Homeಕರ್ನಾಟಕ37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಏಪ್ರಿಲ್ – ಮೇ ವೇಳೆಗೆ ಕರ್ನಾಟಕದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ವಿಶೇಷವೆಂದರೆ ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈಗ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಗೆಲುವು ಸಾಧಿಸಿ, ಅಧಿಕಾರಕ್ಕೆ ಮರಳುವುದೇ? ಅಥವಾ ಕರ್ನಾಟಕ ಜನತೆ ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸುತ್ತಾರೆಯೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ರಾಜ್ಯದ ಜನತೆ ಕಳೆದ 37 ವರ್ಷಗಳಿಂದ ವೈವಿಧ್ಯಮಯ ಫಲಿತಾಂಶವನ್ನು ನೀಡುತ್ತಾ ಬಂದಿದ್ದಾರೆ.

ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

ಮೂರು ಪಕ್ಷಗಳ ಮತಗಳು ಭೌಗೋಳಿಕವಾಗಿ ಹಂಚಿಹೋಗಿರುವಲ್ಲಿಯೂ ವ್ಯತ್ಯಾಸಗಳಿವೆ. ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಮತದಾರರು ಗಣನೀಯವಾಗಿ ಇದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತಗಳು ಮುಖ್ಯವಾಗಿ ರಾಜ್ಯದ ಉತ್ತರ ಮತ್ತು ಮಧ್ಯ ಭಾಗದಲ್ಲಿನ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಲಿಂಗಾಯತ ಸಮುದಾಯದ ಬೆಂಬಲವನ್ನು ಬಿಜೆಪಿ ಹೆಚ್ಚಿನ ಮಟ್ಟದಲ್ಲಿ ಪಡೆದಿದೆ. ಜನತಾ ದಳ-ಜಾತ್ಯತೀತ (ಜೆಡಿಎಸ್) ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಕೇಂದ್ರೀಕೃತವಾಗಿದ್ದಾರೆ. ಕಾಂಗ್ರೆಸ್ ಜೊತೆಯಲ್ಲಿ ಪರಿಶಿಷ್ಟ ಜಾತಿಗಳು, ಮುಸ್ಲಿಂ, ಒಬಿಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಗಳು ಗುರುತಿಸಿಕೊಂಡಿವೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚು ಮತಗಳನ್ನು ಪಡೆದರೂ, ಇತರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗೆಲ್ಲಲೂಬಹುದು. ಉದಾಹರಣೆಗೆ, 2004ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 7% ಹೆಚ್ಚು ಮತಗಳನ್ನು ಗಳಿಸಿತು, ಆದರೆ ಬಿಜೆಪಿಯು ಕಾಂಗ್ರೆಸ್‌ ಪಕ್ಷಕ್ಕಿಂತ 14 ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3.5, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ಬಲಾಢ್ಯ ಜಾತಿಗಳ ಪ್ರಾಬಲ್ಯವನ್ನು ಡಿ.ದೇವರಾಜ ಅರಸು (ಮುಖ್ಯಮಂತ್ರಿ, 1972-1980) ಅವರು ಮುರಿದಿದ್ದರು. ಲಿಂಗಾಯತರು ಮತ್ತು ಒಕ್ಕಲಿಗರನ್ನು ಬಿಟ್ಟು ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಜಾತಿಗಳನ್ನು ಸಂಘಟಿಸಿ ಚುನಾವಣಾ ನಿಯಮಗಳನ್ನು ಅರಸು ಬದಲಿಸಿದ್ದರು.

ಆದರೆ ಸಾಂಪ್ರದಾಯಿಕವಾಗಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಪಡೆಯುತ್ತಾರೆ. ಈ ಸಮುದಾಯಗಳ ಸಂಖ್ಯಾ ಬಲಕ್ಕಿಂತ ಹೆಚ್ಚಿನ ರಾಜಕೀಯ ಸ್ಥಾನಮಾನ ಈ ಜಾತಿಗಳಿಗೆ ಇದೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸೆತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು,

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಈಗ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ತಾವು ಯಾವ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇವೆಂದು ಹೇಳುವುದಕ್ಕಿಂತ, ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿರುವುದೇ ರಾರಾಜಿಸುತ್ತಿದೆ.

ಶೇ. 40 ಕಮಿಷನ್ ಆರೋಪವನ್ನು ಈ ಸರ್ಕಾರ ಎದುರಿಸುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿದೆ. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸುತ್ತಿವೆ. ಮತೀಯ ಗೂಂಡಾಗಿರಿ, ಹಿಜಾಬ್ ವಿವಾದ, ಹಲಾಲ್‌ ಕಟ್‌, ಜಟ್ಕಾ ಕಟ್‌, ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಬಳಿ ಅವಕಾಶ ನೀಡಲ್ಲ ಎನ್ನುವುದು- ಇವೆಲ್ಲವೂ ಮುಂದಿನ ಚುನಾವಣೆಯಲ್ಲಿ ಯಾವ ಪರಿಣಾಮಗಳನ್ನು ಬೀರುತ್ತವೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...