Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...