Homeಮುಖಪುಟಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದ ಅವಧಿಯಲ್ಲಿ ಬರೆದ ‘ಅನ್‌ಲೈಕ್ಲಿ ಪ್ಯಾರಡೈಸ್’ (Unlikely Paradise) ಪುಸ್ತಕದಲ್ಲಿ ಹೇಳಿರುವುದಾಗಿ timesofindia.indiatimes.com ವರದಿ ಮಾಡಿದೆ.

ಅನ್‌ಲೈಕ್ಲಿ ಪ್ಯಾರಡೈಸ್ ಮರಾಠಿ ಪುಸ್ತಕವು 2025ರಲ್ಲಿ ಹೊರಬಂದಿದ್ದು, ಹೆಚ್ಚಿನ ವಿಷಯಗಳನ್ನು ಒಳಗೊಂಡಿರುವ ಇದರ ಇಂಗ್ಲಿಷ್ ಆವೃತ್ತಿಯು ಇದೇ ಸೋಮವಾರ ಬಿಡುಗಡೆಯಾಗಲು ಸಿದ್ಧವಾಗಿದೆ.

ಧನ್ಕರ್ ಮತ್ತು ಅವರ ಪತ್ನಿ ತಮ್ಮ ಜೈಪುರದ ಮನೆಯನ್ನು ಮಾರಾಟ ಮಾಡಿ, ಬಂದ ಹಣದ ಒಂದು ಭಾಗವನ್ನು ವಿದೇಶಕ್ಕೆ ವರ್ಗಾಯಿಸಿದ್ದಾರೆ ಎಂಬ ವದಂತಿಗಳು ಹರಡಿದ್ದವು ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಅವರ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಲು ಫೈಲ್ ಒಂದನ್ನು ಸಿದ್ಧಪಡಿಸಿದ್ದವು ಎಂಬುವುದಾಗಿ ಈ ಪುಸ್ತಕವು ಪ್ರತಿಪಾದಿಸಿದೆ ಎಂದು ವರದಿ ಉಲ್ಲೇಖಿಸಿದೆ.

“ಮೋದಿ ಸರ್ಕಾರದ ವಿರುದ್ಧ ಧನ್ಕರ್ ಅವರು ಸ್ವತಂತ್ರ ರಾಜಕೀಯ ನಡೆಗಳನ್ನು ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಾಗ, ಇಡಿ ಅವರ ಮುಂದೆಯೇ ಆ ಕಡತವನ್ನು (ಫೈಲ್) ಪ್ರಸ್ತುತಪಡಿಸಿತು ಮತ್ತು ರಾಜೀನಾಮೆ ನೀಡುವಂತೆ ಅವರ ಮೇಲೆ ಒತ್ತಡ ಹೇರಿತು.”

“ಅವರು (ಧನ್ಕರ್) ಆರಂಭದಲ್ಲಿ ಈ ಒತ್ತಡಕ್ಕೆ ಮಣಿಯಲು ನಿರಾಕರಿಸಿದಾಗ ತನಿಖೆಯು ಮತ್ತಷ್ಟು ತೀವ್ರಗೊಂಡಿತು, ಇದರಿಂದಾಗಿ ಅವರು ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದರು” ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ ಎಂದು ವರದಿ ವಿವರಿಸಿದೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮಾಡಿದ್ದರೆನ್ನಲಾದ ಚುನಾವಣಾ ನಿಯಮಗಳ ಉಲ್ಲಂಘನೆಯ ವಿರುದ್ಧ ಅಶೋಕ್ ಲಾವಾಸಾ ಅವರು ಭಿನ್ನ ನಿಲುವು ತಳೆದಿದ್ದರು. ಈ ಕಾರಣಕ್ಕಾಗಿಯೇ ಮಾಜಿ ಚುನಾವಣಾ ಆಯುಕ್ತರಾದ ಲಾವಾಸಾ ಅವರ ಮನೆಯ ಮೇಲೆ ದಾಳಿ ನಡೆಸಲಾಯಿತು ಮತ್ತು ಅವರ ಕುಟುಂಬದವರು ಇಡಿ ಸಮನ್ಸ್ ಎದುರಿಸಬೇಕಾಯಿತು ಎಂದು ರಾವುತ್ ಆರೋಪಿಸಿದ್ದಾರೆ.”

“ಭಾರತೀಯ ಚುನಾವಣಾ ನೀತಿ ಸಂಹಿತೆಯ ಎಂಟು ಉಲ್ಲಂಘನೆಗಳನ್ನು ಉಲ್ಲೇಖಿಸಿ ಬಂದ ದೂರುಗಳ ಆಧಾರದ ಮೇಲೆ, ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮೇಲಿನ ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ಕ್ರಮಗಳನ್ನು ಕೈಗೊಂಡಿದ್ದರು.”

“ಮೌನವಾಗಿರುವಂತೆ ಸಲಹೆ ನೀಡಲಾಗಿದ್ದರೂ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದರು. ನಿರೀಕ್ಷೆಯಂತೆಯೇ, ತಮ್ಮ ಭಿನ್ನ ನಿಲುವಿಗಾಗಿ ಲಾವಾಸಾ ಮತ್ತು ಅವರ ಕುಟುಂಬದವರು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಯಿತು” ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ತಮ್ಮ ಪುಸ್ತಕದಲ್ಲಿ ಆರೋಪಿಸಿದ್ದಾರೆ. ಅವರ (ಲಾವಾಸ) ಮನೆಯ ಮೇಲೆ ನಡೆದ ಇಡಿ ದಾಳಿಯು 2020ರಲ್ಲಿ ಅವರು ರಾಜೀನಾಮೆ ನೀಡುವಂತೆ ಮಾಡಿತು ಮತ್ತು ಅದರ ನಂತರವೂ ಅವರು ತನಿಖಾ ಸಂಸ್ಥೆಯ ಕಣ್ಗಾವಲಿನಲ್ಲಿದ್ದರು ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ” ಎಂದು timesofindia.indiatimes.com ವರದಿ ತಿಳಿಸಿದೆ.

“ಯುಪಿಎ ಸರ್ಕಾರದ ಅವಧಿಯಲ್ಲಿ, ಗುಜರಾತ್‌ನ ಅಂದಿನ ಮುಖ್ಯಮಂತ್ರಿಯಾಗಿದ್ದ ಮೋದಿಯವರನ್ನು ಗುಜರಾತ್ ದಂಗೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸುವ ಸಾಧ್ಯತೆಯಿದೆ ಎಂಬ ವದಂತಿಗಳಿದ್ದವು ಎಂದು ಪುಸ್ತಕವು ಪ್ರತಿಪಾದಿಸಿದೆ. ಆದಾಗ್ಯೂ, ಅಂದಿನ ಕೇಂದ್ರ ಸಚಿವರಾಗಿದ್ದ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಈ ನಡೆಯ ಬಗ್ಗೆ ಅಸಮಾಧಾನ ಹೊಂದಿದ್ದರು. ‘ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸುವುದು ಸರಿಯಲ್ಲ’ ಎಂದು ಪವಾರ್ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದರು ಎಂದು ಪುಸ್ತಕದಲ್ಲಿ ಹೇಳಲಾಗಿದೆ.”

“ಈ ಅಭಿಪ್ರಾಯವು ಅನೇಕರ ಮನ ಗೆದ್ದಿತು, ಇದರಿಂದಾಗಿ ಮೋದಿ ಅವರು ಜೈಲುವಾಸದಿಂದ ಪಾರಾದರು. ಆದರೆ, ಮೋದಿ ಅವರು ರಾಜಕೀಯದಲ್ಲಿನ ಈ ಉಪಕಾರಗಳನ್ನು ಮತ್ತು ನೈತಿಕತೆಯನ್ನು ನೆನಪಿಸಿಕೊಳ್ಳುತ್ತಾರೆಯೇ?” ಎಂದು ಪುಸ್ತಕವು ಪ್ರಶ್ನಿಸಿದೆ.”

“ಅಮಿತ್ ಶಾ ಅವರು ಹಲವು ಪ್ರಕರಣಗಳಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾಗ ಮತ್ತು ಸಿಬಿಐ ಅವರ ಜಾಮೀನನ್ನು ವಿರೋಧಿಸುತ್ತಿದ್ದ ಸಂದರ್ಭದಲ್ಲಿ, ಅವರಿಗೆ ಜಾಮೀನು ಸಿಗುವಂತೆ ಮಾಡಲು ಶರದ್ ಪವಾರ್ ಮತ್ತು ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಇಬ್ಬರೂ ಸಹಾಯ ಮಾಡಿದ್ದರು ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಸಿಬಿಐ ಘಟಕದಲ್ಲಿದ್ದ ಮಹಾರಾಷ್ಟ್ರ ಕೇಡರ್‌ನ ಅಧಿಕಾರಿಯೊಬ್ಬರು ಅಮಿತ್ ಶಾ ಅವರಿಗೆ ಜಾಮೀನು ನೀಡುವುದನ್ನು ವಿಶೇಷವಾಗಿ ವಿರೋಧಿಸುತ್ತಿದ್ದರು. ಆಗ ಮೋದಿಯವರು ಶರದ್ ಪವಾರ್ ಅವರ ಮಧ್ಯಸ್ಥಿಕೆಯನ್ನು ಕೋರಿದರು ಮತ್ತು ಪವಾರ್ ಅವರು ತಮ್ಮ ಸ್ವಭಾವದಂತೆ ಅವರಿಗೆ ಸಹಾಯ ಮಾಡಿದರು, ಇದರಿಂದಾಗಿ ಶಾ ಜಾಮೀನಿನ ಮೇಲೆ ಬಿಡುಗಡೆಯಾದರು. ಆದರೆ, ನಂತರದ ದಿನಗಳಲ್ಲಿ ಅಮಿತ್ ಶಾ ಅವರು ಪವಾರ್ ಮತ್ತು ಮಹಾರಾಷ್ಟ್ರವನ್ನು ಹೇಗೆ ನಡೆಸಿಕೊಂಡರು ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಗುಜರಾತ್ ದಂಗೆಯ ನಂತರ ಅಮಿತ್ ಶಾ ಅವರು ‘ಗಂಭೀರ ಅಪಾಯ’ವನ್ನು ಎದುರಿಸುತ್ತಿದ್ದರು ಮತ್ತು ದಂಗೆಯ ತನಿಖೆಯು ಸಿಬಿಐ ನಿಯಂತ್ರಣದಲ್ಲಿದ್ದ ಕಾರಣ ಮೋದಿಯವರಿಗೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪುಸ್ತಕವು ಪ್ರತಿಪಾದಿಸಿದೆ. ಆ ಸಮಯದಲ್ಲಿ ಅಮಿತ್ ಶಾ ಅವರು ತಮ್ಮ ಮಗನೊಂದಿಗೆ ಕಪ್ಪು ಮತ್ತು ಹಳದಿ ಬಣ್ಣದ ಟ್ಯಾಕ್ಸಿಯಲ್ಲಿ ಠಾಕ್ರೆ ಅವರ ನಿವಾಸಕ್ಕೆ ಆಗಮಿಸಿದ್ದರು ಮತ್ತು ತಮ್ಮ ಪ್ರಕರಣದ ನ್ಯಾಯಾಧೀಶರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ವಿನಂತಿಸಿದ್ದರು ಎಂದು ಪುಸ್ತಕವು ಹೇಳಿದೆ.”

“ನೀವು ನ್ಯಾಯಾಧೀಶರೊಂದಿಗೆ ಮಾತನಾಡಿದರೆ, ಅವರು ಕೇಳುತ್ತಾರೆ ಮತ್ತು ನಿಮ್ಮ ಮಾತನ್ನು ಮೀರುವುದಿಲ್ಲ ಎಂದು ಶಾ ಅವರು ಠಾಕ್ರೆಯವರಿಗೆ ತಿಳಿಸಿದರು ಎಂದು ಪುಸ್ತಕವು ಪ್ರತಿಪಾದಿಸಿದೆ. ಆನಂತರ ಏನಾಯಿತು ಎಂಬುದನ್ನು ಬಹಿರಂಗಪಡಿಸುವುದು ನೈತಿಕವಾಗಿ ಸರಿಯಲ್ಲ. ಆದರೆ, ಅಂದು ಬಾಳಾಸಾಹೇಬರು ಮನೋಹರ್ ಜೋಶಿಯವರನ್ನು ಕರೆಸಿ, ನ್ಯಾಯಾಧೀಶರ ಹೆಸರನ್ನು ನೀಡಿ ಈ ಬಗ್ಗೆ ಚರ್ಚಿಸುವಂತೆ ಸೂಚಿಸಿದರು. ಮಾತು ಮುಗಿಸುವಾಗ, ‘ನೀವು ಯಾವುದೇ ಉನ್ನತ ಸ್ಥಾನದಲ್ಲಿರಬಹುದು, ಆದರೆ ನೀವು ಕೂಡ ಒಬ್ಬ ಹಿಂದೂ ಎಂಬುದನ್ನು ನೆನಪಿಡಿ’ ಎಂದು ಠಾಕ್ರೆ ಹೇಳಿದ್ದರು ಎಂದು ಈ ಪುಸ್ತಕವು ವಿವರಿಸಿದೆ”

“ಆ ಒಂದು ಕರೆ ಅಮಿತ್ ಶಾ ಅವರ ರಾಜಕೀಯ ಪಥವನ್ನೇ ಬದಲಿಸಿತು. ಆದರೂ, ಅವರು ಶಿವಸೇನೆ ಮತ್ತು ಠಾಕ್ರೆ ಕುಟುಂಬದ ಮೇಲೆ ತೋರಿಸಿದ ಕೃತಘ್ನತೆಯನ್ನು ಇಡೀ ಜಗತ್ತೇ ನೋಡಿದೆ ಎಂಬುವುದಾಗಿ ಪುಸ್ತಕವು ಪ್ರತಿಪಾದಿಸಿದೆ” ಎಂದು timesofindia.indiatimes.com ಭಾನುವಾರ (ಮಾ.22) ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...