Homeಮುಖಪುಟಲೋಕಸಭೆ ವಿರೋಧಪಕ್ಷದ ನಾಯಕನ ಸ್ಥಾನದಿಂದ ಅಧೀರ್‌ ರಂಜನ್ ಚೌಧರಿ ಬದಲಾವಣೆಗೆ ಸಿದ್ಧತೆ

ಲೋಕಸಭೆ ವಿರೋಧಪಕ್ಷದ ನಾಯಕನ ಸ್ಥಾನದಿಂದ ಅಧೀರ್‌ ರಂಜನ್ ಚೌಧರಿ ಬದಲಾವಣೆಗೆ ಸಿದ್ಧತೆ

- Advertisement -
- Advertisement -

ಲೋಕಸಭೆ ವಿರೋಧಪಕ್ಷದ ನಾಯಕನ ಸ್ಥಾನದಿಂದ ಅಧೀರ್ ರಂಜನ್ ಚೌಧರಿ ಅವರ ಬದಲಾವಣೆಗೆ ಸಿದ್ಧತೆಗಳು ಆರಂಭವಾಗಿದೆ. ಪಶ್ಚಿಮ ಬಂಗಾಳದ ಸಂಸದ ಚೌಧರಿ ಬದಲಾಗಿ ಬೇರೆ ನಾಯಕರನ್ನು ನೇಮಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ. ಜುಲೈ 19 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಇದಕ್ಕೂ ಮೊದಲೇ ವಿರೋಧಪಕ್ಷದ ನಾಯಕರ ಬದಲಾವಣೆ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಚೌಧರಿ ಬದಲಾಗಿ ಶಶಿ ತರೂರ್ ಅಥವಾ ಮನೀಶ್ ತಿವಾರಿ ಅವರನ್ನು ವಿರೋಧಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಸಂಭವವಿದ್ದು, ಸದ್ಯದಲ್ಲೇ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ತೀರ್ಮಾನ ಹೊರಬೀಳಬಹುದಾಗಿದೆ. ಶಶಿ ತರೂರ್ ಮತ್ತು ಮನೀಶ್ ತಿವಾರಿ ಕಾಂಗ್ರೆಸ್‌ನ G-23 ರ ಗುಂಪು ಎಂದು ಗುರುತಿಸಲಾದ ನಾಯಕತ್ವದ ಬದಲಾವಣೆ ಕುರಿತು ಪತ್ರ ಬರೆದ ಸಂಸದರ ಪಟ್ಟಿಗೆ ಸೇರಿದವರಾಗಿದ್ದಾರೆ.

ಅಧೀರ್ ರಂಜನ್ ಚೌಧರಿ ಉಸ್ತುವಾರಿಯಲ್ಲಿ ಕಾಂಗ್ರೆಸ್‌ ಪಕ್ಷವು ಪಶ್ಚಿಮ ಬಂಗಾಳ ಚುನಾವಣೆಯನ್ನು ಎದುರಿಸಿ ಹೀನಾಯ ಸೋಲನ್ನು ಅನುಭವಿಸಿತ್ತು. ಚೌಧರಿ ಅವರ ವೈಫಲ್ಯದ ಕಾರಣಕ್ಕೆ ಮತ್ತು ತೃಣಮೂಲ ಕಾಂಗ್ರೆಸ್‌ ಜೊತೆ ಹಳಸಿದ ಕಾಂಗ್ರೆಸ್‌ ಸಂಬಂಧವನ್ನು ಸರಿಪಡಿಸುವ ಉದ್ಧೇಶವು ಇದರಲ್ಲಿ ಇದೆ ಎಂದು ಹೇಳಲಾಗುತ್ತಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಸಂಸತ್ತಿನ ಒಳಗೆ ಹೋರಾಟವನ್ನು ನಡೆಸಲು ಕಾಂಗ್ರೆಸ್‌ಗೆ TMC ಮತ್ತು ಇತರ ವಿರೋಧಪಕ್ಷಗಳ ಬೆಂಬಲ ಅಗತ್ಯವಾಗಿದ್ದು ಈ ದೃಷ್ಟಿಯಿಂದ ಪ್ರಭಾವಿ ಸಂಸದರೊಬ್ಬರನ್ನು ಲೋಕಸಭೆಯ ವಿರೊಧ ಪಕ್ಷದ ನಾಯಕರನ್ನಾಗಿ ನೇಮಿಸಲು ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ.


ಇದನ್ನೂ ಓದಿ; ಯುಪಿ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರ ಅಪಹರಣ, ಬಲ ಪ್ರಯೋಗದಿಂದ ಮತ ಚಲಾಯಿಸದಂತೆ ಮಾಡಲಾಗಿದೆ-…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...