Homeಮುಖಪುಟಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ.

- Advertisement -
- Advertisement -

ಭಾರೀ ಕುತೂಹಲ ಹುಟ್ಟಿಸಿರುವ ಮುಂದಿನ ವರ್ಷದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಬಿಜೆಪಿ ಹಠ ತೊಟ್ಟಿದೆ. ಇದಕ್ಕೆ ಮಾಧ್ಯಮಗಳನ್ನು ಸಾಕಷ್ಟು ಹೈಪ್ ನೀಡಿದರೆ, ಹಲವಾರು ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ಬಿಜೆಪಿ ಸೇರುತ್ತಿದ್ದಾರೆ. ಇಷ್ಟೆಲ್ಲದರ ನಡುವೆಯೂ ಬಿಜೆಪಿ ಅಲ್ಲಿ ಎರಡಂಕಿ ದಾಟಲು ಹೆಣಗಾಡುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ, ಬರೆದಿಟ್ಟುಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

ಈ ಟ್ವೀಟ್‌ ಅನ್ನು ಸೇವ್ ಮಾಡಿಕೊಳ್ಳಿ. ಒಂದು ವೇಳೆ ನನ್ನ ಊಹೆಗಿಂತ ಬಿಜೆಪಿ ಹೆಚ್ಚಿನ ಸಾಧನೆ ಮಾಡಿದರೆ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ.

ಪ್ರಶಾಂತ್ ಕಿಶೋರ್ ಭಾರತದ ರಾಜಕೀಯ ಚತುರ ಎಂದು ಹೆಸರು ಪಡೆದವರು. 2013 ರಲ್ಲಿ ನರೇಂದ್ರ ಮೋದಿ ಪರವಾಗಿ ಕೆಲಸ ಮಾಡಿದ್ದ ಅವರು ನಂತರ ಬಿಜೆಪಿಯಿಂದ ದೂರವಾಗಿದ್ದಾರೆ. ಆಂದ್ರದಲ್ಲಿ ಜಗನ್ ಪರ ಮತ್ತು ದೆಹಲಿಯಲ್ಲಿ ಕೇಜ್ರಿವಾಲ್ ಪರ ಸೇರಿದಂತೆ ಹಲವು ಯಶಸ್ವಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಸದ್ಯಕ್ಕೆ ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ತಮಿಳುನಾಡು ಚುನಾವಣೆಯಲ್ಲಿಯೂ ಸಹ ಡಿಎಂಕೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಕಿಶೋರ್ ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಎ ಎನ್‌ಆರ್‌ಸಿ ಪರ ಮತ ಹಾಕಿದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರದ ಯುವಜನರಿಗೆ ಉದ್ಯೋಗ ನೀಡುವುದರ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

0
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏ.19) ನಡೆಯಲಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದೇಶದ 107...