Homeಕರೋನಾ ತಲ್ಲಣಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟದಲ್ಲಿ ಬಳಸಲಾಗುವ ಎಲ್ಲಾ ಜೀವ ಉಳಿಸುವ ಔಷಧಿಗಳು ಮತ್ತು ಸಲಕರಣೆಗಳ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶುಕ್ರವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಇಂತಹ ವಸ್ತುಗಳ ಮೇಲೆ ತೆರಿಗೆ ವಿಧಿಸುವುದು “ಕ್ರೌರ್ಯ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇಂದು ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಸರ್ಕಾರವು ಈ ವಸ್ತುಗಳ ಮೇಲಿನ ತೆರಿಗೆಯನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ಇಂದು ಮಾಡಿದ್ದ ಟ್ವೀಟ್‌ನಲ್ಲಿ ಅವರು, “ಸಾಂಕ್ರಾಮಿಕ ಸಮಯದಲ್ಲಿ ಅಗತ್ಯ ವಸ್ತುಗಳಾದ ಆಂಬ್ಯುಲೆನ್ಸ್‌ಗಳು, ಹಾಸಿಗೆಗಳು, ವೆಂಟಿಲೇಟರ್‌ಗಳು, ಆಮ್ಲಜನಕ, ಔಷಧಿಗಳು, ಲಸಿಕೆಗಳ ಮೇಲೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ ಮತ್ತು ಅಸೂಕ್ಷ್ಮತೆ’ಯಾಗಿದೆ” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

“ಕೊರೊನಾ ವಿರುದ್ದ ಹೋರಾಟದಲ್ಲಿ ಬಳಸಲಾಗುವ, ಎಲ್ಲಾ ಜೀವ ಉಳಿಸುವ ಔಷಧಿಗಳ ಮೇಲಿನ ಜಿಎಸ್‌ಟಿಯನ್ನು ಸರ್ಕಾರವು ಇಂದು ನಡೆಯುವ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಕಿತ್ತು ಹಾಕಬೇಕು” ಎಂದು ಅವರು ಕೇಂದ್ರ ಸರ್ಕಾರವನ್ನು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದ ಸಮಯದಲ್ಲಿ ಸಾಮಾನ್ಯವಾಗಿ ಬಳಸಲಾಗುವ ವಸ್ತುಗಳ ಪಟ್ಟಿಯನ್ನು ಮತ್ತು ಅವುಗಳ ಮೇಲೆ ವಿಧಿಸಲಾಗುವ ಜಿಎಸ್ಟಿ ದರದ ಚಿತ್ರವನ್ನೂ ಪ್ರಿಯಾಂಕ ಗಾಂಧಿ ತಮ್ಮ ಟ್ವೀಟ್‌ನಲ್ಲಿ ಲಗತ್ತಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...