Homeಮುಖಪುಟನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಪಕ್ಷ ಹೀನಾಯ ಸೋಲುಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ ಸದಾನಂದಗೌಡರ ಭಾವಚಿತ್ರಗಳಿರುವ ಬ್ಯಾನರ್‌ನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಚಪ್ಪಲಿ ಹಾರ ಹಾಕಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.

ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಬ್ಯಾನರ್ ಅಳವಡಿಸಿರುವ ಸಿಟ್ಟಿಗೆದ್ದ ಕಾರ್ಯಕರ್ತರು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಿದ್ದಾರೆ.

ಬ್ಯಾನರ್ ಬರಹದಲ್ಲಿ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು” ಎಂದು ಬರೆಯಲಾಗಿದೆ.

ಈ ಬ್ಯಾನರ್‌ನ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಪಕ್ಷವು ಆಶಾ ತಿಮ್ಮಪ್ಪ ಗೌಡರವರಿಗೆ ಟಿಕೆಟ್ ನೀಡಿತು. ಇದರಿಂದ ರೊಚ್ಚಿಗೆದ್ದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದು ಕಾಂಗ್ರೆಸ್ ಪಕ್ಷದ ಅರುಣ್ ಕುಮಾರ್ ರೈ ಗೆಲುವು ಸಾಧಿಸಿದರು. ಇದು ಅಲ್ಲಿನ ಕಾರ್ಯಕರ್ತರನ್ನು ಕೆರಳಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ....

0
ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು...