Homeಮುಖಪುಟಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ 'ಮಹಿಳಾ ಮೀಸಲಾತಿ' ಜಾರಿ ಮಾಡಿ: ಗೌರವ್ ಗೊಗೊಯ್

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

- Advertisement -
- Advertisement -

“ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು” ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು.

“ಸರ್ಕಾರವು ಮಸೂದೆಗಳನ್ನು ಬಳಸಿಕೊಂಡು ಡಿಲಿಮಿಟೇಷನ್ ಹಿಂಬಾಗಿಲಿನ ಮೂಲಕ ತಳ್ಳುತ್ತಿದೆ. ಕೇಂದ್ರ ಸರ್ಕಾರ ಜಾತಿ ಜನಗಣತಿಯನ್ನು ಬೆಂಬಲಿಸುತ್ತಿಲ್ಲ. ಈ ಕ್ರಮವು ಮಹಿಳಾ ಕೋಟಾದ ಹೆಸರಿನಲ್ಲಿ ಡಿಲಿಮೇಟಷನ್‌ ಮಾಡುವುದಕ್ಕೆ ಸಮನಾಗಿರುತ್ತದೆ, ಮಹಿಳಾ ಮೀಸಲಾತಿ ನಿಜವಾದ ಅನುಷ್ಠಾನಕ್ಕೆ ಅಡೆತಡೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನ ಉದಾಹರಣೆಗಳನ್ನು ಉಲ್ಲೇಖಿಸಿ ಗೌರವ್, “ಮಹಿಳಾ ಕೋಟಾವನ್ನು ಅನುಷ್ಠಾನಗೊಳಿಸುವ ನೆಪದಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ಮರುರೂಪಿಸಲು ಈ ಪ್ರಕ್ರಿಯೆಯನ್ನು ಬಳಸಲಾಗುತ್ತಿದೆ” ಎಂದು ಅವರು ಆರೋಪಿಸಿದರು.

“ಸರ್ಕಾರದ ಉದ್ದೇಶದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಕ್ಷೇತ್ರ ಪುನರ್ವಿಂಗಡಣೆ ಮತ್ತು ಜನಗಣತಿ 2024 ರ ನಂತರ ನಡೆಯಲಿದೆ ಎಂದು ಸರ್ಕಾರ ಈ ಹಿಂದೆ ಸೂಚಿಸಿತ್ತು, ಆದರೆ ಈಗ ಅವುಗಳನ್ನು ಕೋಟಾ ಜಾರಿಗೆ ತರುತ್ತಿದೆ” ಎಂದು ಅವರು ಹೇಳಿದರು.

ಜನಗಣತಿ ನಡೆಸುವಲ್ಲಿನ ವಿಳಂಬವನ್ನು ಟೀಕಿಸಿ, “ಕಾಂಗ್ರೆಸ್ ಯಾವಾಗಲೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸಿದೆ” ಎಂದು ಅವರು ಹೇಳಿದರು.

ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ಮಹಿಳಾ ಮೀಸಲಾತಿ

“2023 ರಲ್ಲಿ ಅಂಗೀಕರಿಸಲ್ಪಟ್ಟ ಮಹಿಳಾ ಮೀಸಲಾತಿಯನ್ನು ಜನಗಣತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆಯ ನಂತರ ಜಾರಿಗೆ ತರಲಾಗುವುದು” ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.

“ಲೋಕಸಭೆಯ ಬಲದಲ್ಲಿ 815 ಸ್ಥಾನಗಳಿಗೆ ಶೇ.50 ಹೆಚ್ಚಳವನ್ನು ಪ್ರಸ್ತಾಪಿಸಲಾಗುವುದು. ಒಟ್ಟು ಸ್ಥಾನಗಳ ಮೂರನೇ ಒಂದು ಭಾಗದಷ್ಟು 272 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ಯಾವುದೇ ರಾಜ್ಯವು ಪ್ರಾತಿನಿಧ್ಯವನ್ನು ಕಳೆದುಕೊಳ್ಳುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ ಬಲಗಳನ್ನು ರಕ್ಷಿಸಲಾಗುವುದು” ಎಂದು ಪ್ರತಿಪಾದಿಸಿದರು.

ಬದ್ಧತೆ ಮರೆತ ಕೇಂದ್ರ ಸರ್ಕಾರ: ಡಿಂಪಲ್ ಯಾದವ್

“ಜಾತಿ ಗಣತಿ ಸೇರಿದಂತೆ ಸರಿಯಾದ ಜನಗಣತಿಯು ಮಹಿಳಾ ಮೀಸಲಾತಿ ಮಸೂದೆಯಿಂದ ಕಾಣೆಯಾದ ನಿರ್ಣಾಯಕ ಮೊದಲ ಹೆಜ್ಜೆಯಾಗಿದೆ” ಎಂದು ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಹೇಳಿದರು.

“ಸರ್ಕಾರವು ತನ್ನ ಹಿಂದಿನ ಬದ್ಧತೆಯನ್ನು ಮರೆಯುತ್ತಿದೆ. ಕೇಂದ್ರದ ಅನುಕೂಲಕ್ಕೆ ತಕ್ಕಂತೆ ಮಸೂದೆಯನ್ನು ರೂಪಿಸಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮಹಿಳೆಯರಿಗೆ ಅಸ್ತಿತ್ವದಲ್ಲಿರುವ ಮೀಸಲಾತಿಗಳು ಬಿ ಆರ್ ಅಂಬೇಡ್ಕರ್ ರೂಪಿಸಿದ ಚೌಕಟ್ಟಿನಲ್ಲೇ ಇರುತ್ತವೆ” ಎಂದು ಒತ್ತಿ ಹೇಳಿದರು.

ಡಿಲಿಮಿಟೇಷನ್ ಪಿತೂರಿ ಬಯಲಾಗಿದೆ: ಡೆರೆಕ್ ಒ’ಬ್ರೇನ್

ಬಿಜೆಪಿ ನೇತೃತ್ವದ ಎನ್‌ಡಿಎ ದುಷ್ಟ ಡಿಲಿಮಿಟೇಷನ್ ಕಾರ್ಯಸೂಚಿಯನ್ನು ಮುಂದಿಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಆರೋಪಿಸಿದರು. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಆಡಳಿತ ಒಕ್ಕೂಟವು ತನ್ನ ಪ್ರಯತ್ನದಲ್ಲಿ ವಿಫಲಗೊಳ್ಳುತ್ತದೆ. ವಿರೋಧ ಪಕ್ಷವು ಈ ಕ್ರಮವನ್ನು ಸೋಲಿಸುತ್ತದೆ” ಎಂದು ಅವರು ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...