HomeಅಂಕಣಗಳುSIRಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

- Advertisement -
- Advertisement -

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ), ಬಿಜೆಪಿ ಶಾಸಕ ಮತ್ತು ಕುಮಾನ್ ವಿಭಾಗದ ಕಮಿಷನರ್ ಸೇರಿದಂತೆ ಹಲವರಿಗೆ ನೋಟೀಸ್‌ ನೀಡಲಾಗಿದೆ ಎಂದು ವರದಿಯಾಗಿದೆ.

ಅಧಿಕಾರಿಗಳ ಪ್ರಕಾರ, ಕಾಗುಣಿತ ದೋಷಗಳು, ಅಪೂರ್ಣ ಹೆಸರುಗಳು ಅಥವಾ ಹಳೆಯ ವಿಳಾಸಗಳಂತಹ ಮತದಾರರ ದಾಖಲೆಗಳಲ್ಲಿನ ಸಾಮಾನ್ಯ ವ್ಯತ್ಯಾಸಗಳ ಕಾರಣಕ್ಕೆ ಹೆಚ್ಚಿನ ನೋಟಿಸ್‌ಗಳನ್ನು ನೀಡಲಾಗಿದೆ ಎಂದು indiatoday.in ವರದಿ ಮಾಡಿದೆ.

ನೈನಿತಾಲ್‌ನಲ್ಲಿ, ಬಿಜೆಪಿ ಶಾಸಕಿ ಸರಿತಾ ಆರ್ಯ ಅವರ ಮನೆಗೆ ನೀಡಲಾದ ನೋಟಿಸ್‌ನಲ್ಲಿ ಶಾಸಕಿ ಮತ್ತು ಅವರ ಕಿರಿಯ ಮಗ ಇಬ್ಬರಿಗೂ ಸಂಬಂಧಿಸಿದ ಮತದಾರರ ಪರಿಶೀಲನಾ ವಿವರಗಳನ್ನು ಕೋರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಆಯೋಗದ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಅಭಿಯಾನದ ಸಮಯದಲ್ಲಿ ಕುಮಾನ್ ಆಯುಕ್ತ ದೀಪಕ್ ರಾವತ್ ಅವರ ಮನೆಗೂ ಇದೇ ರೀತಿಯ ನೋಟಿಸ್ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಬಿ.ವಿ.ಆರ್.ಸಿ ಪುರುಷೋತ್ತಮ್ ಅವರೂ ಸಹ ತಮ್ಮ ಹೆಸರಿನಲ್ಲಿ ಉಂಟಾದ ವ್ಯತ್ಯಾಸದ ಕಾರಣಕ್ಕೆ ನೋಟಿಸ್ ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗೆ (ಬಿಎಲ್‌ಒ) ಸಲ್ಲಿಸಿದ್ದಾರೆ.

ನೋಟೀಸ್‌ಗಳ ಬಗ್ಗೆ ಉಂಟಾಗಿರುವ ಆತಂಕವನ್ನು ದೂರ ಮಾಡಲು ಯತ್ನಿಸಿದ ಪುರುಷೋತ್ತಮ್ ಗುರುವಾರದಂದು ಮಾತನಾಡಿ, ಮತದಾರರು ಯಾವುದೇ ಕಾರಣಕ್ಕೂ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದು, ಹೆಸರು, ವಿಳಾಸ ಅಥವಾ ಇತರ ವಿವರಗಳಿಗೆ ಸಂಬಂಧಿಸಿದ ವ್ಯತ್ಯಾಸಗಳನ್ನು ಬೂತ್ ಮಟ್ಟದ ಅಧಿಕಾರಿಗೆ (ಬಿಎಲ್‌ಒ) ನಿಗದಿತ ದಾಖಲೆಗಳನ್ನು ಸಲ್ಲಿಸುವ ಮೂಲಕ ಸರಿಪಡಿಸಿಕೊಳ್ಳಬಹುದು ಎಂದಿದ್ದಾರೆ.

ಇಂತಹ ನೋಟೀಸ್‌ಗಳ ನೀಡುವಿಕೆಯು ಮತದಾರರ ದಾಖಲೆಗಳಲ್ಲಿರುವ ವ್ಯತ್ಯಾಸಗಳನ್ನು ಬಗೆಹರಿಸುವ ಗುರಿಯನ್ನು ಹೊಂದಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಒಂದು ಸಾಮಾನ್ಯ ಪ್ರಕ್ರಿಯೆ ಎಂದು ವಿವರಿಸಿದ್ದಾರೆ.

ಮತದಾರರ ಪಟ್ಟಿಯೊಂದಿಗೆ ಮ್ಯಾಪ್ ಮಾಡಲು ಸಾಧ್ಯವಾಗದ ಪ್ರಕರಣಗಳಿಗೆ ವಿಶೇಷ ಗಮನ ನೀಡಲಾಗುವುದು ಮತ್ತು ಅವುಗಳನ್ನು ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ಹಾಗೂ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (ಎಇಆರ್‌ಇ) ನಿರ್ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಅಡಿ ಜಾರಿಗೊಳಿಸಲಾದ 24.30 ಲಕ್ಷ ನೋಟೀಸ್‌ಗಳಲ್ಲಿ, ಈಗಾಗಲೇ ಸುಮಾರು 20.27 ಲಕ್ಷ ನೋಟೀಸ್‌ಗಳನ್ನು ಮತದಾರರಿಗೆ ತಲುಪಿಸಲಾಗಿದೆ ಎಂದು ಪುರುಷೋತ್ತಮ್ ತಿಳಿಸಿದ್ದಾರೆ.

ಇದೇ ವೇಳೆ, ನೈನಿತಾಲ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ನವಾಝಿಶ್ ಖಲಿಕ್ ಮಾತನಾಡಿ, ಮತದಾರರ ಪಟ್ಟಿಯು ನಿಖರವಾಗಿ, ನವೀಕರಿಸಲ್ಪಟ್ಟ ಮತ್ತು ದೋಷರಹಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಟ್ಟುನಿಟ್ಟಾಗಿ ಈ ಪರಿಶೀಲನಾ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ನಿಖರ ಮತ್ತು ನವೀಕರಿಸಿದ ಮತದಾರರ ಪಟ್ಟಿಗಳನ್ನು ಕಾಪಾಡಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ. ಮತದಾರರ ವಿವರಗಳನ್ನು ಪರಿಶೀಲಿಸಲು ಮತ್ತು ಅಗತ್ಯ ಮಾಹಿತಿಯನ್ನು ಸಂಗ್ರಹಿಸಲು ಬೂತ್ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಖಲಿಕ್ ಹೇಳಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಜಿಲ್ಲೆಯಾದ್ಯಂತ ಏಕರೂಪವಾಗಿ ಜಾರಿಗೊಳಿಸಲಾಗುತ್ತಿದ್ದು, ವ್ಯಕ್ತಿಯು ಸಾಮಾನ್ಯ ನಾಗರಿಕನಾಗಿರಲಿ ಅಥವಾ ಸಾಂವಿಧಾನಿಕ, ರಾಜಕೀಯ ಅಥವಾ ಆಡಳಿತಾತ್ಮಕ ಹುದ್ದೆಯನ್ನು ಹೊಂದಿರಲಿ, ಇದು ಅರ್ಹ ಮತದಾರರೆಲ್ಲರಿಗೂ ಅನ್ವಯಿಸುತ್ತದೆ ಎಂದಿದ್ದಾರೆ.

ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನೆರವಾಗುವಂತೆ, ಬೂತ್ ಮಟ್ಟದ ಅಧಿಕಾರಿಗಳಿಗೆ ಸಹಕರಿಸುವ ಹಾಗೂ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾ ಆಡಳಿತವು ನಿವಾಸಿಗಳಿಗೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...