Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...