Homeಮುಖಪುಟಪೌರತ್ವ ಕಾಯ್ದೆ ಜಾರಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್, ಟಿಎಂಸಿ ವಾಗ್ದಾಳಿ

ಪೌರತ್ವ ಕಾಯ್ದೆ ಜಾರಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್, ಟಿಎಂಸಿ ವಾಗ್ದಾಳಿ

- Advertisement -
- Advertisement -

ದೇಶದಾದ್ಯಂತ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ಇಂದು ಘೋಷಿಸಿದ ನಂತರ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಏಪ್ರಿಲ್-ಮೇನಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ಕ್ರಮವು ಜಾರಿಗೆ ಬಂದಿದ್ದು, ಇದೇ ಸಮಯವನ್ನು ಆಯ್ಕೆ ಮಾಡಿಕೊಂಡಿದ್ದು ಏಕೆ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿವೆ.

‘ಡಿಸೆಂಬರ್ 2019ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ನಿಯಮಗಳನ್ನು ತಿಳಿಸಲು ಮೋದಿ ಸರ್ಕಾರವು ನಾಲ್ಕು ವರ್ಷ ಮತ್ತು ಮೂರು ತಿಂಗಳುಗಳನ್ನು ತೆಗೆದುಕೊಂಡಿದೆ. ತಮ್ಮ ಸರ್ಕಾರವು ವ್ಯವಹಾರ ರೀತಿಯ ಮತ್ತು ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿಕೊಳ್ಳುತ್ತಾರೆ. ಆದರೆ, ಸಿಎಎಗೆ ಸಂಬಂಧಿಸಿದ ನಿಯಮಗಳನ್ನು ತಿಳಿಸಲು ತೆಗೆದುಕೊಂಡ ಸಮಯವು ಪ್ರಧಾನಿಯವರ ಸುಳ್ಳುಗಳ ಮತ್ತೊಂದು ಪ್ರದರ್ಶನವಾಗಿದೆ’ ಎಂದು ಕಾಂಗ್ರೆಸ್‌ನ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಅವರು ತಮ್ಮ ಎಕ್ಸ್ ಕಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಚುನಾವಣಾ ಬಾಂಡ್ ವರದಿ ಸಲ್ಲಿಸಲು ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಮಾರ್ಚ್ 6ರ ಗಡುವನ್ನು ಜೂನ್ 30 ರವರೆಗೆ ವಿಸ್ತರಿಸುವಂತೆ ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದ ನಂತರ ಕೇಂದ್ರವು ಜನರ ಗಮನವನ್ನು ‘ಸೆಳೆಯಲು’ ಪ್ರಯತ್ನಿಸುತ್ತಿದೆ ಎಂದು ರಮೇಶ್ ಆರೋಪಿಸಿದರು.

ಈ ಎಲ್ಲ ಬೆಳವಣಿಗೆಗಳ ನಡುವೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ‘ಜನರು ಶಾಂತರಾಗಿರಿ ಮತ್ತು ವದಂತಿಗಳಿಂದ ದೂರವಿರಿ’ ಎಂದು ಮನವಿ ಮಾಡಿದರು.

‘ನೀವು ಆರು ತಿಂಗಳ ಹಿಂದೆ ನಿಯಮಗಳನ್ನು ತಿಳಿಸಬೇಕಿತ್ತು; ಯಾವುದೇ ಒಳ್ಳೆಯ ವಿಷಯಗಳಿದ್ದರೆ, ನಾವು ಯಾವಾಗಲೂ ಬೆಂಬಲಿಸುತ್ತೇವೆ ಮತ್ತು ಪ್ರಶಂಸಿಸುತ್ತೇವೆ. ಆದರೆ ದೇಶಕ್ಕೆ ಒಳ್ಳೆಯದನ್ನು ಮಾಡದಿದ್ದರೆ, ಟಿಎಂಸಿ ಯಾವಾಗಲೂ ಧ್ವನಿ ಎತ್ತುತ್ತದೆ ಮತ್ತು ವಿರೋಧಿಸುತ್ತದೆ. ಇಂದಿನ ದಿನಾಂಕವನ್ನು ರಂಜಾನ್‌ಗೆ ಮುಂಚಿತವಾಗಿ ಏಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ನನಗೆ ತಿಳಿದಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ; ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

0
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ 'ಪತ್ನಿ' ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರು,...