Homeಮುಖಪುಟಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

- Advertisement -
- Advertisement -

ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ.

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಸ್ಟಾರ್ ಪ್ರಚಾರಕರ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ’ ಆರೋಪದ ಮೇಲೆ ನೋಟಿಸ್ ಜಾರಿ ಮಾಡಿದ ಸುಮಾರು ಒಂದು ತಿಂಗಳ ನಂತರ, ಭಾರತೀಯ ಚುನಾವಣಾ ಆಯೋಗವು ಇಂದು ಬಿಜೆಪಿ ಸ್ಟಾರ್ ಪ್ರಚಾರಕರಿಗೆ ಕೋಮುವಾದಿ ಭಾಷಣ ಮಾಡದಂತೆ ಸೂಚಿಸಿದೆ. ವಿರೋಧ ಪಕ್ಷದವರು ‘ಸಂವಿಧಾನವನ್ನು ರದ್ದುಗೊಳಿಸಬಹುದು’ ಎಂದು ಹೇಳುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ. ಈ ಮೊದಲು ನೀಡಿದ್ದ ನೊಟೀಸ್‌ಗೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷದ ಅಧ್ಯಕ್ಷರುಗಳು ತಮ್ಮ ಸ್ಟಾರ್‌ ಪ್ರಚಾರಕರನ್ನು ಸಮರ್ಥಿಸಿಕೊಂಡಿದ್ದರು.

ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ನೆಲೆಯಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಮತ್ತು  ಭಾರತದ ಸಾಮಾಜಿಕ-ಸಾಂಸ್ಕೃತಿಕ ನೆಲೆಗಟ್ಟನ್ನು ಚುನಾವಣೆಗಾಗಿ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗವು ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಹೇಳಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ವಿರೋಧ ಪಕ್ಷದ ಆರೋಪದ ಹಿನ್ನೆಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ಮೊದಲು ಇದೇ ರೀತಿಯ ಸೂಚನೆಗಳನ್ನು ನೀಡಿತ್ತು. ಪಕ್ಷದ ಸ್ಟಾರ್ ಪ್ರಚಾರಕರಿಗೆ ಧಾರ್ಮಿಕ ಮತ್ತು ಕೋಮು ಪ್ರಚೋದಿಸುವ ಪ್ರಚಾರದಿಂದ ದೂರವಿರುವಂತೆ ಸೂಚಿಸಿತ್ತು. ಇದಲ್ಲದೆ ಚುನಾವಣಾ ಆಯೋಗವು ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸದಂತೆ ಮತ್ತು ಸಶಸ್ತ್ರ ಪಡೆಗಳ ಸಾಮಾಜಿಕ-ಆರ್ಥಿಕ ಸಂಯೋಜನೆಯ ಬಗ್ಗೆ ಸಂಭಾವ್ಯ ವಿಭಜಕ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್‌ಗೆ ಸೂಚಿಸಿದೆ. ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ‘ಸಂವಿಧಾನವನ್ನು ರದ್ದುಗೊಳಿಸಬಹುದು’ ಎಂಬ ತಪ್ಪು ಅಭಿಪ್ರಾಯವನ್ನು ನೀಡುವ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಕಾಂಗ್ರೆಸ್‌ಗೆ ಚುನಾವಣಾ ಆಯೋಗ ಆಗ್ರಹಿಸಿದೆ.

ತಮ್ಮ ಪಕ್ಷದ ಸ್ಟಾರ್ ಪ್ರಚಾರಕರು ತಮ್ಮ ಭಾಷಣವನ್ನು ಸರಿಪಡಿಸಲು, ಭಾಷಣ, ಹೇಳಿಕೆಗಳಲ್ಲಿ ಸಜ್ಜನಿಕೆಯನ್ನು ಕಾಪಾಡಿಕೊಳ್ಳಲು ಔಪಚಾರಿಕ ಟಿಪ್ಪಣಿಗಳನ್ನು ನೀಡುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಿಗೆ ಚು. ಆಯೋಗವು ಆಗ್ರಹಿಸಿದೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...