆ.

“ಬೆಡ್ ಬ್ಲಾಕಿಂಗ್ ದಂಧೆ ಬಗ್ಗೆ ಕೂಡ ಕಾಂಗ್ರೆಸ್‌ ಅನ್ನು ಅನುಮಾನಿಸಿದ್ದರು. ಆದರೆ, ಕೊನೆಗೆ ಯಾರು ಸಿಕ್ಕಿಹಾಕಿಕೊಂಡಿದ್ದು, ಯಾರು ಯಾರು ಅದರಲ್ಲಿ ನಂಟು ಹೊಂದಿದ್ದರು ಎಂಬುದು ಎಲ್ಲರಿಗೂ ಗೊತ್ತಾಯಿತು. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳಿನ ಸರಮಾಲೆಯಲ್ಲಿ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಹಾಗಾಗಿ ಜನರಿಗೆ ಈ ಸುಳ್ಳುಗಳ ಬಗ್ಗೆ ಅರಿವು ಮೂಡಬೇಕು. ಅವರ ವಿರುದ್ಧ ಬರೀ ದೂರು ನೀಡಿ ಸುಮ್ಮನಾಗುವುದಿಲ್ಲ. ಜನರಿಗೆ ಈ ಬಗ್ಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ” ಎಂದು ತೇಜೇಶ್ ಕುಮಾರ್‌ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದೊಂದು ಒಳ್ಳೆಯ ಕೆಲಸ. ಇವನು ಮತ್ತು ಇವನಂತಹ ಅವಿವೇಕಿಗಳಿಗೆ ಕಾನೂನಿನ ವ್ಯಾಪ್ತಿಯಲ್ಲಿಯೇ ಬುದ್ದಿ ಕಲಿಸಬೇಕು.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...