Homeಮುಖಪುಟಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

- Advertisement -
- Advertisement -

2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಗುಜರಾತ್‌ನ ಗಾಂಧಿನಗರ ಸೆಷನ್ಸ್ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

10 ವರ್ಷಗಳ ಹಿಂದೆ ಸೂರತ್ ಮೂಲದ ಮಹಿಳೆಯೊಬ್ಬರು ಅಹಮದಾಬಾದ್‌ನ ಮೊಟೆರಾದಲ್ಲಿರುವ ಅವರ ಆಶ್ರಮದಲ್ಲಿದ್ದಾಗ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅಸಾರಾಂ ಬಾಪು ಅಪರಾಧಿ ಎಂದು ತೀರ್ಪು ನೀಡಿ ಜೈಲು ಪಾಲಾದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ ಇದಾಗಿದೆ.

2018 ರಲ್ಲಿ ಪ್ರತ್ಯೇಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯವು ಸ್ವಯಂ-ಘೋಷಿತ ದೇವಮಾನವನನ್ನು ತಪ್ಪಿತಸ್ಥನೆಂದು ಘೋಷಿಸಿದ ಈಗಾಗಲೇ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ. 2013ರಲ್ಲಿ, ರಾಜಸ್ಥಾನದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಅಸಾರಾಮ್ ಬಾಪುವನ್ನು ಬಂಧಿಸಿದ ನಂತರ, ಇಬ್ಬರು ಸೂರತ್ ಮೂಲದ ಮಹಿಳೆಯರು ಸ್ವಯಂ ಘೋಷಿತ ದೇವಮಾನವ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಲೈಂಗಿಕ ಶೋಷಣೆಯ ಆರೋಪ ಮಾಡಿದರು.

ಇದನ್ನೂ ಓದಿ:  ಸ್ವಯಂಘೋಷಿತ ದೇವಮಾನವ ಅಸಾರಾಂ ವಿರುದ್ಧ ಮತ್ತೊಂದು ರೇಪ್ ಕೇಸ್; ಇಂದು ತೀರ್ಪು ಸಾಧ್ಯತೆ

1997 ಮತ್ತು 2006ರ ನಡುವೆ ಅಸಾರಾಂನ ಅಹಮದಾಬಾದ್ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ತನ್ನ ಅಕ್ಕನ ಮೇಲೆ ಅಸಾರಾಂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಂಗಿ ಆರೋಪಿಸಿದ್ದಳು.

2002 ಮತ್ತು 2005 ರ ನಡುವೆ ಸೂರತ್‌ನ ಜಹಾಂಗೀರ್‌ಪುರ ಪ್ರದೇಶದಲ್ಲಿ ಅಸಾರಾಂ ಅವರ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ಅಸಾರಾಂ ಪುತ್ರ ನಾರಾಯಣ ಸಾಯಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಮಗಿಯು ಆರೋಪಿಸಿದರು.

2019ರಲ್ಲಿ ತಂಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾರಾಯಣ ಸಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಏನಿದು ಪ್ರಕರಣ?
ಅಸಾರಾಂ ವಿರುದ್ಧ ಕೇಸು ದಾಖಲಿಸಿದ ಮಹಿಳೆಯು, ಹಲವು ವರ್ಷಗಳಿಂದ ವಿವಿಧ ಆಶ್ರಮಗಳಲ್ಲಿ ಸ್ವಯಂಘೋಷಿತ ದೇವಮಾನವನಿಂದ ತನ್ನ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿ ನನ್ನನ್ನು ಬಂಧಿಯಾಗಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ 2013ರಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯಲ್ಲಿಒಟ್ಟು 68 ಜನರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ದಿವ್ಯಾ ರವಿಯಾ ಅವರಿಗೂ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರ ಮೇಲೆ ಆರೋಪ ಕೇಳಿಬಂದಿತ್ತು. ಸೋಮವಾರ ಗಾಂಧಿನಗರ ನ್ಯಾಯಾಲಯವು ಅತ್ಯಾಚಾರದ ಆರೋಪದಲ್ಲಿ ಅಸಾರಾಂನನ್ನು ದೋಷಿ ಎಂದು ಘೋಷಿಸಿತು ಮತ್ತು ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಿತು.

ಅಸಾರಾಂ ಅವರ ಪತ್ನಿ ಲಕ್ಷ್ಮಿ, ಮಗಳು ಭಾರತಿ ಮತ್ತು ನಾಲ್ವರು ಮಹಿಳಾ ಅನುಯಾಯಿಗಳಾದ ಧ್ರುವಬೆನ್, ನಿರ್ಮಲಾ, ಜಸ್ಸಿ ಮತ್ತು ಮೀರಾ ಕೂಡ ಆರೋಪಿಗಳಾಗಿದ್ದರು ಆದರೆ ಗಾಂಧಿನಗರ ನ್ಯಾಯಾಲಯವು  ಖುಲಾಸೆಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...