Homeಮುಖಪುಟಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

- Advertisement -
- Advertisement -

ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ಮುಖ್ಯವಾಗಿ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಪ್ರಯಾಣಿಸುವ ಕನಿಷ್ಠ 79 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ 160ಕ್ಕೂ ಹೆಚ್ಚು ವಿಮಾನಗಳಿಗೆ ಸರಣಿಯಾಗಿ ಬಾಂಬ್ ಬೆದರಿಕೆಗಳು ಬಂದಿವೆ. ಕಳೆದ 24 ಗಂಟೆಗಳಲ್ಲಿ

ಕಳೆದ ಒಂದು ದಿನದಲ್ಲಿ ಇಂಡಿಗೋದ 23 ವಿಮಾನಗಳು, ವಿಸ್ತಾರಾದ 21, ಅಕಾಸಾದಿಂದ 12 ಮತ್ತು ಏರ್ ಇಂಡಿಯಾದಿಂದ 23 ವಿಮಾನಗಳನ್ನು ಗುರಿಯಾಗಿಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಈ ವಾರ ವಿಮಾನಯಾನ ಸಂಸ್ಥೆಗಳಿಗೆ ಬಂದ ಒಟ್ಟು ಬೆದರಿಕೆ ಕರೆಗಳ ಸಂಖ್ಯೆ ಸುಮಾರು 169 ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚಿಗೆ ಬಂದ ಬಾಂಬ್ ಬೆದರಿಕೆಗಳು ಜಿದ್ದಾ, ಇಸ್ತಾಂಬುಲ್ ಮತ್ತು ರಿಯಾದ್‌ನಂತಹ ಪ್ರಮುಖ ಸ್ಥಳಗಳಿಗೆ ತೆರಳುತ್ತಿದ್ದ ವಿಮಾನಗಳನ್ನು ಗುರಿಯಾಗಿಸಿಕೊಂಡಿವೆ. ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಫ್ಲೈಟ್ 6E 164 ಬಾಂಬ್ ಬೆದರಿಕೆ ತೀರಾ ಇತ್ತಿಚೆಗೆ ಪಡೆದಿದೆ. ಈ ವೇಳೆ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಸಂಪೂರ್ಣ ಭದ್ರತಾ ತಪಾಸಣೆ ನಡೆಸಲಾಯಿತು ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ

ಅಂತೆಯೇ, ಅಹಮದಾಬಾದ್‌ನಿಂದ ಜಿದ್ದಾಗೆ ಪ್ರಯಾಣಿಸುತ್ತಿದ್ದ ಇಂಡಿಗೋದ 6E 75 ವಿಮಾನಕ್ಕೆ ಕೂಡಾ ಬಾಂಬ್ ಬೆದರಿಕೆ ಕರೆ ಮಾಡಲಾಗಿದ್ದು, ಲ್ಯಾಂಡಿಂಗ್ ನಂತರ ವಿಮಾನವನ್ನು ಐಸೋಲೇಶನ್ ಕರೆದೊಯ್ಯಲಾಯಿತು. ಅಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಅನುಸರಿಸಿ ಪರಿಶೀಲನೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದೇ ರೀತಿಯ ಬೆದರಿಕೆ ಕರೆಗಳನ್ನು ಇತರೆ ಇಂಡಿಗೋ ವಿಮಾನಗಳಿಗೂ ನೀಡಲಾಗಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಪುಣೆ ಪ್ರಯಾಣಿಸುವ ಫ್ಲೈಟ್ 6E 118, ಹೈದರಾಬಾದ್‌ನಿಂದ ಜಿದ್ದಾಗೆ ಪ್ರಯಾಣಿಸುವ 6E 67, ಇಸ್ತಾನ್‌ಬುಲ್‌ನಿಂದ ಮುಂಬೈಗೆ ಪ್ರಯಾಣಿಸುವ 6E 18, ದೆಹಲಿಯಿಂದ ದಮ್ಮಾಮ್‌ಗೆ ಪ್ರಯಾಣಿಸುವ 6E 83, ಬೆಂಗಳೂರಿನಿಂದ ಜಿದ್ದಾಗೆ ಪ್ರಯಾಣಿಸುವ 6E 77, ಇಸ್ತಾನ್‌ಬುಲ್‌ನಿಂದ ದೆಹಲಿಗೆ ಪ್ರಯಾಣಿಸುವ 6E 12, ಕೋಝಿಕ್ಕೋಡ್‌ನಿಂದ ಜಿದ್ದಾಗೆ ಪ್ರಯಾಣಿಸುವ 6E 65 ವಿಮಾನ ಮತ್ತು ದೆಹಲಿಯಿಂದ ಜಿದ್ದಾಗೆ ಪ್ರಯಾಣಿಸುವ 6E 63 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿವೆ.

ಸರಣಿ ಬಾಂಬ್ ಬೆದರಿಕೆ ಬಂದ ಹಿನ್ನಲೆ, ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳನ್ನು ಮಾಡುವುದನ್ನು ಗಂಭೀರ ಅಪರಾಧವನ್ನಾಗಿ ಮಾಡಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದರು. ಅವರ ಈ ಹೇಳಿಕೆಯ ನಂತರ ಕೂಡಾ ಬಾಂಬ್ ಬೆದರಿಕೆಯ ಸರಣಿ ಮುಂದುವರೆದಿದೆ.

ಕಳೆದ ಕೆಲವು ದಿನಗಳಲ್ಲಿ ಹಲವಾರು ವಿಮಾನಗಳು ಇಂತಹ ಹಲವಾರು ಕರೆಗಳನ್ನು ಸ್ವೀಕರಿಸಿವೆ. ಹಾಗಾಗಿ ದೇಶಾದ್ಯಂತ ವಿಮಾನ ಕಾರ್ಯಾಚರಣೆಗಳಿಗೆ ಗಂಭೀರವಾಗಿ ಅಡ್ಡಿಯಾಗಿವೆ.

ಶನಿವಾರ (ಅಕ್ಟೋಬರ್ 19)ದಂದು ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ಸಂಸ್ಥೆಯ 30ಕ್ಕೂ ಹೆಚ್ಚು ವಿಮಾನಗಳಿಗೆ ಇಂತಹ ಸಂದೇಶಗಳು ಬಂದಿವೆ. ಈ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​​​ಸೆಕ್ಯುರಿಟಿ (ಬಿಸಿಎಎಸ್) ಅಕ್ಟೋಬರ್ 19 ರಂದು ನವದೆಹಲಿಯಲ್ಲಿ ವಿಮಾನಯಾನ ಸಂಸ್ಥೆಗಳ ಸಿಇಒಗಳು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು.

ಇದನ್ನೂ ಓದಿ: ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ

ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...