Homeಮುಖಪುಟಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ ಆಗ್ರಹ

ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕತೆ ಕುಸಿಯುತ್ತಿರುವುದರಿಂದ ಬಡವರು, ಮಧ್ಯಮವರ್ಗದವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅವರ ಹಿತ ಕಾಯಲು ಸರ್ಕಾರ ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ” ಎಂದಿದ್ದಾರೆ.

ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ


ರಿಸರ್ವ್‌ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು. ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ? 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...