Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...