Homeಮುಖಪುಟಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ ರಾಜ್ಯ,...

ಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ ರಾಜ್ಯ, ವಿದೇಶಗಳಿಗೆ ಹಲವು ಬಾರಿ ಭೇಟಿ ನೀಡಿದ್ದರು; ಅಂಕಿ-ಅಂಶಗಳಲ್ಲಿ ಬಹಿರಂಗ

- Advertisement -
- Advertisement -

ಮಣಿಪುರದಲ್ಲಿ 2023ರ ಮೇ.3ರಂದು ಜನಾಂಗೀಯ ಹಿಂಸಾಚಾರ ನಡೆದಿದೆ. ಇದೀಗ ಈ ಹಿಂಸಾತ್ಮಕ ಘಟನೆ ನಡೆದು ಸರಿ ಸುಮಾರು ಒಂದು ವರ್ಷಗಳೇ ಕಳೆದಿದೆ. ಆದರೆ ಪ್ರಧಾನಿ ಮೋದಿ ಮಾತ್ರ ಈ ಒಂದು ವರ್ಷದ ಅವಧಿಯಲ್ಲಿ ಒಂದು ಬಾರಿ ಕೂಡ ಮಣಿಪುರಕ್ಕೆ ಭೇಟಿಯನ್ನು ನೀಡಿಲ್ಲ, ಆದರೆ ಮೋದಿ ಈ ಅವಧಿಯಲ್ಲಿ 162 ಸರಕಾರಿ ಅಥವಾ ಖಾಸಗಿ ಉದ್ದೇಶಗಳಿಗೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿರುವ ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ವಿದೇಶಕ್ಕೆ 14 ಅಧಿಕೃತ ಭೇಟಿಗಳನ್ನು ಮಾಡಿದ್ದಾರೆ. ಮಣಿಪುರ ಹಿಂಸಾಚಾರವು 230ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಯಿತು ಮತ್ತು 60,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಮಣಿಪುರದಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿದೆ. ಇಷ್ಟೊಂದು ಭಯಾನಕ ಹಿಂಸಾಚಾರ ನಡೆದರೂ, ಸುಪ್ರೀಂಕೋರ್ಟ್‌ ಘಟನೆಯಲ್ಲಿ ಸರಕಾರದ ನಿಷ್ಕ್ರಿಯತೆಯನ್ನು ಗಮನಿಸಿದರೂ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಸ್ಥಾನದಲ್ಲಿ ಮುಂದುವರೆದಿದ್ದಾರೆ, ಅವರ ಅಥವಾ ಅವರ ಸಚಿವ ಸಂಪುಟದ ಯಾವುದೇ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಮಾಡಿಲ್ಲ ವಿರೋಧ ಪಕ್ಷಗಳು ಟೀಕಿಸುತ್ತಲೇ ಬಂದಿದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿದ್ದರು. ಅವರು ಮಣಿಪುರದಿಂದಲೇ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಿದ್ದರು.

ಪಿಎಂಒ ವೆಬ್‌ಸೈಟ್‌ನ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ 2023ರ ಮೇ. ತಿಂಗಳಿನಿಂದ ಏಪ್ರಿಲ್ 2024ರ ನಡುವೆ ಗರಿಷ್ಠ 24 ಬಾರಿ ರಾಜಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅದಲ್ಲದೆ 22 ಬಾರಿ ಭೇಟಿ ಮಧ್ಯಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಈ ಎರಡೂ ರಾಜ್ಯಗಳಲ್ಲೂ ಕಳೆದ ನವೆಂಬರ್‌ನಲ್ಲಿ ಚುನಾವಣೆ ನಡೆದಿದೆ.

ಮಣಿಪುರದಲ್ಲಿ ಹಿಂಸಾಚಾರ ಆರಂಭವಾದಾಗ ಪ್ರಧಾನಿ ಮೋದಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರು. ಬಿಬಿಸಿ ಅಂಕಿಅಂಶಗಳ ಪ್ರಕಾರ ಅವರು ಕಳೆದ ಒಂದು ವರ್ಷದಲ್ಲಿ 8 ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಈ ಅವಧಿಯಲ್ಲಿ ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ 10 ಬಾರಿ ಮತ್ತು ಲೋಕಸಭೆಗೆ ಗರಿಷ್ಠ ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶಕ್ಕೆ 17 ಬಾರಿ ಭೇಟಿ ನೀಡಿದ್ದಾರೆ.

ಈ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶಗಳಿಗೆ ಭೇಟಿ ನೀಡಿದ್ದರು ಆದರೆ ಮಣಿಪುರಕ್ಕೆ ಭೇಟಿ ನೀಡಲಿಲ್ಲ. ಅವರು ಅಸ್ಸಾಂಗೆ ಮೂರು ಮತ್ತು ತ್ರಿಪುರಾ ಮತ್ತು ಅರುಣಾಚಲ ಪ್ರದೇಶಕ್ಕೆ ತಲಾ ಒಂದು ಬಾರಿ ಭೇಟಿ ನೀಡಿದ್ದಾರೆ. ಅಧಿಕೃತ ದಾಖಲೆಗಳ ಪ್ರಕಾರ, ‘ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಈಶಾನ್ಯ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮಾ.9ರಂದು ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಕಳೆದ ನವೆಂಬರ್‌ನಲ್ಲಿ 5 ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ 4 ರಾಜ್ಯಗಳಿಗೆ ಹೋಗಿದ್ದರು ಆದರೆ ಮಣಿಪುರದ ಹಿಂಸಾಚಾರದಿಂದ ಸ್ಥಳಾಂತರಗೊಂಡ ಕುಕಿ-ಜೋ ಸಮುದಾಯದ ಹೆಚ್ಚಿನ ಸಂಖ್ಯೆಯ ಜನರಿರುವ ಮಣಿಪುರದ ಪಕ್ಕದ ರಾಜ್ಯವಾದ ಮಿಜೋರಾಂಗೆ ಹೋಗಲಿಲ್ಲ. ಇದಲ್ಲದೆ ಮೇ.2023ರಿಂದ ಪ್ರಧಾನಿ ಮೋದಿ 14 ಅಂತರಾಷ್ಟ್ರೀಯ ಪ್ರವಾಸಗಳನ್ನು ಮಾಡಿದ್ದಾರೆ. ಇದು ಯುಎಇಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟಿಸುವ ಭೇಟಿಯನ್ನು ಒಳಗೊಂಡಿದೆ.

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...