Homeಕರ್ನಾಟಕಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

- Advertisement -
- Advertisement -

”ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ” ಎಂದು 2014ರಲ್ಲಿ ದೇಶದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಕ್ಷ, ಆರಂಭದಲ್ಲಿ ದೇಶದ ಹಲವು ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಿತು. ಆದರೆ, ಅತಿ ಕಡೆಮೆ ಅವಧಿಯಲ್ಲಿಯೇ ದೇಶಾದ್ಯಂತ ಬಿಜೆಪಿ ಆಡಳಿತದ ವಿರೋಧಿ ಅಲೆ ಶುರುವಾಗಿದೆ. ಹಾಗಾಗಿಯೇ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ. ಇದೀಗ ಕರ್ನಾಟಕದಲ್ಲೂ ಅತ್ಯಂತ ಹೀನಾಯವಾಗಿ ಸೋಲುವ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

2014ರಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಈಶಾನ್ಯ ರಾಜ್ಯಗಳಿಂದ ಮೊದಲುಗೊಂಡು ಎಲ್ಲೆಡೆ ಬಿಜೆಪಿ ಅಲೆ ಎದ್ದಿತ್ತು. ಮೋದಿ ಎಂಬ ಬಿರುಗಾಳಿಗೆ ಸಿಕ್ಕಿ ಹಲವು ರಾಜಕೀಯ ಪಕ್ಷಗಳು ನೆಲಕಚ್ಚಿದವು. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಎನ್‌ಸಿಪಿ, ಆರ್‌ಜೆಡಿ, ಎಡಪಕ್ಷಗಳು ಸೇರಿದಂತೆ ಘಟಾನುಘಟಿಗಳೇ ಮೋದಿ ಸುನಾಮಿಗೆ ಸುಸ್ತಾದವು. ಆದರೆ ಟಿಎಂಸಿ, ಎಲ್‌ಡಿಎಫ್, ಟಿಡಿಪಿ, ಟಿಆರ್‌ಎಸ್‌, ಎಐಎಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳನ್ನು ಅಲುಗಾಡಿಸಲು ಮೋದಿ ನೇತೃತ್ವದ ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

2019ರಲ್ಲಿ ಮೋದಿ ಸರ್ಕಾರ 2ನೇ ಅವಧಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉತ್ಸಾಹದಲ್ಲಿತ್ತು. ಆದರೆ ಅಷ್ಟೊತ್ತಿಗಾಗಲೇ ದೇಶದ ಜನರು ಬೆಲೆ ಏರಿಕೆಗೆ ಹಾಗೂ ಅಭಿವೃದ್ಧಿಯಲ್ಲೂ ಕಳಪೆ ಸಾಧನೆಯಿಂದಾಗಿ ಜನರು ಬೇಸತ್ತು ಹೋಗಿದ್ದರು. ಹಾಗಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿತ್ತು. ಮೋದಿ ತವರು ಕ್ಷೇತ್ರ ಗುಜರಾತ್‌ನಲ್ಲಿ ಕಾಂಗ್ರೆಸ್‌ ಎದುರು ಗೆಲುವು ಸಾಧಿಸಲು ಹರಸಾಹಸಪಡಬೇಕಾಯಿತು. ಅಷ್ಟರಮಟ್ಟಿಗೆ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಪ್ರತಿರೋಧ ಕೊಟ್ಟಿತ್ತು! ಇದಾದ ನಂತರ ನಡೆದ ಚುನಾವಣೆಗಳಲ್ಲಿ ರಾಜಸ್ತಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಂಥಾ ದೊಡ್ಡ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಮೂರೂ ರಾಜ್ಯಗಳ ಘಟಾನುಘಟಿ ನಾಯಕರೇ ತಲೆತಗ್ಗಿಸಿ ನಿಲ್ಲಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‌ ವಿಚಾರವನ್ನು ರಾಷ್ಟ್ರ ರಕ್ಷಣೆ, ರಾಷ್ಟ್ರಭಕ್ತಿಯ ಭಾವನಾತ್ಮಕವಾಗಿ ಜನರಿಗೆ ಮತ್ತೆ ಮಂಕುಬೂದಿ ಎರಚುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿತು. ಮೋದಿ ಮೊದಲಿಗಿಂತಾ ಹೆಚ್ಚು ಶಕ್ತಿಯುತರಾಗಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರು!

ಬಿಜೆಪಿಗೆ ಇದೀಗ ಮತ್ತೆ ರಾಜ್ಯಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲುಕಂಡಿದೆ. ದಕ್ಷಿಣಭಾರತದಲ್ಲಿ ಅಧಿಕಾರದಲ್ಲಿದ್ದ ಏಕೈಕ ರಾಜ್ಯ ಕರ್ನಾಟಕ ಆಗಿತ್ತು. ಆದರೆ ಇದೀಗ ಈ ಸೋಲು ಬಿಜೆಪಿಗೆ ದೊಡ್ಡಮಟ್ಟಿನ ನಷ್ಟಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿನ ಬಿಜೆಪಿಯ ಸೋಲು ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ, ರಾಜ್ಯಗಳಲ್ಲಿ ಮಾತ್ರ ಸೋಲಿನ ಹಾದಿ ಹಿಡಿಯುತ್ತಿದೆ. ದೇಶಾದ್ಯಂತ ವ್ಯಾಪಿಸಿದ್ದ ‘ಕೇಸರಿ’ ಸಾಮ್ರಾಜ್ಯ, ನಿಧಾನವಾಗಿ ಕರಗಲು ಆರಂಭಿಸಿದೆ! ಕಳೆದ 12 ತಿಂಗಳುಗಳ ಅವಧಿಯಲ್ಲಿ 5ನೇ ರಾಜ್ಯ ಬಿಜೆಪಿಯ ತೆಕ್ಕೆಯಿಂದ ‘ಕೈ’ ಜಾರಿದೆ! ಬಿಜೆಪಿ ಆಡಳಿತದ ಜಾರ್ಖಂಡ್ ರಾಜ್ಯ, ಕಾಂಗ್ರೆಸ್ ಹಾಗೂ ಜೆಎಂಎಂ ಪಾಲಾಗಿದೆ.

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನ ಹೊಂದಿರುವ ಪಕ್ಷವಾಯಿತು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದವು. ಈ ವೇಳೆ ಆಪರೇಷನ್ ಕಮಲ ಮಾಡಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದಿದ್ದರಿಂದ, ಕೇಂದ್ರ ನಾಯಕರೆಲ್ಲ ಎರಡು ತಿಂಗಳುಗಳ ಕಾಲ ರಾಜ್ಯ ಪ್ರವಾಸ ಮಾಡಿ, ರ್ಯಾಲಿಗಳನ್ನು ಮಾಡಿದರು. ಆದರೆ ಕರ್ನಾಟಕದ ಜನರು ಈ ಬಾರಿ ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡುವ ಮೂಲಕ ಅಧಿಕಾರ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು (10)

ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಗೋವಾ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ (4)

ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ರ್ಟ

ಕಾಂಗ್ರೆಸ್ ಅಥವಾ ಅದರ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳು (7)

ಬಿಹಾರ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ರಾಜಸ್ಥಾನ, ತಮಿಳುನಾಡು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...