Homeಮುಖಪುಟನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಉಪರಾಷ್ಟ್ರಪತಿ ಧನ್ಕರ್

ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಉಪರಾಷ್ಟ್ರಪತಿ ಧನ್ಕರ್

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ಮೂವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ನಡೆಸಿದ ತನಿಖೆಯನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಸೋಮವಾರ ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸಂಪಾದಿಸಿರುವ ‘ದ ಕಾನ್‌ಸ್ಟಿಟ್ಯೂಷನ್‌ ವಿ ಅಡಾಪ್ಟೆಡ್‌’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಆಂತರಿಕ ಸಮಿತಿಗೆ ಯಾವುದೇ ಸಾಂವಿಧಾನಿಕ ವ್ಯಾಪ್ತಿಯಾಗಲಿ ಅಥವಾ ಕಾನೂನಿನ ಮಾನ್ಯತೆಯಾಗಲಿ ಇಲ್ಲ” ಎಂದಿದ್ದಾರೆ.

ಪ್ರಕರಣ ಸಂಬಂಧ ಇನ್ನೂ ಯಾವುದೇ ಎಫ್‌ಐಆರ್ ದಾಖಲಿಸದಿರುವುದು ಏಕೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್‌ ದಾಖಲಿಸುವ ಅಗತ್ಯವನ್ನು ಒತ್ತಿ ಹೇಳಿದ ಧನ್ಕರ್, ನ್ಯಾಯಮೂರ್ತಿ ಮನೆಯಲ್ಲಿ ಪತ್ತೆಯಾದ ಹಣದ ಮೂಲ, ಉದ್ದೇಶ, ಅದು ನ್ಯಾಯಾಂಗ ವ್ಯವಸ್ಥೆಯನ್ನು ಕಲುಷಿತಗೊಳಿಸಿದೆಯೇ? ಅದರ ಹಿಂದಿರುವ ದೊಡ್ಡ ತಿಮಿಂಗಿಲಗಳು ಯಾರು? ಎಂಬುವುದನ್ನು ತಿಳಿದುಕೊಳ್ಳಲು ಜನರು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ ಎಂದಿದ್ದಾರೆ.

ಪ್ರಕರಣ ನಡೆದು ಈಗಾಗಲೇ ಎರಡು ತಿಂಗಳುಗಳು ಕಳೆದಿವೆ. ತ್ವರಿತ ತನಿಖೆಯ ಅಗತ್ಯವಿದೆ. ಆಂತರಿಕ ಸಮಿತಿ ವರದಿ ಸಲ್ಲಿಸಿ ಈಗಾಗಲೇ ಒಂದು ವಾರ ಕಳೆದಿರೂ 140 ಕೋಟಿ ಜನರಿರುವ ದೇಶಕ್ಕೆ ಆ ಬಗ್ಗೆ ಹೆಚ್ಚಿನ ವಿಷಯ ಗೊತ್ತಾಗಿಲ್ಲ. ತನಿಖಾ ಸಮಿತಿ ಎಲೆಕ್ಟ್ರಾನಿಕ್ ಪುರಾವೆಗಳನ್ನು ವಶಪಡಿಸಿಕೊಂಡಿದೆಯೇ ಎಂಬುದು ಜನರಿಗೆ ತಿಳಿದಿಲ್ಲ. ಇಂತಹ ಎಷ್ಟು ಘಟನೆಗಳು ನಡೆದಿರಬಹುದು ಎಂದು ಊಹಿಸಿ. ಪ್ರತಿಯೊಂದು ಘಟನೆಯೂ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನ್ಯಾಯಾಧೀಶರ ವಿರುದ್ಧ ವಿಚಾರಣೆ ನಡೆಸಲು ಪೂರ್ವಾನುಮತಿ ಅಗತ್ಯವಿದೆ ಎಂದು ಹೇಳಿದ್ದ 1991ರ ಕೆ ವೀರಸ್ವಾಮಿ ತೀರ್ಪನ್ನು ಮರುಪರಿಶೀಲಿಸುವಂತೆ ಧನ್ಕರ್ ಕರೆ ನೀಡಿದ್ದು, ಇದು ನ್ಯಾಯಾಂಗದ ಸುತ್ತಲೂ “ಶಿಕ್ಷೆಯಿಂದ ಮುಕ್ತಿ”ಯ ಚೌಕಟ್ಟನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.

ಮಾರ್ಚ್ 22ರಂದು ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ವರ್ಮಾ ಅವರ ಮೇಲಿನ ಆರೋಪಗಳ ತನಿಖೆಗಾಗಿ ಮೂವರು ಸದಸ್ಯರ ಆಂತರಿಕ ಸಮಿತಿಯನ್ನು ರಚಿಸಿದ್ದರು. ಸಮಿತಿಯು ತನ್ನ ವರದಿಯಲ್ಲಿ ವರ್ಮಾ ಮೇಲಿನ ಆರೋಪಗಳು ವಿಶ್ವಾಸಾರ್ಹವೆಂದು ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

ಆರೋಪಗಳು ಕೇಳಿ ಬಂದ ಕೆಲ ದಿನಗಳ ನಂತರ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆಯಾದ ನ್ಯಾಯಮೂರ್ತಿ ವರ್ಮಾ ಅವರು, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ಸಂಭಾಲ್‌: ಜಾಮಾ ಮಸೀದಿ ಸರ್ವೆ ಆದೇಶ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...