Homeಮುಖಪುಟಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

- Advertisement -
- Advertisement -

ಕಳೆದ ಹತ್ತು ದಿನಗಳಲ್ಲಿ ಪಶ್ಚಿಮ ಮತ್ತು ಪೂರ್ವ ಕರಾವಳಿಯಲ್ಲಿ ಎರಡು ಚಂಡಮಾರುತಗಳು ಬೀಸಿದವು. ಆದರೆ ದೇಶದ ಜನರು ತಮ್ಮ ಸಂಪೂರ್ಣ ಶಕ್ತಿಯೊಂದಿಗೆ ಹೋರಾಡಿ, ಕನಿಷ್ಠ ಪ್ರಾಣಹಾನಿಯೊಂದಿಗೆ ಅದನ್ನು ಎದರಿಸಿದರು. ಹಿಂದಿನ ಸಮಯಗಳಿಗೆ ಹೋಲಿಸಿದರೆ, ನಾವು ಗರಿಷ್ಠ ಜನರ ಜೀವಗಳನ್ನು ಉಳಿಸಲು ಸಮರ್ಥರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಮ್ಮ ಮಾಸಿಕ ಮನ್ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ 77 ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, “ಚಂಡಮಾರುತದಿಂದ ಪೀಡಿತ ಎಲ್ಲಾ ರಾಜ್ಯಗಳ ಜನರು ಈ ಕಷ್ಟಕರ ಮತ್ತು ಅಸಾಮಾನ್ಯ ಪರಿಸ್ಥಿತಿಯಲ್ಲಿ ಧೈರ್ಯವನ್ನು ತೋರಿಸಿದ್ದಾರೆ. ಅದಕ್ಕಾಗಿ ನಾನು ಎಲ್ಲಾ ನಾಗರಿಕರನ್ನು ಗೌರವಯುತವಾಗಿ ಪ್ರಶಂಸಿಸಲು ಬಯಸುತ್ತೇನೆ” ಎಂದರು.

“ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಮತ್ತು ಪೂರ್ವ ಕರಾವಳಿಯಲ್ಲಿ ಯಾಸ್ ಚಂಡಮಾರುತವನ್ನು ದೇಶ ಎದುರಿಸಿತು. ವಿಪತ್ತಿನ ಈ ಕಷ್ಟಕರ ಮತ್ತು ಅಸಾಧಾರಣ ಪರಿಸ್ಥಿತಿಯಲ್ಲಿ, ಚಂಡಮಾರುತಗಳಿಂದ ಪೀಡಿತವಾದ ಎಲ್ಲಾ ರಾಜ್ಯಗಳ ಜನರು ಬಹಳ ತಾಳ್ಮೆ ಮತ್ತು ಶಿಸ್ತಿನಿಂದ ಧೈರ್ಯವನ್ನು ತೋರಿಸಿದ್ದಾರೆ. ಈ ಸಂಕಷ್ಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಈ ಅನಾಹುತದ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಆಡಳಿತಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಏಕಕಾಲದಲ್ಲಿ ಕೋವಿಡ್ ಮತ್ತು ನೈಸರ್ಗಿಕ ವಿಕೋಪ ಎರಡನ್ನೂ ಎದುರಿಸಿದ್ದೇವೆ. ವಾಸ್ತವವಾಗಿ, ಕೋವಿಡ್ ವಿರುದ್ಧದ ಯುದ್ಧವು ತುಂಬಾ ದೊಡ್ಡದಾಗಿದೆ. ರೈಲ್ವೆಯಂತೆ ನಮ್ಮ ದೇಶವು ವಾಯುಮಾರ್ಗ, ಜಲಮಾರ್ಗ ಮತ್ತು ಭೂಮಾರ್ಗ ಸೇರಿ ಎಲ್ಲಾ ಮೂರು ಮಾರ್ಗಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ನಮ್ಮ ಅನೇಕ ವಿಜ್ಞಾನಿಗಳು, ತಜ್ಞರು ಮತ್ತು ಉದ್ಯಮದ ತಂತ್ರಜ್ಞರು ಈ ಹೋರಾಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲ ಜನರ ಕೆಲಸವನ್ನು ತಿಳಿದುಕೊಳ್ಳುವ ಮತ್ತು ಅರ್ಥಮಾಡಿಕೊಳ್ಳುವ ಕುತೂಹಲ ಎಲ್ಲಾ ನಾಗರಿಕರ ಮನಸ್ಸಿನಲ್ಲಿದೆ ಎಂದರು.

ಆಮ್ಲಜನಕ, ಆಮ್ಲಜನಕ ಸಾಂದ್ರಕಗಳು ಮತ್ತು ಕ್ರಯೋಜೆನಿಕ್ ಟ್ಯಾಂಕರ್‌ಗಳನ್ನು ವಿದೇಶದಿಂದ ದೇಶಕ್ಕೆ ತರಲಾಗುತ್ತಿದೆ. ಆದ್ದರಿಂದ, ಭಾರತೀಯ ನೌಕಾಪಡೆ, ವಾಯುಪಡೆ, ಸೇನೆ ಮತ್ತು ಡಿಆರ್‌ಡಿಒ ಮತ್ತು ನಮ್ಮ ಸಂಸ್ಥೆಗಳು ಸಹ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.
ಒಂದೆಡೆ, ಖಾಲಿ ಟ್ಯಾಂಕರ್‌ಗಳನ್ನು ವಾಯುಪಡೆಯ ವಿಮಾನಗಳು ಆಮ್ಲಜನಕ ಘಟಕಗಳಿಗೆ ಸಾಗಿಸುವ ಕೆಲಸ ನಡೆಯುತ್ತಿದ್ದು, ಮತ್ತೊಂದೆಡೆ ಹೊಸ ಆಮ್ಲಜನಕ ಸ್ಥಾವರಗಳ ನಿರ್ಮಾಣವೂ ಪೂರ್ಣಗೊಳ್ಳುತ್ತಿದೆ ಎಂದರು.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...