Homeಮುಖಪುಟಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ಇಮ್ರಾನ್ ಪಾಷ ಬಂಧನ; ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ? ನೆಟ್ಟಿಗರ ಪ್ರಶ್ನೆ

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್... ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು?

- Advertisement -
- Advertisement -

ಕೊರೊನಾ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ವಾರ್ಡ್‌ ಕಾರ್ಪೋರೇಟರ್‌ ಇಮ್ರಾನ್ ಪಾಷ ಮೆರವಣಿಗೆ ನಡೆಸಿದ್ದಕ್ಕೆ ಅವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲುರನ್ನು ಯಾವಾಗ ಬಂಧಿಸುತ್ತೀರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.

ಭಾನುವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಇಮ್ರಾನ್ ಪಾಷ ಬಿಡುಗಡೆಯಾದ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಜೈಕಾರ ಕೂಗಿದ್ದರು. ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಯ ಕಾರಾಗೃಹ ಸೆಲ್‌ನಲ್ಲಿರಿಸಿದ್ದರು.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಮ್ರಾನ್ ಪಾಷರನ್ನು ಬಂಧಿಸಿದ್ದು ಸರಿ. ಆದರೆ ಚಿತ್ರದುರ್ಗದಲ್ಲಿ ನೂರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿದ, ಸೇಬಿನ ಹಾರವನ್ನು ಹಾಕಿಸಿಕೊಂಡ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿದ ಆರೋಗ್ಯ ಸಚಿವ ಬಿ.ಶ್ರೀರಾಮುಲುರವರನ್ನು ಯಾವಾಗ ಬಂಧಿಸುತ್ತೀರಿ ಎಂದು ಪ್ರಶ್ನಿಸಿದ್ದರೆ.

ಆರೋಗ್ಯ ಸಚಿವರಾದ ಶ್ರೀರಾಮುಲು ಅವರಿಗೆ ಸೇಬಿನ ಹಾರ ಹಾಕಿ ಕನಿಷ್ಠ ಅಂತರವನ್ನು ಕಾಪಾಡದೆ ವಿಜೃಂಭಣೆಯ ಮೆರವಣಿಗೆ ಮಾಡುತ್ತಿರುವ ದೃಶ್ಯಗಳು. ಕೊರೊನಾ ಸಮಯದಲ್ಲಿ ಸಾಮಾನ್ಯಜನರು ಓಡಾಡಿದರೆ ಲಾಠಿಯಲ್ಲಿ ಗೊಡೆಯುವ ಪೋಲಿಸರು ಈ ರೀತಿಯ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣ ವಾಗಿವೆ.#NaanuGauri #coronaliveupdates #shreeRamulu

Posted by Naanu Gauri on Tuesday, June 2, 2020

ಕೊರೋನ ರೋಗದಿಂದ ಗುಣಮುಖರಾಗಿ ಪಾದರಾಯಣ ಪುರಕ್ಕೆ ಮೆರವಣಿಗೆ ಮೂಲಕ ಬಂದ ಕಾರ್ಪೋರೇಟರ್ ಇಮ್ರಾನ್ ಪಾಷ ಬಂಧನ.. ಕಾನೂನು ಉಲ್ಲಂಘಿಸಿದರೆ ಬಂಧಿಸಿ… ಸರಿಯಾದ ಕ್ರಮ. ಬಂಧಿಸಲೇಬೇಕು.
ಇದಕ್ಕಿಂತ ಮೊದಲು ಅದ್ದೂರಿ ‌ಮೆರವಣಿಗೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಗ್ಯ ಸಚಿವ ರಾಮುಲು ಬಂಧನ ಇದಕ್ಕಿಂತ ಮೊದಲೇ ಮಾಡಬೇಕಿತ್ತು. ಯಾಕೆ ಬಂಧನವಿಲ್ಲ?
ರಾಮನಿಗೊಂದು ನ್ಯಾಯ ರಹೀಮನಿಗೊಂದು ನ್ಯಾಯನಾ? ಎಂದು ಸಿದ್ದಿಕ್ ಪುತ್ತುರ್‌ರವರು ಪ್ರಶ್ನಿಸಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷ ಮೆರವಣಿಗೆ ಮಾಡಿದ್ದಕ್ಕೆ ಅರೆಸ್ಟ್ ಮಾಡಿದ್ದೀರಾ, ಸಂತೋಷ. ಎಲ್ಲಾರಿಗೂ ಒಂದೇ ಕಾನೂನು. ಮೆರವಣಿಗೆ ಮಾಡ್ಕೊಂಡ ಶ್ರೀರಾಮುಲು, ಜಮೀರ್, ರೇಣುಕಾಚಾರ್ಯರನ್ನ ಅರೆಸ್ಟ್ ಮಾಡೋ ತಾಕತ್ತು ಪೋಲಿಸ್ ಇಲಾಖೆಗೆ ಇಲ್ವಾ? ಎಂದು ಜಯರಾಜ್‌ ನಾಯ್ಡು ಎಂಬುವವರ ಪ್ರಶ್ನಿಸಿದ್ದಾರೆ.

ರೋಡ್ ಷೋ ಮಾಡಿದ ಇಮ್ರಾನ್ ಪಾಷ ಮೇಲೆ ಹಾಕಿದ ಕೇಸ್… ಬಹಿರಂಗ ಸಮಾವೇಶ ಮಾಡಿದ ಶ್ರೀರಾಮುಲು ಮೇಲೆ ಯಾಕೆ ಹಾಕಿಲ್ಲ ಪೋಲೀಸರು? ಕಾನೂನು ಯಾರಪ್ಪನ ಮನೇದು? ಎಂದು ಸತೀಶ್‌ ಪಾಳೇಗಾರ್‌ರವರು ಕಿಡಿಕಾರಿದ್ದಾರೆ.

ಜನರು ಸೇರಿದ್ದಕ್ಕೆ ಇಮ್ರಾನ್ ಪಾಷ್ ಬಂಧನ ಆಯ್ತು… ಹಾಗಾದರೆ ಆರೋಗ್ಯ ಸಚಿವ ಶ್ರೀರಾಮುಲು ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ… ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಅರೆಸ್ಟ್ ಮಾಡುತ್ತಿರಾ ಹೇಳಿ ಎಂದು ರಾಜಶೇಖರ್‌ ಎಸ್‌ ಅಂಗಡಿಯವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. (ಗಜೇಂದ್ರ ಗಡದಲ್ಲಿ ಸಿದ್ದರಾಮಯ್ಯ ನವರು ಭೇಟಿ ನೀಡಿದಾಗ ನೂರಾರು ಜನ ಒಂದೆಡೆ ಸೇರಿ ಘೋಷಣೆ ಕೂಗಿದ್ದರು)

ಒಟ್ಟಿನಲ್ಲಿ ಈ ಎಲ್ಲಾ ಜನಪ್ರತಿನಿಧಿಗಳು ಸಹ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರಿಗೂ ಕಾನೂನುಗಳು ಅನ್ವಯವಾಗಬೇಕು. ಕೆಲವರಿಗೆ ಅದರಿಂದ ವಿನಾಯಿತಿ ನೀಡುವುದರಿಂದ ಮತ್ತಷ್ಟು ಉಲ್ಲಂಘನೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು.


ಇದನ್ನೂ ಓದಿ: ಜನಾಂಗೀಯತೆಯ ಬಗ್ಗೆ ಬಾಲಿವುಡ್ ತಾರೆಗಳ ಇಬ್ಬಂದಿತನವನ್ನು ಬಯಲಿಗೆಳೆದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...