HomeUncategorizedಮೋದಿಯ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆ ಎದುರಿಸಲು ನಿರ್ಧರಿಸಿದ ಮಹಾಯುತಿ ಮೈತ್ರಿ!

ಮೋದಿಯ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆ ಎದುರಿಸಲು ನಿರ್ಧರಿಸಿದ ಮಹಾಯುತಿ ಮೈತ್ರಿ!

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಯ ಪಕ್ಷಗಳಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಲಿ ಸಿಎಂ ಏಕನಾಥ್ ಶಿಂಧೆ ಆಗಲಿ ಅಥವಾ ಬೇರೆ ಯಾರನ್ನೂ ಮುಖ್ಯಮಂತ್ರಿಯಾಗಿ ಬಿಂಬಿಸುವುದಿಲ್ಲ ಎಂದು ತೀರ್ಮಾನಿಸಿದೆ. ಪ್ರಧಾನಿ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆಯನ್ನು ಎದುರಿಸುವುದಾಗಿ ಮೈತ್ರಿಯು ನಿರ್ಧರಿಸಿದೆ. ಮೋದಿಯ ಹೆಸರಿನಲ್ಲಿ

ಮುಖ್ಯಮಂತ್ರಿ ಶಿಂಧೆ, ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ಹಿರಿಯ ನಾಯಕರನ್ನು ಭೇಟಿಯಾದಾಗ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಧಾನಿ ಮೋದಿ ಅವರ ಮುಖವನ್ನು ಚುನಾವಣೆಯಲ್ಲಿ ಮಹಾಯುತಿ ಪ್ರಮುಖವಾಗಿ ಜನರ ಮುಂದಿಡಲಿದೆ ಎಂದು ಮೂಲಗಳು ತಿಳಿಸಿವೆ.  “ಮೈತ್ರಿಯನ್ನು ಮುನ್ನಡೆಸುವ ನಾಯಕನನ್ನು ನಂತರ ನಿರ್ಧರಿಸಲಾಗುವುದು. ಚುನಾವಣಾ ಪೂರ್ವ ಅಥವಾ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ನೀಡಲು ಬಿಜೆಪಿ ನಿರಾಕರಿಸಿದೆ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ. ಮೋದಿಯ ಹೆಸರಿನಲ್ಲಿ

“ಮಹಾಯುತಿಯು ಎಲ್ಲಾ ಮೂರು ಪಕ್ಷಗಳ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗಳನ್ನು ಎದುರಿಸಲಿದೆ. ಆದರೆ ಬಿಜೆಪಿ ಅಥವಾ ಶಿವಸೇನೆ ಅಥವಾ ಎನ್‌ಸಿಪಿಯಿಂದ ಯಾವುದೇ ಪ್ರಮುಖ ನಾಯಕ ಅಥವಾ ಯಾವುದೇ ನಿರ್ದಿಷ್ಟ ಮುಖವನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲಾಗುವುದಿಲ್ಲ” ಎಂದು ಮತ್ತೊಂದು ಮೂಲಗಳು ತಿಳಿಸಿವೆ.

ಶುಕ್ರವಾರ ನಡೆದ ಸಭೆಯಲ್ಲಿ ರಾಜ್ಯದ ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 155-160 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಶಿಂಧೆ ನೇತೃತ್ವದ ಶಿವಸೇನೆ 80-85 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 50-55 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ದೆಹಲಿ ಸಭೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ ತಮ್ಮನ್ನು ಸಿಎಂ ಮುಖ ಎಂದು ಬಿಂಬಿಸಲು ಒತ್ತಾಯಿಸಿದರಾದರೂ, ಬಿಜೆಪಿ ನಾಯಕರು ಮತ್ತು ಅಜಿತ್ ಪವಾರ್ ಅದಕ್ಕೆ ಹಿಂಜರಿದರು ಎಂದು ವರದಿಯಾಗಿದೆ.

ಪ್ರಸ್ತುತ ಬಿಜೆಪಿ 105 ಶಾಸಕರನ್ನು ಹೊಂದಿದ್ದು, ಶಿಂಧೆ ಅವರ ಶಿವಸೇನೆ 56 ಮತ್ತು ಅಜಿತ್ ಪವಾರ್ ಅವರ ಪಕ್ಷವು 54 ಶಾಸಕರ ಬೆಂಬಲವನ್ನು ಹೊಂದಿದೆ. ಮಹಾಯುತಿಯ ಪ್ರಸ್ತುತ ಬಲದ ಪ್ರಕಾರ 210 ಸ್ಥಾನಗಳ ಬಗ್ಗೆ ಯಾವುದೇ ವಿವಾದವಿಲ್ಲ. ಉಳಿದ ಸ್ಥಾನಗಳನ್ನು ಮೈತ್ರಿಯಲ್ಲಿ ಹಂಚಿಕೆ ಮಾಡಲಾಗುತ್ತದೆ.

“ದೆಹಲಿ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ. ಕೆಲವೇ ಕೆಲವು ಅನಿಶ್ಚಿತ ಕ್ಷೇತ್ರಗಳಿವೆ. ಆದರೆ ಆಯಾ ಪಕ್ಷದ ನಾಯಕರು ಕ್ಷೇತ್ರಗಳ ವಿನಿಮಯ ಸೇರಿದಂತೆ ಹೊಂದಾಣಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಗೆಲ್ಲುವಿಕೆ, ಆಯಾ ಪಕ್ಷದ ಪ್ರಬಲ ಅಭ್ಯರ್ಥಿಯ ಉಪಸ್ಥಿತಿ ಆಧಾರದಲ್ಲಿ ಉಳಿದ ಸ್ಥಾನಗಳನ್ನು ನಿಯೋಜಿಸಲಾಗುತ್ತದೆ” ಎಂದು ಶಿವಸೇನೆಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಮತದಾಯ ನಡೆಯುತ್ತಿದ್ದು, ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...