Homeಮುಖಪುಟಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

- Advertisement -
- Advertisement -

ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಗುಜರಾತ್‌ನ ಗಾಂಧಿನಗರ ಸಂಸದೀಯ ಕ್ಷೇತ್ರದಿಂದ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅಮಿತ್ ಶಾ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸ್ವತಂತ್ರವಾಗಿ ಸ್ಪರ್ಧೆಯಲ್ಲಿದ್ದ ಅಭ್ಯರ್ಥಿ ಜಿತೇಂದ್ರ ಚೌಹಾಣ್(39) ವಿಡಿಯೋವೊಂದರಲ್ಲಿ ಆರೋಪಿಸಿದ್ದಾರೆ. ನಾನು ಕೊಲ್ಲಲ್ಪಡುವ ಸಾಧ್ಯತೆಯಿದೆ, ನಾನು ನನ್ನ ದೇಶವಾಸಿಗಳಿಗೆ ಮನವಿ ಮಾಡುತ್ತೇನೆ, ಈ ರಾಷ್ಟ್ರವನ್ನು ಉಳಿಸಿ, ಇದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಇದಾದ ಮರುದಿನ ಚೌಹಾಣ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ನನ್ನ ಮೇಲೆ ಒತ್ತಡವಿದ್ದ ಕಾರಣ ನಾನು ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಚೌಹಾಣ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗಾಂಧಿನಗರ ಬಿಜೆಪಿಯ ಭದ್ರ ಕೋಟೆ, ಇಲ್ಲಿ ಬಿಜೆಪಿ ಪಕ್ಷವು 1989ರಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾ ಬಂದಿದೆ. 2019ರಲ್ಲಿ ಅಮಿತ್‌ ಶಾ ಅವರ ಗೆಲುವಿನ ಅಂತರವು 5.5 ಲಕ್ಷಕ್ಕೂ ಹೆಚ್ಚು ಮತಗಳಾಗಿತ್ತು.

ಚೌಹಾಣ್ ಸೇರಿದಂತೆ ಗಾಂಧಿನಗರದ ಮೂವರು ಅಭ್ಯರ್ಥಿಗಳು ರೇಸ್‌ನಿಂದ ಹೊರಬರಲು ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ. ನಮಗೆ ಸ್ಥಳೀಯ ಬಿಜೆಪಿ ನಾಯಕರು ಬೆದರಿಕೆ ಹಾಕುತ್ತಿದ್ದಾರೆ. ಗುಜರಾತ್ ಪೊಲೀಸರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಈ ಆರೋಪಗಳನ್ನು ಅಲ್ಲಗಳೆದಿದೆ, ಗುಜರಾತ್‌ನ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಈ ಕುರಿತು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಇದುವರೆಗೆ ಗಾಂಧಿನಗರದ 16 ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅವರಲ್ಲಿ ಚೌಹಾಣ್ ಸೇರಿದಂತೆ 12 ಮಂದಿ ಸ್ವತಂತ್ರರು ಅಭ್ಯರ್ಥಿಗಳಾಗಿದ್ದರು. ನಾಲ್ವರು ಸಣ್ಣ ರಾಜಕೀಯ ಪಕ್ಷಗಳಿಗೆ ಸೇರಿದವರಾಗಿದ್ದರು.

ನಾಮಪತ್ರ ಹಿಂಪಡೆಯಲು ಎಷ್ಟು ಹಣ ಬೇಕು ಎಂದು ಕೇಳಲಾಯ್ತು, ನನಗೆ ಹಣ ಬೇಕಾಗಿಲ್ಲ. ಆದರೆ ನಾನು ನಾಮಪತ್ರ ಹಿಂತೆಗೆದುಕೊಳ್ಳಲು ಕಾರಣಗಳಿವೆ. ನನಗೆ ಮೂವರು ಹೆಣ್ಣು ಮಕ್ಕಳಿದ್ದು, ಅವರನ್ನು ನೋಡಿಕೊಳ್ಳಬೇಕು. ನನಗೆ ಏನಾದರೂ ಸಂಭವಿಸಿದರೆ, ಅವರು ಹೇಗೆ ಬದುಕುತ್ತಾರೆ? ಏಪ್ರಿಲ್ 21ರಂದು ಕ್ರೈಂ ಬ್ರಾಂಚ್‌ನ ನಾಲ್ವರು ಅಹಮದಾಬಾದ್‌ನ ಎಲ್ಲೆಡೆ ತಮ್ಮನ್ನು ಹಿಂಬಾಲಿಸಿದ್ದಾರೆ. ಅವರು ನನ್ನ 10 ಬೆಂಬಲಿಗರಲ್ಲಿ ನಾಲ್ವರಿಗೆ ಕಿರುಕುಳ ನೀಡಿದ್ದಾರೆ ಎಂದು ಚೌಹಾನ್‌ ಹೇಳಿದ್ದಾರೆ.

ಅದೇ ರೀತಿ ಇತರ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವಿಧ ಕಾರಣಗಳನ್ನು ನೀಡಿದ್ದಾರೆ, ಹಣದ ಕೊರತೆ, ಬಿಜೆಪಿಗೆ ಸೇರ್ಪಡೆ ಸೇರಿದಂತೆ ವಿವಿಧ ಕಾರಣಗಳಿಗೆ ಅವರು ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಚೌಹಾಣ್ ತನ್ನ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವ ಒಂದು ದಿನದ ಮೊದಲು, ಒಂದು ಡಜನ್‌ಗಿಂತಲೂ ಹೆಚ್ಚು ಜನರ ಗುಂಪು ಅಹಮದಾಬಾದ್‌ನ ಚಂದ್ಖೇಡಾ ನಿವಾಸಿ, ಗಾಂಧಿನಗರದ ಪ್ರಜಾತಂತ್ರ ಆಧಾರ್ ಪಕ್ಷದ ಅಭ್ಯರ್ಥಿ ‘ಸುಮಿತ್ರಾ ಮೌರ್ಯ’ ಅವರ ಮನೆಗೆ ಪ್ರವೇಶಿಸಿದ್ದಾರೆ. ಅವರು ಸುಮಿತ್ರಾ ಮೌರ್ಯ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ.

ಆ ದಿನ ತನಗೆ ಮತ್ತು ತನ್ನ ಪತಿಗೆ ಸರಣಿ ದೂರವಾಣಿ ಕರೆಗಳು ಬಂದವು, ತಮ್ಮ ಬಾಸ್ ಜೊತೆ ಮಾತನಾಡುವಂತೆ ಅವರು ನನಗೆ ಸೂಚಿಸಿದರು, ಬಾಸ್‌ ಯಾರೆಂದು ಅವರು ನನಗೆ ಹೇಳಿಲ್ಲ. ನಾನು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ನನ್ನಲ್ಲಿ ಕೇಳಿದ್ದಾರೆ ಮತ್ತು ನಾನು ಸ್ಪರ್ಧಿಸಬಾರದು ಎಂದು ಹೇಳಿದ್ದಾರೆ ಎಂದು ಸುಮಿತ್ರಾ ಮೌರ್ಯ ಆರೋಪಿಸಿದ್ದಾರೆ. ಗಾಂಧಿನಗರದಿಂದ ಸ್ಪರ್ಧೆಯಿಂದ ಸುಮಿತ್ರಾ ಮೌರ್ಯ ಹಿಂದೆ ಸರಿದಿಲ್ಲ. ಆದರೆ ವಿಡಿಯೋ ಮಾಡಿದ್ದ ಚೌಹಾಣ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ್ದ ರಾಥೋಡ್ ಅವರು 2019ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅವರು 6,500 ಮತಗಳನ್ನು ಪಡೆದಿದ್ದರು. ಅವರು ಈ ಬಾರಿ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಸರ್ಕಾರಿ ನೌಕರಿಯಲ್ಲಿರುವ ನನ್ನ ಚಿಕ್ಕಪ್ಪನೊಂದಿಗೆ ಶಾಸಕರ ಜನರು ನನ್ನಲ್ಲಿ ಸ್ಪರ್ಧಿಸದಂತೆ ಸೂಚಿಸಿದ್ದಾರೆ. 2019ರಲ್ಲೂ ನನ್ನ ಮೇಲೆ ಒತ್ತಡವಿತ್ತು. ಆದರೆ ಆಗ ನಾನು ಹಿಂದೆ ಸರಿಯಲಿಲ್ಲ. ಈ ಬಾರಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಥೋಡ್ ಅವರನ್ನು ಬಿಜೆಪಿಗೆ ಸೇರುವಂತೆ ಆಗ್ರಹಿಸಲಾಗಿದೆ ಆದರೆ ಅವರು ನಿರಾಕರಿಸಿದ್ದಾರೆ. ಗಾಂಧಿನಗರದ ಕಣದಲ್ಲಿರುವ ಇನ್ನಿಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಸುರೇಂದ್ರ ಶಾ ಮತ್ತು ನರೇಶ್ ಪ್ರಿಯದರ್ಶಿ ಅವರಲ್ಲಿ ತಮ್ಮಂತೆಯೇ ಹಿಂದೆ ಸರಿಯುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ವರು ಸ್ವತಂತ್ರ ಅಭ್ಯರ್ಥಿಗಳಾದ ಕಿಶೋರ್ ಗೋಯಲ್, ರಜನಿಕಾಂತ್ ಪಟೇಲ್, ಮಖನ್‌ಭಾಯ್ ಕಾಲಿಯಾ ಮತ್ತು ಮೆಹಬೂಬ್ ರಂಗ್ರೇಜ್ ಸಹ ಕಣದಿಂದ ಹಿಂದೆ ಸರಿದಿದ್ದರು ಆದರೆ ಅವರು ತಮಗೆ ಒತ್ತಡ ಹಾಕಲಾಗಿದೆ ಎಂಬುವುದನ್ನು ಬಹಿರಂಗಪಡಿಸಿಲ್ಲ.

ಚೌಹಾಣ್‌ ಅವರು ಅಮಿತ್‌ ಶಾ ವಿರುದ್ಧ ಕಣಕ್ಕಿಳಿದಿರುವಾಗ ಬಿಜೆಪಿಯಷ್ಟು ಬಲಿಷ್ಠವಾಗಿರುವ ಪಕ್ಷ ಅವರ ಉಮೇದುವಾರಿಕೆ ಬಗ್ಗೆ ಏಕೆ ಚಿಂತಿಸುತ್ತದೆ ಎಂದು ಕೇಳಿದಾಗ, ದೇಶದ ಗೃಹ ಸಚಿವರ ವಿರುದ್ಧ ಸಣ್ಣ ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ನಿಂತಾಗ ಸಚಿವರ ಆತ್ಮಗೌರವಕ್ಕೆ ಕುತ್ತು ಬರುತ್ತದೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...