Homeಮುಖಪುಟಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಸಾಮಾಜಿಕ ಮಾಧ್ಯಮವು ತನ್ನ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ಅಮಿತ್ ಶಾ ಅವರ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಬೇಕಾಯಿತು ಎಂದು ಟ್ವಿಟರ್ ವಕ್ತಾರರು ಮಾಹಿತಿ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಟ್ವಿಟರ್‌ ಖಾತೆಯಿಂದ ಅವರ ಪ್ರೊಫೈಲ್‌ ಚಿತ್ರವನ್ನು ಟ್ವಿಟ್ಟರ್ ತೆಗೆದುಹಾಕಿದೆ. ಕೆಲವು ದೋಷದಿಂದಾಗಿ, ಸಾಮಾಜಿಕ ಮಾಧ್ಯಮವು ತನ್ನ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ಅಮಿತ್ ಶಾ ಅವರ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಬೇಕಾಯಿತು ಎಂದು ಟ್ವಿಟರ್ ವಕ್ತಾರರು ಮಾಹಿತಿ ನೀಡಿದ್ದಾರೆ.

ಶಾ ಅವರ ಅಧಿಕೃತ ಖಾತೆಯ ಪ್ರೊಫೈಲ್‌ ಚಿತ್ರದ ಮೇಲೆ ಕ್ಲಿಕಿಸಿದರೆ, ‘ಮಾಧ್ಯಮವನ್ನು ಪ್ರದರ್ಶಿಸಲಾಗದು. ಕಾಪಿರೈಟ್‌ (ಕೃತಿಸ್ವಾಮ್ಯ) ಹೊಂದಿರುವವರ ವರದಿಗೆ ಪ್ರತಿಕ್ರಿಯೆಯಾಗಿ ಈ ಚಿತ್ರವನ್ನು ತೆಗೆದುಹಾಕಲಾಗಿದೆ’ ಎಂದು ತೋರಿಸಲಾಗುತ್ತಿತ್ತು. ಇದಕ್ಕೆ ಟ್ವಿಟರ್ ಈಗ ಪ್ರತಿಕ್ರಿಯೆ ನೀಡಿದ್ದು, ಅಜಾಗರೂಕತೆಯಿಂದ ಅದು ಸಂಭವಿಸಿದೆ ಎಂದಿದೆ.

’ಅಜಾಗರೂಕ ದೋಷದಿಂದಾಗಿ, ನಮ್ಮ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೇವು. ಈ  ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಲಾಗಿದೆ. ಸದ್ಯ ಖಾತೆಯು ಸಂಪೂರ್ಣವಾಗಿ ಕ್ರಿಯಾತ್ಮಕವಾಗಿದೆ” ಎಂದು ಟ್ವಿಟರ್‌ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ಗುರುವಾರ, 23.6 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಶಾ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಪ್ರೊಫೈಲ್‌ ಚಿತ್ರವನ್ನು ಅವರ ತೆಗೆದುಹಾಕಲಾಗಿತ್ತು. ಇದು “ಕೃತಿಸ್ವಾಮ್ಯ ಹೊಂದಿರುವವರ ವರದಿಗೆ” ಪ್ರತಿಕ್ರಿಯೆಯಾಗಿ ಎಂದು ತಿಳಿಸಲಾಗಿತ್ತು. ಪ್ರೊಫೈಲ್‌ ಚಿತ್ರವನ್ನು ಮರುಸ್ಥಾಪಿಸಿದ ಟ್ವಿಟರ್ ಇತರ ವಿವರಗಳನ್ನು ಹಂಚಿಕೊಂಡಿಲ್ಲ.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ಗೆ ನೋಟಿಸ್ ನೀಡಿತ್ತು. ಏಕೆಂದರೆ, ಟ್ವಿಟರ್‌ ಲಡಕ್ ಬದಲು ಲೇಹ್ ಅನ್ನು ಜಮ್ಮು ಮತ್ತು ಕಾಶ್ಮೀರದ ಭಾಗವಾಗಿ ತೋರಿತ್ತು. ಈ ಕುರಿತು ಟ್ವಿಟರ್‌ ವಿರುದ್ಧ ಕಾನೂನು ಕ್ರಮ ಏಕೆ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿ ಉತ್ತರಿಸುವಂತೆ ಐದು ದಿನಗಳ ಸಮಯ ನೀಡಿತ್ತು.


ಇದನ್ನೂ ಓದಿ: ಪಶ್ಚಿಮ ಬಂಗಾಳದ ವೈಭವ ಮರುಸ್ಥಾಪಿಸುವ ಅಗತ್ಯವಿದೆ: ಗೃಹ ಸಚಿವ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...