Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...