Homeಮುಖಪುಟಸುಧಾಮೂರ್ತಿ 'ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ' ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

- Advertisement -
- Advertisement -

ಇನ್ಫೊಸಿಸ್‌ನ ಸುಧಾಮೂರ್ತಿ ಅವರನ್ನು ನಿನ್ನೆ ಬಿಜೆಪಿ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು. ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿತರಾಗಿ ಘೋಷಿಸಿರುವ ಬೆನ್ನಲ್ಲಿ RSS-ಸಂಯೋಜಿತ ನಿಯತಕಾಲಿಕೆ ಈ ಹಿಂದೆ ಸುಧಾ ಮೂರ್ತಿಯನ್ನು ಮತ್ತು ಇನ್ಫೋಸಿಸ್ ಪೌಂಡೇಶನ್‌ ಬಗ್ಗೆ ಮಾಡಿರುವ ಟೀಕೆ ಮುನ್ನೆಲೆಗೆ ಬಂದಿದೆ.

ಆರೆಸ್ಸೆಸ್‌-ಸಂಯೋಜಿತ ನಿಯತಕಾಲಿಕ ‘ಪಾಂಚಜನ್ಯ’ ಈ ಹಿಂದೆ ಇನ್ಫೋಸಿಸ್ ಪೌಂಡೇಶನ್‌ ಮತ್ತು ಸುಧಾ ಮೂರ್ತಿ ವಿರುದ್ಧ ಭಾರತೀಯ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ ಮತ್ತು ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸೆಪ್ಟೆಂಬರ್ 2021ರಲ್ಲಿ, ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿನ ದೋಷಗಳ ಹಿನ್ನೆಲೆಯಲ್ಲಿ, ಇನ್ಫೋಸಿಸ್ ನಕ್ಸಲರು, ಎಡಪಂಥೀಯರು ಮತ್ತು ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯವನ್ನು ಒದಗಿಸುತ್ತಿದೆ. ದೇಶದಲ್ಲಿ ವಿಭಜಕ ಶಕ್ತಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಇನ್ಫೋಸಿಸ್ ಬೆಂಬಲ ನೀಡುತ್ತಿದೆ ಎಂಬ ವಿಷಯ ಈಗಾಗಲೇ ಬಹಿರಂಗವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

ಸುಧಾ ಮೂರ್ತಿ ಅವರ ಅಧ್ಯಕ್ಷತೆಯ ಇನ್ಫೋಸಿಸ್ ಫೌಂಡೇಶನ್‌ನಿಂದ ನಿಧಿಯನ್ನು ಪಡೆದ ಕೆಲವು ನ್ಯೂಸ್ ಪೋರ್ಟಲ್‌ಗಳನ್ನು ಉಲ್ಲೇಖಿಸಿದ ನಿಯತಕಾಲಿಕವು, ಸುಧಾಮೂರ್ತಿ ತಪ್ಪು ಮಾಹಿತಿ ನೀಡುವ ವೆಬ್‌ಸೈಟ್‌ಗಳಿಗೆ ಧನಸಹಾಯ ಮಾಡಿದ್ದಾರೆ ಎಂದು ಆರೋಪಿಸಿತ್ತು. ಈ ವೆಬ್‌ಸೈಟ್‌ಗಳು ಸರ್ಕಾರ ಮತ್ತು ಸಂಘಪರಿವಾರವನ್ನು ಟೀಕಿಸುತ್ತಿದೆ ಎಂದು ಹೇಳಿತ್ತು.

ಜಾತಿ ದ್ವೇಷವನ್ನು ಹರಡುವ ಕೆಲವು ಸಂಸ್ಥೆಗಳು ಇನ್ಫೋಸಿಸ್‌ನಿಂದ ಸಹಾಯ ಪಡೆದ ಫಲಾನುಭವಿಗಳೂ ಆಗಿದ್ದಾರೆ. ದೇಶವಿರೋಧಿ ಮತ್ತು ಅರಾಜಕತಾವಾದಿ ಸಂಘಟನೆಗಳಿಗೆ ಕಂಪನಿಯು ಧನಸಹಾಯ ಮಾಡಲು ಕಾರಣವೇನು ಎಂದು ಇನ್ಫೋಸಿಸ್ ಪ್ರವರ್ತಕರನ್ನು ಕೇಳಬೇಕಲ್ಲವೇ? ಅಂತಹ ಶಂಕಿತ ಕಂಪನಿಗಳಿಗೆ ಸರ್ಕಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕೇ? ಎಂದು ವರದಿ ಕೇಳಿತ್ತು.

ಲೇಖನವನ್ನು ಪ್ರಕಟಿಸಿದ ಕೇವಲ ಮೂರು ತಿಂಗಳ ನಂತರ ಸುಧಾ ಮೂರ್ತಿ ಅವರು ಡಿಸೆಂಬರ್ 31, 2021 ರಂದು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ನಿವೃತ್ತರಾಗಿದ್ದರು. ಈ ಹಿಂದೆ ಬಿಜೆಪಿ ಆರೆಸ್ಸೆಸ್‌ನ ಸಂಯೋಜಿತ ನಿಯತಕಾಲಿಕ ಪಾಂಜನ್ಯ ಸುಧಾಮೂರ್ತಿಗೆ ಟೀಕೆ ಮಾಡಿದೆ. ಆದರೆ ಇದೀಗ ಬಿಜೆಪಿಯಿಂದಲೇ ಸುಧಾಮೂರ್ತಿಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಇನ್ಪೋಸಿಸ್‌ಗೆ ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ‘ಪಾಂಚಜನ್ಯ’ದ ವಕ್ತಾರರೂ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌.ಕಾಂ ವರದಿ ಮಾಡಿದೆ.

2021ರ ವರದಿಯು, ಇನ್ಫೋಸಿಸ್‌ನ ಪ್ರವರ್ತಕರಲ್ಲಿ ಒಬ್ಬರು ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಂದನ್ ನಿಲೇಕಣಿ, ಕಂಪನಿಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿಯವರು ಅಧಿಕಾರದಲ್ಲಿರುವ ಸರ್ಕಾರದ ಸಿದ್ಧಾಂತದ ವಿರುದ್ಧದ ವಿರೋಧವನ್ನು ವ್ಯಕ್ತಪಡಿಸಿರುವುದು ಗೌಪ್ಯವಾಗಿಲ್ಲ. ಇನ್ಫೋಸಿಸ್ ಒಂದು ನಿರ್ದಿಷ್ಟ ಸಿದ್ಧಾಂತಕ್ಕೆ ಹೊಂದಿಕೊಂಡಿರುವ ಜನರನ್ನು ಪ್ರಮುಖ ಪೋಸ್ಟ್‌ಗಳಿಗೆ ನೇಮಿಸುತ್ತದೆ. ಇವರಲ್ಲಿ ಹೆಚ್ಚಿನವರು ಬಂಗಾಳದ ಮಾರ್ಕ್ಸ್‌ವಾದಿಗಳು, ಅಂತಹ ಕಂಪನಿಯು ಪ್ರಮುಖ ಸರ್ಕಾರಿ ಟೆಂಡರ್‌ಗಳನ್ನು ಪಡೆದರೆ, ಚೀನಾ ಮತ್ತು (ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ) ಐಎಸ್‌ಐನಿಂದ ಪ್ರಭಾವದ ಬೆದರಿಕೆ ಇಲ್ಲವೇ? ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇನ್ಫೋಸಿಸ್‌ಗೆ ಒಪ್ಪಂದ ಮಾಡಿಕೊಂಡಿರುವ ಯೋಜನೆಗಳಲ್ಲಿನ ಲೋಪದೋಷಗಳು ಭಾರತೀಯ ಕಂಪನಿಗಳಿಗೆ ಗುತ್ತಿಗೆ ನೀಡುವ ತನ್ನ ನೀತಿಯನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಪಕ್ಷಗಳ ತಂತ್ರವಾಗಿರಬಹುದು ಎಂಬ ಅನುಮಾನವನ್ನೂ ಮ್ಯಾಗ್‌ಝಿನ್‌ ಮುಂದಿಟ್ಟಿತ್ತು ಮತ್ತು ಇದು ಆತ್ಮನಿರ್ಭರ ಭಾರತದ ಕಲ್ಪನೆಗೆ ಧಕ್ಕೆ ತರುತ್ತದೆ ಎಂದು ಹೇಳಿತ್ತು.

ಪಾಂಚಜನ್ಯ ವರದಿಯ ಬಗ್ಗೆ ವಿವಾದವಾಗುತ್ತಿದ್ದಂತೆ RSS ನಂತರ ದೂರವಿರಲು ಪ್ರಯತ್ನಿಸಿತು. ಭಾರತೀಯ ಕಂಪನಿಯಾಗಿ, ಇನ್ಫೋಸಿಸ್ ದೇಶದ ಪ್ರಗತಿಗೆ ಪ್ರಮುಖ ಕೊಡುಗೆ ನೀಡಿದೆ. ಇನ್ಫೋಸಿಸ್ ನಡೆಸುತ್ತಿರುವ ಪೋರ್ಟಲ್‌ನಲ್ಲಿ ಕೆಲವು ಸಮಸ್ಯೆಗಳಿರಬಹುದು, ಆದರೆ ಈ ಸಂದರ್ಭದಲ್ಲಿ ಪಾಂಚಜನ್ಯ ಪ್ರಕಟಿಸಿದ ಲೇಖನವು ಲೇಖಕರ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಪ್ರತಿಬಿಂಬಿಸುತ್ತದೆ ಎಂದು ಆರ್‌ಎಸ್‌ಎಸ್ ವಕ್ತಾರ ಸುನೀಲ್ ಅಂಬೇಕರ್ ಹೇಳಿದ್ದರು. ಪಾಂಚಜನ್ಯ ಆರ್‌ಎಸ್‌ಎಸ್‌ನ ಮುಖವಾಣಿ ಅಲ್ಲ ಮತ್ತು ಅದರಲ್ಲಿ ವ್ಯಕ್ತಪಡಿಸಿದ ಲೇಖನ ಅಥವಾ ಅಭಿಪ್ರಾಯಗಳನ್ನು ಆರ್‌ಎಸ್‌ಎಸ್‌ನೊಂದಿಗೆ ಜೋಡಿಸಬಾರದು ಎಂದು ಹೇಳಿದ್ದರು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ: ವಿಡಿಯೋ ಬಿಡುಗಡೆ ಮಾಡಿದ ಕೆನಡಾ ಸುದ್ದಿ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...