Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...