Homeಮುಖಪುಟಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ...

ಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ ಸರ್ಕಾರ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಈ ವರ್ಷದಲ್ಲಿ ಭಯೋತ್ಪಾದಕ-ಸಂಬಂಧಿತ ಹಿಂಸಾಚಾರ ಎಂದು ಆರೋಪಿಸಲಾಗಿರುವ ಘಟನೆಗಳಲ್ಲಿ, 40 ನಾಗರಿಕರು ಮತ್ತು ಕನಿಷ್ಠ 35 ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒಕ್ಕೂಟ ಸರ್ಕಾರ ಲೋಕಸಭೆಯಲ್ಲಿ ಹೇಳಿದೆ. ಮಂಗಳವಾರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಈ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಅದೇ ಹಿಂಸಾಚಾರದಲ್ಲಿ ಕನಿಷ್ಠ 72 ನಾಗರಿಕರು ಗಾಯಗೊಂಡಿದ್ದು, ಸೇನೆ ಮತ್ತು ಭದ್ರತಾ ಸಿಬ್ಬಂದಿಗಳ ಗಾಯಗೊಂಡವರ ಸಂಖ್ಯೆ 86 ಕ್ಕೆ ಏರಿದೆ ಎಂದು ಸರ್ಕಾರ ಹೇಳಿದೆ. ಈ ಎಲ್ಲಾ ಅಂಕಿ ಅಂಶಗಳು ಈ ವರ್ಷ ನವೆಂಬರ್ 15 ರವರೆಗೆ ವರದಿಯಾದ ಸಾವುಗಳು ಮತ್ತು ಗಾಯಗೊಂಡವರದ್ದಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಕಳೆದ ಮೂರು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ 1,033 ಭಯೋತ್ಪಾದಕರ ದಾಳಿಯ ಘಟನೆಗಳು ನಡೆದಿವೆ ಎಂದು ಸರ್ಕಾರ ಸೋಮವಾರ ರಾಜ್ಯಸಭೆಗೆ ತಿಳಿಸಿದೆ. ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಒದಗಿಸಿದ ವಿವರಗಳ ಪ್ರಕಾರ 2019 ರಲ್ಲಿ 594 ಘಟನೆಗಳು ವರದಿಯಾಗಿದ್ದು, ಇದು ಮೂರು ವರ್ಷಗಳಲ್ಲೆ ಅತಿ ಹೆಚ್ಚು ಘಟನೆಗಳು ನಡೆದ ವರ್ಷವಾಗಿದೆ.

ಈ ವರ್ಷ ನವೆಂಬರ್ 15 ರವರೆಗೆ 196 ಘಟನೆಗಳು ನಡೆದಿವೆ ಎಂದು ಅವರು ದೇಶಕ್ಕೆ ವಿವರಿಸಿದ್ದಾರೆ.

ಭಯೋತ್ಪಾದಕರಿಗೆ ನೆರವು ನೀಡುವವರನ್ನು ಹತ್ತಿಕ್ಕುವುದು, ರಾತ್ರಿ ಗಸ್ತು ತಿರುಗುವುದು, ಭದ್ರತಾ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯತೆ ಮತ್ತು ಭಯೋತ್ಪಾದಕರಿಗೆ ಧನಸಹಾಯ ಒದಗಿಸುವವರ ವಿರುದ್ಧ ಕಾನೂನುಬದ್ಧವಾಗಿ ನಡೆಯುವುದು ಸೇರಿದಂತೆ ಭಯೋತ್ಪಾದಕರನ್ನು ಎದುರಿಸುವಾಗ ಜಮ್ಮು ಕಾಶ್ಮೀರದಲ್ಲಿನ ಪ್ರಾಣಹಾನಿಯನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ನಿತ್ಯಾನಂತ ರೈ ಸಂಸತ್ತಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ದಾಳಿಗಳು ಕಡಿಮೆಯಾಗಿವೆ ಎಂದು ಸಚಿವ ಅಜಯ್ ಭಟ್ ರಾಜ್ಯಸಭೆಯಲ್ಲಿ ಹೇಳಿದ್ದು, ಮಿಲಿಟರಿ ಸಿಬ್ಬಂದಿಗಳ ಜೀವಹಾನಿ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

“ಅಕ್ಟೋಬರ್‌ ತಿಂಗಳ ಬಹುಪಾಲು ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಶಂಕಿತ ಎಲ್‌ಇಟಿ ಉಗ್ರರೊಂದಿಗೆ ಚಕಮಕಿಯಲ್ಲಿ ತೊಡಗಿದೆ. ನವೆಂಬರ್ 13 ರಂದು ಚುರಾಚಂದ್‌ಪುರ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ಶಂಕಿತ ಬಂಡುಕೋರರು ದಾಳಿ ಹಾಕಿದ್ದರು. ಈ ಘಟನೆಯಲ್ಲಿ ಅಸ್ಸಾಂ ರೈಫಲ್ಸ್‌ನ 5 ಸಿಬ್ಬಂದಿ ಮತ್ತು 2 ನಾಗರಿಕರು ಸೇರಿದಂತೆ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ, 6 ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ” ಎಂದು ಸಚಿವ ನಿತ್ಯಾನಂದ ರೈ ವರದಿ ಮಾಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಸಿದುಕೊಂಡು ಎರಡು ವರ್ಷಗಳು ಕಳೆದಿವೆ. ಅಲ್ಲಿನ ಜನರ ಸಂಕಷ್ಟಕಗಳನ್ನು ಕಳೆದು ಒಳ್ಳೆಯ ದಿನಗಳು ಬರಲಿವೆ ಎಂದು ದೇಶದ ಜನರಿಗೆ ತಿಳಿಸಲಾಗಿತ್ತು. ಆದರೆ ಅಲ್ಲಿನ ಜನರಿಗೆ ಸುಮಾರು ಒಂದು ವರ್ಷಗಳ ಕಾಲ ಲಾಕ್‌ಡೌನ್‌ ಶಿಕ್ಷೆ ನೀಡಲಾಗಿತ್ತು. ಜೊತೆಗೆ ರಾಜಕೀಯ ನಾಯಕರನ್ನು ಗೃಹಬಂಧನ ಹಾಗೂ ಜೈಲಿಗೆ ಅಟ್ಟಲಾಗಿತ್ತು.

ಇದನ್ನೂ ಓದಿ:ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...