Homeಮುಖಪುಟಮಣಿಪುರ ಜನರ ಹಿತಕ್ಕಾಗಿ ಕೇಂದ್ರದಿಂದ ಶೀಘ್ರದಲ್ಲೆ ಮಹತ್ವದ ನಿರ್ಧಾರ: ಅಸ್ಸಾಂ ಸಿಎಂ

ಮಣಿಪುರ ಜನರ ಹಿತಕ್ಕಾಗಿ ಕೇಂದ್ರದಿಂದ ಶೀಘ್ರದಲ್ಲೆ ಮಹತ್ವದ ನಿರ್ಧಾರ: ಅಸ್ಸಾಂ ಸಿಎಂ

- Advertisement -
- Advertisement -

‘ರಾಜ್ಯದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದೆ’ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶನಿವಾರ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಶೀಘ್ರದಲ್ಲೇ ಪ್ರಮುಖ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ‘ಮಣಿಪುರಕ್ಕೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯಗಳ ಕುರಿತು ಚರ್ಚಿಸಿರುವುದಾಗಿ’ ಮಾಹಿತಿ ನೀಡಿದರು.

ಮಣಿಪುರ ರಾಜ್ಯದಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ನಡೆಯುತ್ತಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಎರಡು ಗುಂಪುಗಳ ಘರ್ಷಣೆಯಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಆದರೆ, ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪರಿಹಾರ ಕಂಡುಕೊಳ್ಳಲು ಈವರೆಗೆ ಸಾಧ್ಯವಾಗಿಲ್ಲ.

‘ಇಂದು ನಾನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಅತ್ಯಂತ ಮಹತ್ವದ ವಿಷಯಗಳ ಕುರಿತು ಚರ್ಚಿಸಿದ್ದೇವೆ’ ಎಂದು ಬಿರೇನ್ ಸಿಂಗ್ ಹೇಳಿದ್ದಾರೆ.

‘ಖಾತ್ರಿಪಡಿಸಿಕೊಳ್ಳಿ, ಭಾರತ ಸರ್ಕಾರವು ಮಣಿಪುರದ ಜನರ ಹಿತಾಸಕ್ತಿಗಳಿಗಾಗಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿದೆ’ ಸಿಂಗ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ಮಾತ್ರ ಸುಳಿವು ನೀಡಿಲ್ಲ.

ಮೇ 3, 2023 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು, ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೆ ಸಮುದಾಯದ ಬೇಡಿಕೆಯನ್ನು ವಿರೋಧಿಸಲು ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ‘ಐಕಮತ್ಯ’ ಮೆರವಣಿಗೆಯನ್ನು ಆಯೋಜಿಸಲಾಯಿತು. ಅಲ್ಲಿಂದೀಚೆಗೆ ನಡೆಯುತ್ತಿರುವ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಕುಕಿಗಳ ಒಂದು ಗುಂಪು ಮಣಿಪುರ ಸರ್ಕಾರದಿಂದ ಪ್ರತ್ಯೇಕ ಆಡಳಿತ ಅಥವಾ ಪ್ರತ್ಯೇಕತೆಯನ್ನು ಒತ್ತಾಯಿಸಿದರೆ, ಮೈತೆಯಿ ಗುಂಪುಗಳು ಅದರ ವಿರುದ್ಧ ಎಚ್ಚರಿಕೆ ನೀಡಿ, ಅಂತಹ ಪ್ರಯತ್ನಗಳನ್ನು ವಿಫಲಗೊಳಿಸುವಂತೆ ಕೇಳಿಕೊಂಡರು.

ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟು ಮೈತೆಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ನಾಗಾಗಳು ಮತ್ತು ಕುಕಿಗಳನ್ನು ಒಳಗೊಂಡಿರುವ ಬುಡಕಟ್ಟು ಜನಾಂಗದವರು ಶೇಕಡಾ 40ರಷ್ಟಿದ್ದಾರೆ ಮತ್ತು ಮುಖ್ಯವಾಗಿ ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಉಳಿದವರು ಇತರ ಸಮುದಾಯಗಳಿಗೆ ಸೇರಿದವರು.

ಇದನ್ನೂ ಓದಿ; ಕೇಂದ್ರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಸೆಡ್ಡು; ‘ಮನರೇಗಾ ಬಾಕಿಯನ್ನು ರಾಜ್ಯವೇ ಪಾವತಿಸಲಿದೆ’ ಎಂದ ದೀದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...