Homeಕರ್ನಾಟಕಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

ಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

- Advertisement -
- Advertisement -

ರಾಜ್ಯದ ೧೫ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕ್‌‌ಸ್ ನಡೆಸಿವೆ. ಅದರಲ್ಲೂ ಬಿಜೆಪಿಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್‌ ಹಂಚಿಕೆ ವಿಚಾರ ಕಾರ್ಯಕರ್ತರು ಮತ್ತು ಹಿಂದಿನ ಚುನಾವಣೆಯಲ್ಲಿ ಸೋತವರ ವಿರೋಧಕ್ಕೆ ಕಾರಣವಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ಕೊಡುವ ನಿರ್ಧಾರಕ್ಕೆ ಖಂಡನೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಲ್ಲಿ ದಕ್ಷಿಣ ಕರ್ನಾಟಕದ ಎಂಟು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ನೇತೃತ್ವದಲ್ಲಿ ನಿನ್ನೆ ( ಬುಧವಾರ) ಸಭೆ ನಡೆಯಿತು. ಅನರ್ಹರಿಗೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೂಲ ಕಾಂಗ್ರೆಸ್ಸಿಗರು ಅನರ್ಹರ ಹೆಸರು ಸೂಚಿಸುತ್ತಿರುವ ಕ್ರಮವನ್ನು ವಿರೋಧಿಸುತ್ತಿದ್ದಾರೆ.

ಅಲ್ಲದೇ ’ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳಿಗೆ ಅನರ್ಹರಿಗೆ ಟಿಕೆಟ್ ಕೊಟ್ಟು ಗೆದ್ದರೆ, ಮುಂದೆ ನಡೆಯುವ ಬಿಬಿಎಂಪಿ ಚುನಾವಣೆಯಲ್ಲಿ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುತ್ತಾರೆ. ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರು ಹಾಗೂ ಹಾಲಿ ಸದಸ್ಯರ ಕಥೆ ಏನು..?’ ಎಂದು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಎಸ್‌.ಟಿ.ಸೋಮಶೇಖರ್‌ ಯಶವಂತಪುರ ಕ್ಷೇತ್ರದಲ್ಲಿ ಕಾರ್ಯಕರ್ತರೊಬ್ಬರ ಮೇಲೆ ೧೩ ಕೇಸ್‌ ಹಾಕಿಸಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯರ್ತರ ಗತಿ ಏನು ಎಂದು ಪ್ರಶ್ನಿಸಿ, ಕ್ಷೇತ್ರದ ಮುಖಂಡರು ತಕರಾರು ತೆಗೆದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇತ್ತ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಗೋಪಾಲಯ್ಯಗೆ ಟಿಕೆಟ್ ನಿಡಲು ನೆ.ಲ.ನರೇಂದ್ರ ಬಾಬು, ಎಸ್.ಹರೀಶ್, ಎಂ.ನಾಗರಾಜ್ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡಬೇಕು ಎಂದರು. ಇದಕ್ಕೆ ನಾಗರಾಜ್‌ ಸಮ್ಮತಿ ಸೂಚಿಸಿದರು. ಸುಪ್ರೀಂಕೋರ್ಟ್‌‌ನಲ್ಲಿ ಅನರ್ಹರ ಪ್ರಕರಣದ ತೀರ್ಪು ಬಾಕಿ ಇದೆ. ತೀರ್ಪು ಪ್ರಕಟವಾದ ನಂತರ ತೀರ್ಮಾನ ಎಂದು ನರೇಂದ್ರ ಬಾಬು ಅಭಿಪ್ರಾಯಪಟ್ಟರು. ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡರಿಗೆ ಟಿಕೆಟ್ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಸಭೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ನಡೆದ ಚರ್ಚೆಯಲ್ಲಿ ಯಾರೊಬ್ಬರೂ ಒಡಕಿನ ಮಾತನಾಡಿಲ್ಲ. ಅಭ್ಯರ್ಥಿ ಯಾರೇ ನಿಂತರೂ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಸಭೆ ಅಕ್ಟೋಬರ್‌ ೨೬ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ ಬರೆದ 2,200ಕ್ಕೂ...

0
ರಾಜಸ್ಥಾನದ ಬನ್ಸ್ವಾರದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಹೇಳಿಕೆಗಳನ್ನು ನೀಡಿದ ಬಿಜೆಪಿಯ ಸ್ಟಾರ್ ಪ್ರಚಾರಕ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ 2,200ಕ್ಕೂ ಹೆಚ್ಚು ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದರೆ...